AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಮರಗಳ ಸ್ಥಳಾಂತರಕ್ಕೆ ಹೈಕೋರ್ಟ್ ಒಪ್ಪಿಗೆ; ವೇಗ ಪಡೆದುಕೊಳ್ಳಲಿದೆ ಬೆಂಗಳೂರು ಮೆಟ್ರೋ ಕಾಮಗಾರಿ

Namma Metro: ಮೆಟ್ರೋ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವಂತೆ, ಅವರು ಮಾರ್ಚ್ 2019ರಿಂದ ಕೋರ್ಟ್​ನ ಅನುಮತಿಗಾಗಿ ಕಾಯುತ್ತಿದ್ದರು. ಇದೀಗ ಎರಡು ವರ್ಷದ ಬಳಿಕ, ನಿಧಾನವಾಗಿ ಸಾಗುತ್ತಿದ್ದ ನಾಗಾವರದಿಂದ ಡೈರಿ ಸರ್ಕಲ್​ನ ಅಂಡರ್​ಗ್ರೌಂಡ್ ಕಾಮಗಾರಿಗೆ ವೇಗ ಲಭಿಸಿದೆ.

Bengaluru Metro: ಮರಗಳ ಸ್ಥಳಾಂತರಕ್ಕೆ ಹೈಕೋರ್ಟ್ ಒಪ್ಪಿಗೆ; ವೇಗ ಪಡೆದುಕೊಳ್ಳಲಿದೆ ಬೆಂಗಳೂರು ಮೆಟ್ರೋ ಕಾಮಗಾರಿ
ಬೆಂಗಳೂರು ಮೆಟ್ರೋ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Aug 09, 2021 | 11:07 PM

Share

ಬೆಂಗಳೂರು: ಮೆಟ್ರೋ ರೈಲು ಮಾರ್ಗ ನಿರ್ಮಾಣಕ್ಕೆ ಅನುಕೂಲವಾಗುವಂತೆ 348 ಮರಗಳನ್ನು ಸ್ಥಳಾಂತರ ಮಾಡಲು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ಗೆ ಒಪ್ಪಿಗೆ ನೀಡಿತ್ತು. ಇದರಿಂದಾಗಿ, ಎರಡನೇ ಹಂತದ ಅಂಡರ್​ಗ್ರೌಂಡ್ ಮೆಟ್ರೋ ಕಾರಿಡರ್ ನಿರ್ಮಾಣಕ್ಕೆ ವೇಗ ಸಿಕ್ಕಿದೆ ಎಂದು ಮೆಟ್ರೋ ಅಧಿಕಾರಿಗಳು ಹೇಳಿದ್ದಾರೆ. ಕರ್ನಾಟಕ ಹೈಕೋರ್ಟ್ ಜುಲೈ 15ರಂದು 348 ಮರಗಳನ್ನು ಸ್ಥಳಾಂತರಿಸಲು ಹಾಗೂ 4,000 ಗಿಡಗಳನ್ನು ಬದಲಿಯಾಗಿ ನೆಡಲು ತಿಳಿಸಿ ಮೆಟ್ರೋ ಕಾಮಗಾರಿಗೆ ಅನುವು ಮಾಡಿಕೊಟ್ಟಿತ್ತು.

ಮೆಟ್ರೋ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವಂತೆ, ಅವರು ಮಾರ್ಚ್ 2019ರಿಂದ ಕೋರ್ಟ್​ನ ಅನುಮತಿಗಾಗಿ ಕಾಯುತ್ತಿದ್ದರು. ಇದೀಗ ಎರಡು ವರ್ಷದ ಬಳಿಕ, ನಿಧಾನವಾಗಿ ಸಾಗುತ್ತಿದ್ದ ನಾಗಾವರದಿಂದ ಡೈರಿ ಸರ್ಕಲ್​ನ ಅಂಡರ್​ಗ್ರೌಂಡ್ ಕಾಮಗಾರಿಗೆ ವೇಗ ಲಭಿಸಿದೆ. ಈಗ ನಾವು ಈ ಕಾಮಗಾರಿ ಆರಂಭಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. 13.92 ಕಿಲೋ ಮೀಟರ್​ನ ನಾಗಾವರ- ಕಳೇನ ಅಗ್ರಹಾರ (ಗೊಟ್ಟಿಗೆರೆ) ಲೈನ್​ನಲ್ಲಿ, ಒಟ್ಟು 522 ಮರಗಳನ್ನು ಸ್ಥಳಾಂತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಮರಗಳ ಸ್ಥಳಾಂತರ ಕಾರ್ಯವು ಕನಿಷ್ಠ ಎರಡು ತಿಂಗಳ ಕಾಲ ನಡೆಯುತ್ತದೆ. ಆದರೆ, ಕಡಿಯಬೇಕಾಗಿರುವ ಮರಗಳನ್ನು ಈಗಾಗಲೇ ಕಡಿದಾಗಿದೆ ಎಂದು ಮತ್ತೋರ್ವ ಮೆಟ್ರೋ ಅಧಿಕಾರಿ ಮಾಹಿತಿ ನೀಡಿದ್ದಾರೆ. ನಾವು ಈ ಮೊದಲು ಬಹಳಷ್ಟು ಸಮಯದಿಂದ ಡೈರಿ ಸರ್ಕಲ್, ನಾಗಾವರ, ಲ್ಯಾಂಗ್​ಫೋರ್ಡ್ ಸ್ಟೇಷನ್ ಹಾಘೂ ಎಮ್​ಜಿ ರಸ್ತೆಯಲ್ಲಿ ಉಳಿದಿದ್ದ ಮೆಟ್ರೋ ಕಾಮಗಾರಿಯನ್ನು ಈಗ ಆರಂಭಿಸಿದ್ದೇವೆ. ಕೋರ್ಟ್ ಆದೇಶ ಬಂದಿದ್ದು, ಇದರಿಂದ ಪಿಂಕ್ ಲೈನ್ ಕಾಮಗಾರಿ ವೇಗ ಪಡೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ನಾಗಾವರ ಹಾಗೂ ಸುತ್ತಮುತ್ತ ಅತಿಹೆಚ್ಚು ಅಂದರೆ, 56 ಮರಗಳನ್ನು ಕಡಿಯಬೇಕಾಗಿದೆ ಹಾಗೂ 22 ಮರಗಳನ್ನು ಸ್ಥಳಾಂತರಿಸಬೇಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಿಎಮ್​ಆರ್​ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೆಜ್, ಮೆಟ್ರೋ ಎರಡನೇ ಹಂತದ ಕಾಮಗಾರಿಗೆ ಒಟ್ಟು 5,500 ಮರಗಳನ್ನು ಸ್ಥಳಾಂತರ ನಡೆಸಬೇಕಾಗಿದೆ ಹಾಗೂ 50,000 ಮರಗಳನ್ನು ನೆಡಬೇಕಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Metro: ಗಮನಿಸಿ, ಆಗಸ್ಟ್ 11,12 ರಂದು ವಿಜಯನಗರ-ಮೈಸೂರು ರಸ್ತೆಯ ಮೆಟ್ರೋ ಮಾರ್ಗದಲ್ಲಿ ಸೇವೆ ಇರದು

Bengaluru Metro: ರಾತ್ರಿ ಕರ್ಫ್ಯೂ ಹಿನ್ನೆಲೆ; ಮೆಟ್ರೋ ರೈಲು ಕಾರ್ಯನಿರ್ವಹಿಸುವ ಅವಧಿಯಲ್ಲಿ ಬದಲಾವಣೆ

(Karnataka High Court agrees to Transplant Trees for Bengaluru Namma Metro Work)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ