ಜೀವನಾಂಶ ಕೋರಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದ ಹೈಕೋರ್ಟ್

ಜೀವನಾಶಮ ಅರ್ಜಿಗಳನ್ನು 60 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ ಕೆಲವು ಪ್ರಕರಣಗಳಲ್ಲಿ ಅರ್ಜಿಗಳು ವರ್ಷಗಳಿಂದ ಬಾಕಿ ಇವೆ. ವಿಳಂಬದಿಂದಾಗಿ‌ ಜೀವನಾಂಶ ಕೋರಿದ ಅರ್ಜಿಗಳ ಉದ್ದೇಶವೇ ನಿರರ್ಥಕವಾಗಲಿವೆ ಎಂದು ಹೈಕೋರ್ಟ್ ಹೇಳಿದೆ.

ಜೀವನಾಂಶ ಕೋರಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: Rakesh Nayak Manchi

Updated on: Feb 10, 2023 | 6:30 PM

ಬೆಂಗಳೂರು: ಕೌಟುಂಬಿಕ ಕಲಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೀವನಾಂಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಕೆಲವೊಂದು ಅರ್ಜಿಗಳು ವರ್ಷಗಳಿಂದ ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಮನಿಸಿದ ಹೈಕೋರ್ಟ್ (Karnataka High Court), ಇಂತಹ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸುವಂತೆ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿದೆ. 60 ದಿನಗಳಲ್ಲಿ ಅರ್ಜಿಗಳನ್ನು ಇತ್ಯರ್ಥಪಡಿಸಬೇಕೆಂದು ನಿಯಮವಿದೆ. ಆದರೆ ಕೆಲವು ಪ್ರಕರಣಗಳು ವರ್ಷಗಳಿಂದ ಬಾಕಿ ಉಳಿದಿದ್ದು, ವಿಳಂಬದಿಂದಾಗಿ‌ ಜೀವನಾಂಶ ಕೋರಿದ ಅರ್ಜಿಗಳ ಉದ್ದೇಶವೇ ನಿರರ್ಥಕವಾಗಲಿವೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಹೇಳಿದೆ.

ಜೀವನಾಂಶ ಕೋರಿ ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 24ರಡಿ ಅರ್ಜಿ ಸಲ್ಲಿಸಬಹುದಾಗಿದೆ. ಹೀಗೆ ಸಲ್ಲಿಕೆಯಾದ ಅರ್ಜಿಗಳನ್ನು 60 ದಿನಗಳಲ್ಲಿ ಇತ್ಯರ್ಥ ಮಾಡಬೇಕು ಎಂಬ ನಿಯಮಿ ಇದೆ. ಆದರೆ ಕೆಲ ಪ್ರಕರಣಗಳಲ್ಲಿ ಅರ್ಜಿಗಳು ವರ್ಷಗಳಿಂದ ಬಾಕಿಯಿವೆ. ಅರ್ಹ ಪತ್ನಿಗೆ‌ ಜೀವನಾಂಶ ಸಿಗಲೆಂದು ಕಾಲಮಿತಿ ನಿಗದಿ ಮಾಡಿದೆ. ವಿಳಂಬದಿಂದಾಗಿ‌ ಜೀವನಾಂಶ ಕೋರಿದ ಅರ್ಜಿಗಳ ಉದ್ದೇಶವೇ ನಿರರ್ಥಕವಾಗಲಿವೆ. ಅರ್ಜಿ ಸಲ್ಲಿಸಿದ ತಕ್ಷಣ ಪತಿಗೆ ನೋಟಿಸ್ ನೀಡಬೇಕು ಎಂದು ಪೀಠ ಆದೇಶಿಸಿದೆ.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ಬಿಗ್ ರಿಲೀಫ್, ತನಿಖೆಗೆ ಮಧ್ಯಂತರ ತಡೆ

ಅಲ್ಲದೆ, ಅರ್ಜಿ ಸಲ್ಲಿಸಿದ ಕೂಡಲೇ ಪತಿಗೆ ನೋಟಿಸ್ ನೀಡಿ ಎರಡು ತಿಂಗಳ ಒಳಗೆ ಪತಿ, ಪತ್ನಿ ತಮ್ಮ ಆಸ್ತಿ, ಹೊಣೆಗಾರಿಕೆ ವಿವರ ಸಲ್ಲಿಸಬೇಕು. ಅದಾದ ನಾಲ್ಕು ತಿಂಗಳೊಳಗೆ ಜೀವನಾಂಶ ಕುರಿತು ಆದೇಶ ನೀಡಬೇಕು. ಒಟ್ಟಾರೆಯಾಗಿ ಆರು ತಿಂಗಳಲ್ಲಿ ಜೀವನಾಂಶ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಇತ್ಯರ್ಥಪಡಿಸಬೇಕು. ಅದಕ್ಕೂ ವಿಳಂಬವಾದರೆ ಲಿಖಿತ ಕಾರಣಗಳನ್ನು ನೀಡಬೇಕು ಎಂದು ವಿಚಾರಣಾ ನ್ಯಾಯಾಲಯಗಳಿಗೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಿರ್ದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ