AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ

ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಆದೇಶಿಸಿದೆ.

ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on:Jul 03, 2023 | 10:29 PM

Share

ಬೆಂಗಳೂರು: ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ 10 ವಿದ್ಯಾರ್ಥಿಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ (Karnataka High Court) ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ (Mother Mary Nursing College) ಆದೇಶಿಸಿದೆ. ಪ್ರವೇಶದ ಅವಧಿ ಮುಗಿದ ಮೇಲೂ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಿದ ಹಿನ್ನೆಲೆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ನ್ಯಾ.ಸೂರಜ್ ಗೋವಿಂದರಾಜ್​ ಅವರಿದ್ದ ಏಕಸದಸ್ಯ ಪೀಠ ನಿರ್ದೇಶನ ನೀಡಿದೆ.

ವಿದ್ಯಾರ್ಥಿಗಳನ್ನು ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ ಸೇರಿಸುವ ಕೊನೆಯ ದಿನಾಂಕ 2022ರ ಏಪ್ರಿಲ್ 7 ಆಗಿತ್ತು. ಈ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳದೆ ಮುಕ್ತಾಯದ ನಂತರ ನಕಲಿ ಪ್ರವೇಶ ದಾಖಲು ಮಾಡಿ ದಾಖಲಾತಿ ಆಗಿದೆ ಎಂದು ಸೂಚಿಸಿಲಾಗಿತ್ತು. ಅಲ್ಲದೆ, ದಾಖಲೆಗಳನ್ನು ಅಪ್​ಲೋಡ್ ಮಾಡದೆ ನಕಲಿ ದಾಖಲಾತಿ ರಿಜಿಸ್ಟರ್​ ಹೆಸರಿನಲ್ಲಿ ಶುಲ್ಕು ವಸೂಲಿ ಮಾಡಲಾಗಿತ್ತು. ಕೊನೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗಲಿಲ್ಲ. ಆ ಮೂಲಕ ಬಿಎಸ್​ಸಿ ನರ್ಸಿಂಗ್ ವ್ಯಾಸಾಂಗದ ಕನಸು ಹೊತ್ತುಕೊಂಡಿರುವ ವಿದ್ಯಾರ್ಥಿಗಳ ಬಾಳಲ್ಲಿ ಮದರ್ ಮೇರಿ ನರ್ಸಿಂಗ್ ಕಾಲೇಜು ಚೆಲ್ಲಾಟ ಆಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Mon, 3 July 23

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್