ಕಾನೂನು ಪದವಿಗೆ ತೃತೀಯ ಲಿಂಗಿಗೆ ಪ್ರವೇಶ ನೀಡುವಂತೆ ಎನ್‌ಎಲ್‌ಎಸ್‌ಐಯುಗೆ ಹೈಕೋರ್ಟ್​​ ಸೂಚನೆ

ಕಾನೂನು ಪದವಿ ಪ್ರವೇಶ ನಿರಾಕರಿಸಿರುವ ಎನ್​​​ಎಲ್​​ಎಸ್​ಐಯು ಕ್ರಮವನ್ನು ಪ್ರಶ್ನಿಸಿ ಲೈಂಗಿಕ ಅಲ್ಪಸಂಖ್ಯಾತರ ಅಭ್ಯರ್ಥಿ ಮುಗಿಲ್​​ ಅನ್ಬು ವಸಂತ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​​​ನ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ಏಕಸದಸ್ಯ ನ್ಯಾಯಪೀಠ ಪ್ರವೇಶ ನೀಡುವಂತೆ ಮಧ್ಯಂತರ ಆದೇಶ ನೀಡಿದೆ.

ಕಾನೂನು ಪದವಿಗೆ ತೃತೀಯ ಲಿಂಗಿಗೆ ಪ್ರವೇಶ ನೀಡುವಂತೆ ಎನ್‌ಎಲ್‌ಎಸ್‌ಐಯುಗೆ ಹೈಕೋರ್ಟ್​​ ಸೂಚನೆ
ಹೈಕೋರ್ಟ್​
Follow us
ವಿವೇಕ ಬಿರಾದಾರ
|

Updated on:Aug 23, 2023 | 11:12 AM

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೂರು ವರ್ಷದ ಎಲ್‌ಎಲ್‌ಬಿ ಕೋರ್ಸ್‌ (ಕಾನೂನು ಪದವಿ) (LLB)ಗೆ ತೃತೀಯ ಲಿಂಗಿ ಅರ್ಹವಾಗಿದ್ದಲ್ಲಿ ಪ್ರವೇಶ ಕಲ್ಪಿಸುವಂತೆ  ಕರ್ನಾಟಕ ಹೈಕೋರ್ಟ್ (High Court) ಮಂಗಳವಾರ ಬೆಂಗಳೂರಿನ ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆ (NSILU) ಗೆ ನಿರ್ದೇಶನ ನೀಡಿದೆ. ತಮಗೆ ಕಾನೂನು ಪದವಿ ಪ್ರವೇಶ ನಿರಾಕರಿಸಿರುವ ಎನ್​​​ಎಲ್​​ಎಸ್​ಐಯು ಕ್ರಮ ಪ್ರಶ್ನಿಸಿ ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿ ಮುಗಿಲ್​​ ಅನ್ಬು ವಸಂತ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ಏಕಸದಸ್ಯ ನ್ಯಾಯಪೀಠ, ಈ ಮಧ್ಯಂತರ ಆದೇಶ ನೀಡಿದೆ. ಅಲ್ಲದೇ ಅರ್ಜಿದಾರರ ಪ್ರವೇಶವು ಅಂತಿಮ ಫಲಿತಾಂಶ ಮತ್ತು ಅರ್ಹತೆಯ ಮಾನದಂಡಗಳಿಗೆ ಒಳಪಟ್ಟಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಅರ್ಜಿದಾರರು ಸಾಮಾನ್ಯ ವರ್ಗದ ಅಡಿಯಲ್ಲಿ ಮೂರು ವರ್ಷಗಳ ಎಲ್‌ಎಲ್‌ಬಿ ಕೋರ್ಸ್‌ಗೆ ಎನ್‌ಎಲ್‌ಎಸ್‌ಐಯು ನಡೆಸಿದ ಅಖಿಲ ಭಾರತ ಪ್ರವೇಶ ಪರೀಕ್ಷೆಗೆ ಅರ್ಜಿಸಲ್ಲಿಸುವಾಗ ತಾನು ತೃತೀಯಲಿಂಗಿ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಅರ್ಜಿದಾರರು ಪ್ರವೇಶ ಪರೀಕ್ಷೆಯಲ್ಲಿ ಭಾಗ Aನಲ್ಲಿ ಶೇ 96 ರಷ್ಟು ಅಂಕ ಮತ್ತು ಭಾಗ Bಯಲ್ಲಿ ಶೇ 83.40 ಅಂಕ ಗಳಿಸಿದ್ದಾರೆ. ಆದರೂ ಪ್ರವೇಶ ನೀಡಲ್ಲ. ಅಲ್ಲದೇ ಎನ್‌ಎಲ್‌ಎಸ್‌ಐಯು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ರ್ಯಾಂಕ್ ಪಟ್ಟಿ ಅಥವಾ ಪ್ರವೇಶ ಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಅವ್ಯವಸ್ಥೆ ಪ್ರಶ್ನಿಸಿ ಕಾನೂನು ವಿದ್ಯಾರ್ಥಿಗಳಿಂದ ಹೈಕೋರ್ಟ್​​ಗೆ ಪಿಐಎಲ್​: ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮನವಿ

ಕಾಯಿದೆ ಉಲ್ಲಂಘನೆ

ತೃತೀಯಲಿಂಗಿ ಹಕ್ಕುಗಳ ರಕ್ಷಣೆ ಕಾಯಿದೆ 2019 ಮತ್ತು ಕರ್ನಾಟಕ ರಾಜ್ಯ ತೃತೀಯಲಿಂಗಿ ಹಕ್ಕುಗಳ ರಕ್ಷಣೆ ಕಾಯಿದೆ 2017 ರ ನಿಬಂಧನೆಗಳನ್ನು ಜಾರಿಗೊಳಿಸಲು ವಿಫಲವಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ. ತೃತೀಯಲಿಂಗಿ ಹಕ್ಕುಗಳ ರಕ್ಷಣೆ ಕಾಯಿದೆಯು ಶಿಕ್ಷಣ ಸಂಸ್ಥೆಗಳು ಮತ್ತು ಸೇವೆಗಳಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಯಾವುದೇ ಲಿಂಗ ತಾರತಮ್ಯ ನಿಷೇಧಿಸುತ್ತದೆ. ಮತ್ತು ಎನ್‌ಎಲ್‌ಎಸ್‌ಐಯು ಈ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:41 am, Wed, 23 August 23

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ