AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ಬೇಗೆಗೆ ಬೆಂದ ಕರ್ನಾಟಕ: ಬೆಂಗಳೂರು ಸೇರಿ ವಿವಿಧೆಡೆ ಹೀಟ್‌ವೇವ್ ಅಲರ್ಟ್

ಕರ್ನಾಟಕದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಕಲಬುರಗಿಯಲ್ಲಿ 45°C ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲೂ 37°C ತಲುಪುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಆರೆಂಜ್ ಹಾಗೂ ಯೆಲ್ಲೋ ಹೀಟ್‌ವೇವ್ ಅಲರ್ಟ್ ಘೋಷಿಸಿದ್ದು, ಕಲಬುರಗಿ ಜಿಲ್ಲಾಧಿಕಾರಿ ಮಧ್ಯಾಹ್ನದ ಹೊತ್ತಲ್ಲಿ ಅನಗತ್ಯ ಹೊರಗೆ ಓಡಾಡದಂತೆ ಸಲಹೆ ನೀಡಿದ್ದಾರೆ. ದಾಖಲೆ ಮಟ್ಟದ ಉಷ್ಣತೆಯಿಂದ ಜನ ಹೈರಾಣಾಗಿದ್ದಾರೆ.

ಬಿಸಿಲಿನ ಬೇಗೆಗೆ ಬೆಂದ ಕರ್ನಾಟಕ: ಬೆಂಗಳೂರು ಸೇರಿ ವಿವಿಧೆಡೆ ಹೀಟ್‌ವೇವ್ ಅಲರ್ಟ್
ಸಾಂದರ್ಭಿಕ ಚಿತ್ರImage Credit source: AI Image
ಪ್ರಸನ್ನ ಹೆಗಡೆ
|

Updated on:Apr 16, 2026 | 12:20 PM

Share

ಬೆಂಗಳೂರು, ಏಪ್ರಿಲ್​​ 16: ಬಿಸಿಲಿನ ಬೇಗೆಗೆ ಈಗಾಗಲೇ ಕರ್ನಾಟಕದ ಜನ ಬೆಂದು ಹೋಗಿದ್ದಾರೆ. ಈ ನಡುವೆ ರಾಜ್ಯದ ವಿವಿಧ ಭಾಗಗಳಲ್ಲಿ ಉಷ್ಣತೆ ದಿನೇದಿನೇ ಏರಿಕೆಯಾಗುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 44°–45°C ತಾಪಮಾನ ದಾಖಲಾಗಿದೆ. ಇತ್ತ ಬೆಂಗಳೂರಿನಲ್ಲಿ ಬುಧವಾರ 35.8°C ತಾಪಮಾನ ದಾಖಲಾಗಿರೋದು ಜನರನ್ನು ಕಂಗೆಡಿಸಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಏಪ್ರಿಲ್ ತಿಂಗಳ ಹಿಂದಿನ ದಾಖಲೆಗಳನ್ನು ಮೀರಿಸುವ ಮಟ್ಟದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರಲ್ಲಿ ಒಣಹವೆ

ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36°C ರಿಂದ 37°C ನಡುವೆ ಇರಲಿದ್ದು, ನಗರದಲ್ಲಿ ಒಣಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಬೆಂಗಳೂರಿನಲ್ಲಿ 36.6°C ಗರಿಷ್ಠ ತಾಪಮಾನ ದಾಖಲಾಗಿದ್ದು, 2026ರ ಅತ್ಯಂತ ಬಿಸಿಯಾದ ದಿನವಾಗಿತ್ತು. ಬುಧವಾರ ತಾಪಮಾನ 0.8°C ಇಳಿಕೆಯಾಗಿದ್ದರೂ, ಮುಂದಿನ ದಿನಗಳಲ್ಲಿ 38°C ತಲುಪುವ ಸಾಧ್ಯತೆ ಇದೆ ಎಂದು ಐಎಂಡಿ ಬೆಂಗಳೂರಿನ ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದ್ದರೂ, ಅದು ಸೀಮಿತ ಪ್ರದೇಶಗಳಿಗೆ ಮಾತ್ರ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಧಾರಿಸದ ಗಾಳಿಯ ಗುಣಮಟ್ಟ; ಹಲವು ಜಿಲ್ಲೆಗಳಲ್ಲಿ ‘ಕಳಪೆ’ ಮಟ್ಟಕ್ಕೆ ಕುಸಿತ!

ಅತ್ತ ಕಲ್ಯಾಣ ಕರ್ನಾಟಕ ಭಾಗಕ್ಕೆ ಮುಂದಿನ ಎರಡು ದಿನಗಳಿಗೆ ಆರೆಂಜ್ ಮತ್ತು ಯೆಲ್ಲೋ ಹೀಟ್‌ವೇವ್ ಅಲರ್ಟ್ ನೀಡಲಾಗಿದೆ. ಕಲಬುರಗಿಯಲ್ಲಿ ಅವ್ರಾದ್ ಬಿ ಪ್ರದೇಶದಲ್ಲಿ 45°C, ಚಿಂಚೋಳಿ ಮತ್ತು ಅಫ್ಜಲ್ಪುರದಲ್ಲಿ 44.03°C ಹಾಗೂ ಕಲಬುರಗಿ ನಗರದಲ್ಲಿ 42.1°C ತಾಪಮಾನ ದಾಖಲಾಗಿದೆ. ಇಲ್ಲಿ ತಾಪಮಾನ 45°C ಮೀರಿಸುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 3°C ರಿಂದ 4°C ಹೆಚ್ಚು ತಾಪಮಾನ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರಣ್ನುಮ್ ಅವರು ನಾಗರಿಕರಿಗೆ ಅಗತ್ಯವಿಲ್ಲದ ಹೊರಗಡೆ ಸಂಚಾರವನ್ನು ಬೆಳಿಗ್ಗೆ 11:30ರಿಂದ ಸಂಜೆ 5ರವರೆಗೆ ತಪ್ಪಿಸಲು ಸಲಹೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಬಿಸಿ ಮತ್ತು ತೇವಾಂಶಯುಕ್ತ ಹವಾಮಾನದ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:17 pm, Thu, 16 April 26

Follow Us
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ