Bengaluru Potholes: ಗುಂಡಿ ಮುಚ್ಚದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ, ಗುಣಮಟ್ಟ ಖಾತ್ರಿಯ ಹೊಣೆ ಹೆದ್ದಾರಿ ಪ್ರಾಧಿಕಾರಕ್ಕೆ

ಬಿಬಿಎಂಪಿಯು ರಸ್ತೆ ಗುಂಡಿಯ ಯಥಾಸ್ಥಿತಿ ವರದಿಯನ್ನು ಒಂದು ವಾರದ ಒಳಗೆ ಹೆದ್ದಾರಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಹೇಳಿದೆ.

Bengaluru Potholes: ಗುಂಡಿ ಮುಚ್ಚದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ, ಗುಣಮಟ್ಟ ಖಾತ್ರಿಯ ಹೊಣೆ ಹೆದ್ದಾರಿ ಪ್ರಾಧಿಕಾರಕ್ಕೆ
ಬೆಂಗಳೂರಿನ ರಸ್ತೆ ಗುಂಡಿಗಳು (ಎಡಚಿತ್ರ) ಮತ್ತು ಕರ್ನಾಟಕ ಹೈಕೋರ್ಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 02, 2022 | 2:47 PM

ಬೆಂಗಳೂರು: ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚುವುದು ಬಿಬಿಎಂಪಿಯ ಸಾಂವಿಧಾನಿಕ ಹೊಣೆ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಹೇಳಿತು. ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳ (Bengaluru Potholes) ಸಮಸ್ಯೆ ಕುರಿತ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ‘ನಗರದಲ್ಲಿ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುವುದಕ್ಕೆ ಸಂಬಂಧಿಸಿದ ಆದೇಶಗಳು ಕಾಗದದಲ್ಲಿಯೇ ಉಳಿದಿವೆ. ಬೆಂಗಳೂರಿನ ರಸ್ತೆಗಳು ಆರು ವರ್ಷಗಳಿಂದ ದುಸ್ಥಿತಿಯಲ್ಲಿವೆ. ನಿವಾಸಿಗಳು ಸತತ ಸಂಕಷ್ಟ ಎದುರಿಸುತ್ತಿದ್ದಾರೆ. ರಸ್ತೆಗುಂಡಿಗಳಿಂದಾಗಿ ಅಮೂಲ್ಯ ಜೀವಗಳು ಬಲಿಯಾಗುತ್ತಿವೆ. ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಪಾಲಿಕೆಯೇ ದೃಢೀಕರಣ ಕೊಟ್ಟುಕೊಳ್ಳುವುದು ಸರಿಯಲ್ಲ’ ಎಂದು ಅಭಿಪ್ರಾಯಪಟ್ಟಿತು.

ಗುಂಡಿಮುಚ್ಚುವ ಹೊಣೆ ಹೊತ್ತ ಬಿಬಿಎಂಪಿಯೇ ಗುಣಮಟ್ಟ ಖಾತ್ರಿಯ ಪ್ರಮಾಣಪತ್ರ ಕೊಟ್ಟುಕೊಳ್ಳುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಗುಣಮಟ್ಟ ಪರಿಶೀಲನೆ ಹೊಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (National Highway Authority of India – NHAI) ವಹಿಸಲಾಗುವುದು. ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಸ್ವತಃ ತಾವೇ ಅಥವಾ ಇತರ ಹಿರಿಯ ಎಂಜಿನಿಯರ್ ಅವರನ್ನು ನಿಯೋಜಿಸಿ ನಿಯೋಜಿಸಿ ಕಾಮಗಾರಿಯನ್ನು ಪರಿಶೀಲಿಸಬೇಕು ಎಂದು ಸೂಚಿಸಿತು.

ಬಿಬಿಎಂಪಿಯು ರಸ್ತೆ ಗುಂಡಿಯ ಯಥಾಸ್ಥಿತಿ ವರದಿಯನ್ನು ಒಂದು ವಾರದ ಒಳಗೆ ಹೆದ್ದಾರಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು. ಎನ್ಎಚ್​ಎಐ ನಿಯೋಜಿಸುವ ಅಧಿಕಾರಿಯು ಸ್ಥಳ ಪರಿಶೀಲಿಸಬೇಕು. ಎನ್ಎಚ್​ಎಐಗೆ ಬಿಬಿಎಂಪಿಯು ಎಲ್ಲ ರೀತಿಯ ಸಹಕಾರ ನೀಡಬೇಕು. ರಸ್ತೆ ಗುಣಮಟ್ಟದ ಬಗ್ಗೆ ಎನ್ಎಚ್​ಎಐ ಹೈಕೋರ್ಟ್​ಗೆ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ತಾಕೀತು ಮಾಡಿತು. ಹೆದ್ದಾರಿ ಪ್ರಾಧಿಕಾರವು ಬಿಬಿಎಂಪಿ ಅಧಿಕಾರಿಗಳು, ಗುತ್ತಿಗೆದಾರರ ಕರ್ತವ್ಯಲೋಪದ ಬಗ್ಗೆಯೂ ವರದಿಯಲ್ಲಿ ಅಭಿಪ್ರಾಯ ದಾಖಲಿಸಬಹುದು. ಬೆಂಗಳೂರಿನ ರಸ್ತೆ ಗುಂಡಿಗಳ ನಿರ್ವಹಣೆ ಬಗ್ಗೆ ಸಲಹೆಗಳನ್ನೂ ವರದಿ ಮೂಲಕ ಹೈಕೋರ್ಟ್​ಗೆ ಸಲ್ಲಿಸಬಹುದು. ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯನ್ನು ಬಿಬಿಎಂಪಿ ಮುಂದುವರಿಸಬೇಕು ಎಂದು ಸೂಚಿಸಿದ ಹೈಕೋರ್ಟ್​ ಡಿಸೆಂಬರ್ 7ಕ್ಕೆ ಪ್ರಕರಣದ ವಿಚಾರಣೆ ಮುಂದೂಡಿತು.

ನ 10 ರೊಳಗೆ ಬೆಂಗಳೂರು ನಗರ ಗುಂಡಿ ಮುಕ್ತ ನಗರ

ಬೆಂಗಳೂರು ನಗರದ ರಸ್ತೆಗಳಲ್ಲಿರುವ ಗುಂಡಿಗಳನ್ನು ನ 10ರ ಒಳಗೆ ಮುಚ್ಚುತ್ತೇವೆ. ಬೆಂಗಳೂರು ಸಂಪೂರ್ಣವಾಗಿ ಗುಂಡಿಮುಕ್ತ ನಗರವಾಗಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದರು. ರಾಜ್ಯೋತ್ಸವ ಕಾರ್ಯಕರ್ತರ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ಗುಂಡಿಗಳನ್ನು ಮುಚ್ಚುವ ಮತ್ತು ತುಂಬುವ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ನ 10 ರ ಒಳಗೆ ಬೆಂಗಳೂರು ನಗರವು ಗುಂಡಿಮುಕ್ತವಾಗಲಿದೆ ಎಂದು ತಿಳಿಸಿದರು.

ನಗರದಲ್ಲಿ ಪ್ರತಿದಿನ ಸುಮಾರು 1,000 ಗುಂಡಿಗಳನ್ನು ಮುಚ್ಚಲಾಗುತ್ತಿದೆ. ನ 6 ರ ವೇಳೆಗೆ ನಾವು ಗುರಿಯ 95 ರಷ್ಟು ಮುಟ್ಟುತ್ತೇವೆ. ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Published On - 2:47 pm, Wed, 2 November 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ