AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟ್ರಾಫಿಕ್ ತಪ್ಪಿಸಲು ಮೆಟ್ರೊ ವಿಸ್ತರಣೆಗೆ ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ

ಅತ್ಯಂತ ಹೆಚ್ಚು ವಾಹನ ದಟ್ಟನೆ ಹೊಂದಿರುವ ದೇಶದ ನಗರಗಳಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಕೂಡ ಒಂದು. ನಗರದಲ್ಲಿ ವಾಹನ ದಟ್ಟಣೆಯನ್ನು ತಪ್ಪಿಸಲು ಮೆಟ್ರೋ ವಿಸ್ತರಣೆ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳುವಂತೆ ಹೈಕೋರ್ಟ್ ಸಲಹೆ ನೀಡಿದ್ದು, ಶಾಲಾ ಕಾಲೇಜು, ಕಂಪನಿ, ಕೈಗಾರಿಕೆಗಳ ಪ್ರತಿನಿಧಿಗಳಂದಿಗೆ ಚರ್ಚಿಸುವಂತೆ ಸೂಚಿಸಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್ ತಪ್ಪಿಸಲು ಮೆಟ್ರೊ ವಿಸ್ತರಣೆಗೆ ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ
ಬೆಂಗಳೂರು ವಾಹನ ದಟ್ಟಣೆ ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಲಹೆ ನೀಡಿದ ಕರ್ನಾಟಕ ಹೈಕೋರ್ಟ್
Ramesha M
| Updated By: Rakesh Nayak Manchi|

Updated on: Sep 12, 2023 | 9:00 PM

Share

ಬೆಂಗಳೂರು, ಸೆ.12: ನಗರದಲ್ಲಿ ವಾಹನ ದಟ್ಟಣೆಯನ್ನು (Bengaluru Traffic) ತಪ್ಪಿಸಲು ಮೆಟ್ರೋ (Bengaluru Metro) ವಿಸ್ತರಣೆ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ (Karnataka High Court) ಸಲಹೆ ನೀಡಿದೆ. ಅಲ್ಲದೆ, ಆರು ವಾರಗಳಲ್ಲಿ ಪ್ರಗತಿ ವರದಿ, ಅನುಪಾಲನಾ ವರದಿ ಸಲ್ಲಿಸಲು ನಿರ್ದೇಶನ ನೀಡಿದೆ.

ವಾಹನ ದಟ್ಟಣೆ ಸಂಬಂಧ ಶಾಲಾ ಕಾಲೇಜುಗಳು,‌ ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಸಲಹೆ ನೀಡಿದ ನ್ಯಾ. ಪ್ರಸನ್ನ ಬಿ.ವರಾಳೆ,‌ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಕಂಪನಿಗಳ ಪ್ರತಿನಿಧಿಗಳ ಸಭೆ ಕರೆದು ಚರ್ಚೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್

ಅಲ್ಲದೆ, ನಗರದಲ್ಲಿ ಮೆಟ್ರೋ ಸಂಚಾರ ನಿಯಂತ್ರಣದಲ್ಲಿ ಮೆಟ್ರೋ ರೈಲು ಪ್ರಮುಖ ಪಾತ್ರವಹಿಸುತ್ತಿದೆ. ಹೀಗಾಗಿ ಮೆಟ್ರೊ ರೈಲು ಮಾರ್ಗ ವಿಸ್ತರಣೆ ಸೇರಿದಂತೆ ಪ್ರಮುಖ ಕ್ರಮಗಳನ್ನು ಕೈಗೊಳ್ಳುವಂತೆ ಪೀಠ ಸೂಚನೆ ನೀಡಿದೆ.

ಹೈಕೋರ್ಟ್​ನ ಇಬ್ಬರು ನ್ಯಾಯಮೂರ್ತಿಗಳ ನೇಮಕ ಖಾಯಂ

ಕರ್ನಾಟಕ ಹೈಕೋರ್ಟ್​ನ ಇಬ್ಬರು ನ್ಯಾಯಮೂರ್ತಿಗಳಾದ ನ್ಯಾ.ಅನಂತ್ ರಾಮನಾಥ ಹೆಗಡೆ, ನ್ಯಾ.ಕೆ.ಎಸ್.ಹೇಮಲೇಖ ಅವರ ನೇಮಕವನ್ನು ಖಾಯಂಗೊಳಿಸಲಾಗಿದೆ. ಅಲ್ಲದೆ, ಒಂದು ವರ್ಷದ ಅವಧಿಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಸಿದ್ದಯ್ಯ ರಾಚಯ್ಯ ಅವರನ್ನು ಮುಂದುವರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ