ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ

ಚನ್ನರಾಯಪಟ್ಟಣದಲ್ಲಿ ಅಕ್ರಮವಾಗಿ ಗೋವಧೆ ಆರೋಪ ಕೇಳಿಬಂದಿತ್ತು. ಗೋ ಗ್ಯಾನ್ ಫೌಂಡೇಷನ್ ಈ ಸಂಬಂಧ ಪಿಐಎಲ್ ಸಲ್ಲಿಸಿತ್ತು. ಇದೀಗ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲಿಸಲು ಸೂಚನೆ ಕೊಡಲಾಗಿದೆ.

ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ
ಕರ್ನಾಟಕ ಹೈಕೋರ್ಟ್​
Follow us
TV9 Web
| Updated By: ganapathi bhat

Updated on: Dec 01, 2021 | 4:56 PM

ಬೆಂಗಳೂರು: ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ಕೊಟ್ಟಿದೆ. ಎಲ್ಲಾ ಜಿಲ್ಲೆಗಳಲ್ಲೂ ಅಕ್ರಮ ಪ್ರಾಣಿವಧೆ ತಡೆಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಚನ್ನರಾಯಪಟ್ಟಣದಲ್ಲಿ ಅಕ್ರಮವಾಗಿ ಗೋವಧೆ ಆರೋಪ ಕೇಳಿಬಂದಿತ್ತು. ಗೋ ಗ್ಯಾನ್ ಫೌಂಡೇಷನ್ ಈ ಸಂಬಂಧ ಪಿಐಎಲ್ ಸಲ್ಲಿಸಿತ್ತು. ಇದೀಗ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲಿಸಲು ಸೂಚನೆ ಕೊಡಲಾಗಿದೆ.

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯ ಸಾಧಕ ಬಾಧಕ ಬಗ್ಗೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಮೌಲ್ಯಮಾಪನಕ್ಕೆ ಆದೇಶ ಹೊರಡಿಸಲಾಗಿದೆ. ಯೋಜನೆಯ ಸಾಧಕ ಬಾಧಕದ ಬಗ್ಗೆ ಮೌಲ್ಯಮಾಪನಕ್ಕೆ ಸೂಚನೆ ನೀಡಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠದಿಂದ ನಿರ್ದೇಶನ ಸಿಕ್ಕಿದ್ದು 40 ವರ್ಷಗಳಿಂದ ಬಾಕಿಯಿರುವ ರೈಲು ಯೋಜನೆ ಪ್ರಶ್ನಿಸಿ ಕೆಲ ಪರಿಸರ ಸಂರಕ್ಷಣಾ ಸಂಘಗಳು ಪಿಐಎಲ್ ಸಲ್ಲಿಸಿದ್ದವು. ಹೈಕೋರ್ಟ್ ರಾಜ್ಯ ವನ್ಯಜೀವಿ ಮಂಡಳಿ ಆದೇಶಕ್ಕೆ ತಡೆ ನೀಡಿತ್ತು. ಇದೀಗ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ರೈಲು ಮಾರ್ಗದ ಮೌಲ್ಯಮಾಪನ ನಡೆಸಿ ವರದಿಗೆ ಸೂಚಿಸಿದೆ.

ಉತ್ತರ ಕರ್ನಾಟಕ ಹಾಗೂ ಕರಾವಳಿಗೆ ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆಯಾಗಿರುವ ಈ ರೈಲು ಮಾರ್ಗ ಪ್ರಸ್ತಾವನೆಯನ್ನು 1998ರಲ್ಲೇ ಸಲ್ಲಿಸಲಾಗಿತ್ತು. ಅಂದಿನಿಂದಲೂ ಯೋಜನೆಗೆ ಪರಿಸರವಾದಿಗಳು ಹಾಗೂ ವನ್ಯಜೀವಿ ಸಂರಕ್ಷಕರ ವಿರೋಧವಿದೆ. ಒಂದೊಮ್ಮೆ ಯೋಜನೆ ಜಾರಿಯಾದರೆ ಉತ್ತರ ಕನ್ನಡದ ಪಶ್ಚಿಮ ಘಟ್ಟದ ಭಾಗದಲ್ಲಿ 2.2 ಲಕ್ಷ ಮರಗಳ ಮಾರಣಹೋಮವಾಗುತ್ತದೆ.

ರೈಲು ಮಾರ್ಗ ಹಾದು ಹೋಗುವ ಕಾಡಿನ ಪ್ರದೇಶ ಪರಿಸರದ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿದೆ. ಒಂದು ವೇಳೆ ಯೋಜನೆಗೆ ಅನುಮೋದನೆ ದೊರೆತರೆ ಅಳಿವಿನಂಚಿನಲ್ಲಿರುವ ಅಪರೂಪದ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಸಂಚಕಾರ ಬರಲಿದೆ. ಅಲ್ಲದೇ ಕಾಳಿ ಕಣಿವೆಯಲ್ಲಿರುವ ನದಿಗಳ ಸಹಜ ಹರಿವಿನ ಮೇಲೂ ಪರಿಣಾಮ ಬೀರಲಿದೆ. ಇದು ಸ್ವಾಭಾವಿಕ ಪರಿಸರ ವ್ಯವಸ್ಥೆಗೆ ಧಕ್ಕೆಯಾಗಲಿದ್ದು, ಹವಾಮಾನ ಬದಲಾವಣೆಗೂ ಕಾರಣವಾಗಲಿದೆ ಎಂಬುದು ಪರಿಸರವಾದಿಗಳು ಮತ್ತು ವನ್ಯಜೀವಿ ಪ್ರಿಯರ ವಾದವಾಗಿದೆ. ಹೀಗಾಗಿ ಈ ಯೋಜನೆ ಬಗ್ಗೆ ವಿರೋಧವಿತ್ತು. ಸದ್ಯ ಇದೀಗ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ರೈಲು ಮಾರ್ಗದ ಮೌಲ್ಯಮಾಪನ ನಡೆಸಿ ವರದಿಗೆ ಸೂಚಿಸಿದೆ.

ಇದನ್ನೂ ಓದಿ: Crime News: ಅಕ್ರಮ ಗೋಸಾಗಾಟ ಮಾಡುತ್ತಿದ್ದ ವಾಹನ ಬೆನ್ನತ್ತಿದ ಯುವಕರು, ಲಾರಿ ಚಾಲಕನ ಅಜಾಗ್ರತೆಯಿಂದ ಉರುಳಿದ 9 ಕಂಬ

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ಮತ್ತಷ್ಟು ಬಿಗಿ; ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯುತ್ತೇವೆ: ಪ್ರಭು ಚೌಹಾಣ್

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ