ಸಮವಸ್ತ್ರ ಜಾರಿ ಅಧಿಕಾರವನ್ನು ಕಾಲೇಜು ಅಭಿವೃದ್ದಿ ಸಮಿತಿಗೆ ನೀಡಲು ಸಾಧ್ಯವಿಲ್ಲ; ಹಿಜಾಬ್ ವಿಚಾರಣೆ ಮುಂದೂಡಿದ ಹೈಕೋರ್ಟ್

| Updated By: ganapathi bhat

Updated on: Feb 15, 2022 | 8:38 PM

ನಾಳೆ ಕಾಲೇಜುಗಳು ಆರಂಭವಾಗುತ್ತಿವೆ. ಹೀಗಾಗಿ ನಮ್ಮ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕು. ಅರ್ಜಿಯಲ್ಲಿ ವಿದ್ಯಾರ್ಥಿನಿಯರ ಸಹಿ ಇಲ್ಲ. ಹೀಗಾಗಿ ಮಧ್ಯಂತರ ಅರ್ಜಿ ಪರಿಗಣಿಸುವಂತಿಲ್ಲ ಎಂದು ಎಜಿ ಪ್ರಭುಲಿಂಗ್ ನಾವದಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಮವಸ್ತ್ರ ಜಾರಿ ಅಧಿಕಾರವನ್ನು ಕಾಲೇಜು ಅಭಿವೃದ್ದಿ ಸಮಿತಿಗೆ ನೀಡಲು ಸಾಧ್ಯವಿಲ್ಲ; ಹಿಜಾಬ್ ವಿಚಾರಣೆ ಮುಂದೂಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us on

ಬೆಂಗಳೂರು: ಕಾಲೇಜು ಅಭಿವೃದ್ದಿ ಸಮಿತಿಗೆ ಕಾಯ್ದೆಯಡಿ ಅಧಿಕಾರವಿಲ್ಲ. ಹೀಗಾಗಿ ಸಮವಸ್ತ್ರ ಜಾರಿ ಅಧಿಕಾರ ಸಮಿತಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಹಿಜಾಬ್ ವಿವಾದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಾಳೆಗೆ (ಫೆಬ್ರವರಿ 16) ಮುಂದೂಡಿದೆ. ನಾಳೆಗೆ ವಾದಮಂಡನೆ ಮುಂದುವರಿಸಲು ಹೈಕೋರ್ಟ್ ಸೂಚನೆ ನೀಡಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಮತ್ತೆ ವಿಚಾರಣೆ ನಡೆಯಲಿದೆ. ನಾಳೆ ಕಾಲೇಜುಗಳು ಆರಂಭವಾಗುತ್ತಿವೆ. ಹೀಗಾಗಿ ನಮ್ಮ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕು. ಅರ್ಜಿಯಲ್ಲಿ ವಿದ್ಯಾರ್ಥಿನಿಯರ ಸಹಿ ಇಲ್ಲ. ಹೀಗಾಗಿ ಮಧ್ಯಂತರ ಅರ್ಜಿ ಪರಿಗಣಿಸುವಂತಿಲ್ಲ ಎಂದು ಎಜಿ ಪ್ರಭುಲಿಂಗ್ ನಾವದಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಕೀಲರ ಸಹಿಯೊಂದಿಗೆ ಅರ್ಜಿ ಸಲ್ಲಿಸುವುದು ಸರಿಯಲ್ಲ. ವಿದ್ಯಾರ್ಥಿನಿಯರ ಸಮ್ಮತಿ ಮೇರೆಗೆ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ನನ್ನ ಸಹಿಯಿರುವ ಅರ್ಜಿ ಪರಿಗಣಿಸಬೇಕು. ವಿದ್ಯಾರ್ಥಿನಿಯರ ಪರ ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದಾರೆ. ಅರ್ಜಿಯಲ್ಲಿ ವಿದ್ಯಾರ್ಥಿನಿಯರ ಸಹಿ ಇಲ್ಲ. ವಿದ್ಯಾರ್ಥಿನಿಯೇ ಪ್ರಮಾಣಪತ್ರಕ್ಕೆ ಸಹಿ ಹಾಕಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ವಜಾಗೊಳಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನು ಸುವ್ಯವಸ್ಥೆಯ ವಿವಾದಕ್ಕೆ ಹೋಗುವುದಿಲ್ಲ ಇದು ಅವ್ಯವಸ್ಥೆ ಎಂದು ರವಿವರ್ಮಕುಮಾರ್ ಮತ್ತೆ ಸರ್ಕಾರದ ಆದೇಶ ಓದಿದ್ದಾರೆ. ಸರ್ಕಾರ ಸಮವಸ್ತ್ರಕ್ಕಾಗಿಯೇ ಉನ್ನತ ಸಮಿತಿ ರಚಿಸಿದೆ. ಹೀಗಾಗಿ ಸಮವಸ್ತ್ರ ಧರಿಸಬೇಕು ಎಂಬುದೇ ಅರ್ಥಹೀನ. ಸಮವಸ್ತ್ರ ಸಂಹಿತೆ ರಚಿಸದೇ ಸಮವಸ್ತ್ರಕ್ಕೆ ಸೂಚಿಸುವುದು ಸರಿಯಲ್ಲ. ಹಿಜಾಬ್ ಧರಿಸಲು ಯಾವುದೇ ನಿರ್ಬಂಧವಿಲ್ಲ. ಸಮಾನತೆ, ಸಾಮರಸ್ಯಕ್ಕೆ ಧಕ್ಕೆಯಾಗುವ ಬಟ್ಟೆ ನಾವು ಧರಿಸುತ್ತಿಲ್ಲ ಎಂದು ಕರ್ನಾಟಕ ಶಿಕ್ಷಣ ಕಾಯ್ದೆಯ ಸೆಕ್ಷನ್​ಗಳ ಬಗ್ಗೆ ವಕೀಲರು ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ಹಿಜಾಬ್‌ ಜತೆ ಇದೀಗ ಮತ್ತೊಂದು ವಿವಾದ; ದಾವಣಗೆರೆಯಲ್ಲಿ ತಲೆಗೆ ಬಿಳಿ ಟೊಪ್ಪಿಗೆ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿಗಳು

ಇದನ್ನೂ ಓದಿ: ಹಿಜಾಬ್ ವಿವಾದ ಹಿನ್ನೆಲೆ: ಜಮ್ಮು- ಕಾಶ್ಮೀರದ ವಿದ್ಯಾರ್ಥಿಗಳ ಬಳಿ ಮಾಹಿತಿ ಕೇಳಿದ ಆಂತರಿಕ ಭದ್ರತಾ ದಳ

Published On - 6:45 pm, Tue, 15 February 22