ಜಿಲ್ಲೆ, ಸ್ವಕ್ಷೇತ್ರ ಬಿಟ್ಟು ಎಲ್ಲೂ ಹೋಗಬೇಡಿ: ಮಳೆ ನಿರ್ವಹಣೆಗೆ ಉಸ್ತುವಾರಿ ಸಚಿವರು, ಶಾಸಕರಿಗೆ ಸಿಎಂ ಯಡಿಯೂರಪ್ಪ ಸೂಚನೆ

ಮಳೆ, ನೆರೆಪೀಡಿತ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರೆ ಮಾಡಿ ಜಿಲ್ಲೆಯಲ್ಲೇ ಇರಲು ತಿಳಿಸಿದ್ದಾರೆ. ಪ್ರವಾಹದ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ, ಸಾಧ್ಯವಾದಲ್ಲಿ ಸಂಜೆ ವಿಡಿಯೋ ಕಾನ್ಫರೆನ್ಸ್ ಮಾಡಲು ಸೂಚನೆ ನೀಡಿದ್ದಾರೆ.

ಜಿಲ್ಲೆ, ಸ್ವಕ್ಷೇತ್ರ ಬಿಟ್ಟು ಎಲ್ಲೂ ಹೋಗಬೇಡಿ: ಮಳೆ ನಿರ್ವಹಣೆಗೆ ಉಸ್ತುವಾರಿ ಸಚಿವರು, ಶಾಸಕರಿಗೆ ಸಿಎಂ ಯಡಿಯೂರಪ್ಪ ಸೂಚನೆ
ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: Skanda

Updated on:Jul 23, 2021 | 1:22 PM

ಬೆಂಗಳೂರು: ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ತಲೆದೋರಿರುವ ಕಾರಣ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (CM B.S Yediyurappa), ಸಚಿವರೆಲ್ಲರೂ ತಮ್ಮ ತಮ್ಮ ಜಿಲ್ಲೆಗಳಲ್ಲೇ ಉಪಸ್ಥಿತರಾಗಿ ಜನರಿಗೆ ನೆರವಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಹಲವಡೆ ಭಾರೀ ಮಳೆ ಹಿನ್ನೆಲೆ ಟ್ವಿಟರ್ (Twitter)​ ಮೂಲಕ ಮಾಹಿತಿ ಹಂಚಿಕೊಂಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದ ಅನೇಕ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯ (Heavy Rain) ಹಿನ್ನಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರುಗಳು (District In-charge Ministers) ಮತ್ತು ಶಾಸಕರು (MLA) ತಮ್ಮ ತಮ್ಮ ಜಿಲ್ಲೆ ಹಾಗೂ ಕ್ಷೇತ್ರಗಳಲ್ಲಿ ಉಪಸ್ಥಿತರಿದ್ದು ಜನರಿಗೆ ನೆರವಾಗಬೇಕು, ರಕ್ಷಣೆ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸುತ್ತೇನೆ ಎನ್ನುವುದಾಗಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ಸಿಟಿ ರೌಂಡ್ಸ್ ವೇಳೆ ಉಸ್ತುವಾರಿ ಸಚಿವರಿಗೆ ಖುದ್ದಾಗಿ ಕರೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸೂಚನೆ ನೀಡಿದ್ದಾರೆ. ಮಳೆ, ನೆರೆಪೀಡಿತ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರೆ ಮಾಡಿ ಜಿಲ್ಲೆಯಲ್ಲೇ ಇರಲು ತಿಳಿಸಿದ್ದಾರೆ. ಪ್ರವಾಹದ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ, ಸಾಧ್ಯವಾದಲ್ಲಿ ಸಂಜೆ ವಿಡಿಯೋ ಕಾನ್ಫರೆನ್ಸ್ ಮಾಡಲು ಸೂಚನೆ ನೀಡಿದ್ದಾರೆ.

ಪರಿಸ್ಥಿತಿ ಅವಲೋಕನ, ಸಂತ್ರಸ್ತರಿಗೆ ಪುನರ್ವಸತಿ ಕಾರ್ಯಗಳಲ್ಲಿ ತೊಡಗಲು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ನಿರ್ದೇಶನ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸತತ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿ, ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ‌ ನಿಗಾ ವಹಿಸುವಂತೆ ಹಾಗೂ ಜನ ಜಾನುವಾರುಗಳ ಸುರಕ್ಷತೆಗೆ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೆಲವೆಡೆ 35 ಸೆಂ.ಮೀ ದಾಟಿದ ಮಳೆ ಪ್ರಮಾಣ.. ಗೋಡೆ ಕುಸಿದು ವೃದ್ಧ ಸಾವು, ದೋಣಿ ಮಗುಚಿ ವೃದ್ಧೆ ಕೊನೆಯುಸಿರು 

ಕರ್ನಾಟಕದಲ್ಲಿ ತಗ್ಗದ ಮಳೆ ಅಬ್ಬರ; ವರುಣನ ರೌದ್ರನರ್ತನಕ್ಕೆ ಹಲವೆಡೆ ರೆಡ್, ಆರೆಂಜ್ ಅಲರ್ಟ್​ ಘೋಷಣೆ

(Karnataka Heavy Rain CM BS Yediyurappa directs District In-charge Ministers and MLA’s to stay back in their respective districts and constituencies)

Published On - 12:38 pm, Fri, 23 July 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್