ಬೆಂಗಳೂರು ನಗರಕ್ಕೆ ಎಷ್ಟು ಶೌಚಾಲಯ ಬೇಕು? ಕೊರತೆ ಎಷ್ಟು? ಮಾಹಿತಿ ನೀಡಲು ಹೈಕೋರ್ಟ್ ಸೂಚನೆ

ಲೋಕಲ್‌ ಸೆಲ್ಫ್ ಗವರ್ನೆನ್ಸ್ ಸಂಸ್ಥೆಯ ಹೈಕೋರ್ಟ್​ಗೆ ಸಲ್ಲಿಸಿದ ಸರ್ವೆಯಲ್ಲಿ ಇತರೆ ನಗರಕ್ಕೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಶೌಚಾಲಯಗಳ ಸಂಖ್ಯೆ ಕಡಿಮೆಯಿದೆ. ಇರುವ ಶೌಚಾಲಯಗಳ ನಿರ್ವಹಣೆಯೂ ಉತ್ತಮವಾಗಿಲ್ಲ. ಸಾಮುದಾಯಿಕ ಶೌಚಾಲಯಗಳಲ್ಲಿ ಶುಚಿತ್ವದ ಕೊರತೆಯಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ನಗರಕ್ಕೆ ಎಷ್ಟು ಶೌಚಾಲಯ ಬೇಕು? ಕೊರತೆ ಎಷ್ಟು? ಮಾಹಿತಿ ನೀಡಲು ಹೈಕೋರ್ಟ್ ಸೂಚನೆ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: guruganesh bhat

Updated on:Jul 01, 2021 | 4:02 PM

ಬೆಂಗಳೂರು: ಬೆಂಗಳೂರಿಗೆ ಎಷ್ಟು ಶೌಚಾಲಯಗಳ ಅಗತ್ಯವಿದೆ. ಪ್ರತಿ ವಾರ್ಡ್‌ನಲ್ಲಿ ಎಷ್ಟು ಶೌಚಾಲಯಗಳ ಕೊರತೆಯಿದೆ ಎಂಬ ಮಾಹಿತಿ ನೀಡಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ಕೊರತೆ ಕುರಿತು ಲೆಟ್ಜ್ ಕಿಟ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೌಚಾಲಯಗಳ ನೈರ್ಮಲ್ಯಕ್ಕೆ ಗಮನ ನೀಡಬೇಕು. ಕೈಗೊಂಡ ಕ್ರಮದ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸೂಚನೆ ನೀಡಿತು.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಲೆಟ್ಜ್ ಕಿಟ್ ಫೌಂಡೇಷನ್, ನ್ಲೋಕಲ್‌ ಸೆಲ್ಫ್ ಗವರ್ನೆನ್ಸ್ ಸಂಸ್ಥೆಯ ಸರ್ವೆ ವರದಿ ಹೈಕೋರ್ಟ್ ಸಲ್ಲಿಸಿತು. ಇತರೆ ನಗರಕ್ಕೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಶೌಚಾಲಯಗಳ ಸಂಖ್ಯೆ ಕಡಿಮೆಯಿದೆ. ಇರುವ ಶೌಚಾಲಯಗಳ ನಿರ್ವಹಣೆಯೂ ಉತ್ತಮವಾಗಿಲ್ಲ. ಸಾಮುದಾಯಿಕ ಶೌಚಾಲಯಗಳಲ್ಲಿ ಶುಚಿತ್ವದ ಕೊರತೆಯಿದೆ ಎಂದು ಅಭಿಪ್ರಾಯಪಟ್ಟು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಡಲಾದ ಶಿಫಾರಸುಗಳನ್ನು ಹೈಕೋರ್ಟ್​ಗೆ ಸಲ್ಲಿಸಿತು. ಈ ಶಿಫಾರಸುಗಳನ್ನು ಅವಲೋಕಿಸಿದ ಹೈಕೋರ್ಟ್, ಬೆಂಗಳೂರು ನಗರದಲ್ಲಿ ಅಗತ್ಯವಿರುವ ಶೌಚಾಲಯಗಳ ಸಂಖ್ಯೆಯನ್ನು ಪರಿಶೀಲಿಸಿ ಸಲ್ಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೂಚಿಸಿತು.

ಉತ್ತಮ ಫುಟ್‌ಪಾತ್ ಹೊಂದುವುದು ಜನರ ಹಕ್ಕು: ಹೈಕೋರ್ಟ್ ಗರಂ ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್‌ಗಳ ಒತ್ತುವರಿಯಾಗಿ, ಅದು ಪಾದಚಾರಿಗಳಿಗೆ ದಕ್ಕದೆ ಯಾವುದೋ ಕಾಲವಾಗಿದೆ ಎಂಬುದು ಇಂದಿಗೂ ಹಳೆಯ ಬೆಂಗಳೂರಿಗರ ಕೂಗು, ಕೊರಗು. ಸರ್ಕಾರ ಯಾವುದೇ ಬಂದರೂ ಫುಟ್‌ಪಾತ್‌ಗಳ ಒತ್ತುವರಿ ತೆರವು ಇತ್ಯರ್ಥವಾಗುವುದಿಲ್ಲ. ಹಾಗಾಗಿ ಜನ ಗೊಣಗಿಕೊಳ್ಳುತ್ತಲೇ ಅದೇ ರಸ್ತೆಗಳಲ್ಲಿ ಅಸಹಾಯಕರಾಗಿ ಹೆಜ್ಜೆ ಹಾಕುತ್ತಾರೆ ಅನ್ನುತ್ತಾರೆ ಬೆಂಗಳೂರಿನ ಹಿರಿಯ ತಲೆಗಳು. ಹಾಗಂತ ಈ ಫುಟ್‌ಪಾತ್‌ಗಳ ಒತ್ತುವರಿ ಎಂಬ ಭೂತ ಬೆಂಗಳೂರಿಗೆ ಮಾತ್ರ ಸೀಮಿತ ಅಂತಲ್ಲ; ಯಾವುದೇ ನಗರ, ಪಟ್ಟಣಕ್ಕೆ ಹೋದರೂ ಇದು ಸರ್ವೇಸಾಮಾನ್ಯವಾಗಿಬಿಟ್ಟಿದೆ.

ಈ ಮಧ್ಯೆ, ‘ಫುಟ್‌ಪಾತ್‌ಗಳಲ್ಲಿ ಒತ್ತುವರಿ ತೆರವು ವಿಚಾರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಅರಿವು ಮೂಡಿಸಲು ಬಿಬಿಎಂಪಿ ಕೂಡಾ ಜಾಹೀರಾತು ನೀಡಿದೆ ಎಂದು ಸರ್ಕಾರಿ ವಕೀಲರು ಹೈಕೋರ್ಟ್​​​ಗೆ ಇಂದು ಮಾಹಿತಿ ಸಲ್ಲಿಸಿದ್ದಾರೆ.

ಫುಟ್‌ಪಾತ್‌ಗಳನ್ನು ಒತ್ತುವರಿ ಮುಕ್ತಗೊಳಿಸಬೇಕು. ಉತ್ತಮ ಸ್ಥಿತಿಯಲ್ಲಿ ಫುಟ್‌ಪಾತ್ ಹೊಂದುವುದು ಜನರ ಹಕ್ಕು ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ. ಆದೇಶ ಪಾಲಿಸದಿದ್ದರೆ ಸ್ವತಂತ್ರ ಏಜೆನ್ಸಿ ರಚನೆ ಮಾಡಬೇಕಾಗುತ್ತದೆ. ಫುಟ್‌ಪಾತ್ ಒತ್ತುವರಿ ತೆರವಿಗೆ ಏಜೆನ್ಸಿ ರಚಿಸುವ ಎಚ್ಚರಿಕೆ ನೀಡಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 5ಕ್ಕೆ ಮುಂದೂಡಿತು.

ಇದನ್ನೂ ಓದಿ: 

ಕೆಲವೇ ಜಾತಿಗೆ ಮಾತ್ರ ನಿಗಮ ಏಕೆ: ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಗುಲ್ಶನ್ ಕುಮಾರ್ ಹತ್ಯೆ ಪ್ರಕರಣ: ದಾವೂದ್ ಸಹಚರ ಅಬ್ದುಲ್ ರೌಫ್ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಬಾಂಬೆ ಹೈಕೋರ್ಟ್

( Karnataka High Court asks BBMP to give information on How much toilet does Bengaluru need How much is scarcity)

Published On - 3:46 pm, Thu, 1 July 21

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್