ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದ ಟೈಲರ್ ಅಂಗಡಿ ಮಾಲೀಕನ ಶಿರಚ್ಛೇದ ಪ್ರಕರಣ; ಕರ್ನಾಟಕದಾದ್ಯಂತ ಹೈ ಅಲರ್ಟ್

ಕೊಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನೂ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದ ಟೈಲರ್ ಅಂಗಡಿ ಮಾಲೀಕನ ಶಿರಚ್ಛೇದ ಪ್ರಕರಣ; ಕರ್ನಾಟಕದಾದ್ಯಂತ ಹೈ ಅಲರ್ಟ್
ಕರ್ನಾಟಕ ಪೊಲೀಸರು
Follow us
TV9 Web
| Updated By: sandhya thejappa

Updated on:Jun 29, 2022 | 12:30 PM

ಬೆಂಗಳೂರು: ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ (Udaipur) ನಿನ್ನೆ (ಜೂನ್ 28) ಹಿಂದೂ ಯುವಕನ ತಲೆ ಕತ್ತರಿಸಿರುವ ಘಟನೆ ನಡೆದಿದೆ. ಉದಯಪುರದ ಟೈಲರ್ ಅಂಗಡಿ ಮಾಲೀಕನಾದ ಕನ್ನಯ್ಯಲಾಲ್ನನ್ನು ಮುಸ್ಲಿಂ ಸಮುದಾಯದ ಇಬ್ಬರು ಕೊಲೆ ಮಾಡಿದ್ದಾರೆ. ಕೊಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನೂ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸದ್ಯ ಈ ಪ್ರಕರಣ ಬಾರೀ ಚರ್ಚೆಗೆ ಕಾರಣವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ನಗರದಲ್ಲಿ ಹೈ ಅಲರ್ಟ್ ಇರುವಂತೆ ಕಮಿಷನರ್ ಪ್ರತಾಪ್‌ ರೆಡ್ಡಿ ಅವರು ಮೌಖಿಕವಾಗಿ ಎಲ್ಲಾ ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು. ಬೀಟ್ ಪೊಲೀಸರು ಅಲರ್ಟ್ ಆಗಿರಬೇಕೆಂದು ಪ್ರತಾಪ್‌ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ: Mahesh Babu: ಪತ್ನಿ ನಮ್ರತಾ ಜತೆ ಬಿಲ್​ ಗೇಟ್ಸ್​ ಭೇಟಿ ಮಾಡಿದ ಮಹೇಶ್​ ಬಾಬು; ಫೋಟೋ ವೈರಲ್​

ಇದನ್ನೂ ಓದಿ
Image
Shivarajkumar: ‘ಬೈರಾಗಿ’ ಡೈಲಾಗ್​ಗಳು ಹೇಗಿವೆ? ರಿಲೀಸ್​ಗೂ ಮುಂಚೆ ವೇದಿಕೆಯಲ್ಲೇ ಝಲಕ್​ ತೋರಿಸಿದ ಶಿವಣ್ಣ
Image
Pavitra Lokesh: ಸೈಬರ್​ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರಾ ಲೋಕೇಶ್​; ಗಾಸಿಪ್​ ಹಬ್ಬಿಸಿದವರ ವಿರುದ್ಧ ಕಾನೂನು ಸಮರ
Image
Banaras: ಜಮೀರ್​ ಅಹ್ಮದ್​ ಪುತ್ರ ಜೈದ್​ ಖಾನ್​ ಬದ್ಧತೆಗೆ ಭೇಷ್​ ಎಂದ ‘ಬನಾರಸ್​’ ನಿರ್ದೇಶಕ ಜಯತೀರ್ಥ
Image
ನೆರೆ ಪೀಡಿತ ಅಸ್ಸಾಂಗೆ 25 ಲಕ್ಷ ರೂಪಾಯಿ ನೀಡಿದ ಆಮಿರ್ ಖಾನ್; ಧನ್ಯವಾದ ಹೇಳಿದ ಸಿಎಂ

ಕೊಲೆಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ: ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜಸ್ಥಾನದಲ್ಲಿ ನಡೆದ ಹತ್ಯೆ ಅತ್ಯಂತ ಅಮಾನುಷವಾಗಿದೆ. ಕೊಲೆ ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ನೀಡಬೇಕು. ಧರ್ಮದ ಹೆಸರಲ್ಲಿ ಇದೆಲ್ಲಾ ನಡೆಯಬಾರದು. ಅವರೆಲ್ಲಾ ಮತಾಂಧರು, ಜಗತ್ತಿನ ನೆಮ್ಮದಿ ಕೆಡಿಸಿದ್ದಾರೆ. ಬುದ್ಧಿ ಜೀವಿಗಳ ನಾಲಿಗೆಗೆ ಲಕ್ವಾ ಹೊಡೆದಿದೆಯಾ? ಎಂದು ಹೇಳಿದರು.

ಎಲ್ಲಾ ವರ್ಗದ ತಪ್ಪನ್ನೂ ಖಂಡಿಸಬೇಕು. ಕೇವಲ ಒಂದು ವರ್ಗದವ ಪರ ನಿಲ್ಲುವುದು, ಇನ್ನೊಂದು ವರ್ಗದ ವಿರುದ್ಧ ಮಾತಾಡುವುದು ಅಪಾಯಕಾರಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಮೆಗಾ ಬಂದರುಗಳ ನಿರ್ಮಾಣಕ್ಕೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಬಂದರುಗಳಿಗೆ ಕೇಂದ್ರದ ಸೂಚನೆ

ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕೆಂದು ಶ್ರೀರಾಮಸೇನೆ ಒತ್ತಾಯ: ಘಟನೆ ಖಂಡಿಸಿ ಧಾರವಾಡದ ಡಿಸಿ ಕಚೇರಿ ಬಳಿ ಶ್ರೀರಾಮಸೇನೆ ಸಂಘಟನೆ ಪ್ರತಿಭಟನೆ ನಡೆಸುತ್ತಿದೆ. ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದ್ದಾರೆ.

Published On - 12:00 pm, Wed, 29 June 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್