ಮೇಕೆದಾಟು ಪಾದಯಾತ್ರೆಯಲ್ಲಿ ಕೊವಿಡ್ ನಿಯಮ ಉಲ್ಲಂಘನೆ; ಕಾಂಗ್ರೆಸ್ ನಾಯಕರ ವಿರುದ್ಧದ ಕೇಸ್ ರದ್ದು
ಮೇಕೆದಾಟು ಪಾದಯಾತ್ರೆ ವೇಳೆ ಕೊವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ್ ಖರ್ಗೆ, ಬಿ.ಕೆ. ಹರಿಪ್ರಸಾದ್, ಈಶ್ವರ ಖಂಡ್ರೆ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆ ಪ್ರಕರಣದ ತೀರ್ಪು ಇಂದು ಹೊರಬಿದ್ದಿದೆ.
ಬೆಂಗಳೂರು: 2022ರ ಜನವರಿಯಲ್ಲಿ ಮೇಕೆದಾಟು ಪಾದಯಾತ್ರೆ ವೇಳೆ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ನಾಯಕರ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಮೇಕೆದಾಟು ಪಾದಯಾತ್ರೆ ವೇಳೆ ಕೊವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ್ ಖರ್ಗೆ, ಬಿ.ಕೆ. ಹರಿಪ್ರಸಾದ್, ಈಶ್ವರ ಖಂಡ್ರೆ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಮೇಕೆದಾಟು ಪಾದಯಾತ್ರೆಯಲ್ಲಿ ಕೊವಿಡ್ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಈಗಿನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. 2022ರ ಜನವರಿ 10ರಂದು ಕರ್ನಾಟಕ ಪೊಲೀಸರು ಕೊವಿಡ್ ಕಾರಣದಿಂದಾಗಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ವಿಧಿಸಿದ್ದರು. ಆದರೆ, ಆ ವೇಳೆ ಮೇಕೆದಾಟು ಪಾದಯಾತ್ರೆ ಮಾಡಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಾಂಗ್ರೆಸ್ ಹಿರಿಯ ನಾಯಕರಾದ ಮಲಿಕಾರ್ಜುನ ಖರ್ಗೆ, ಡಾ. ಜಿ. ಪರಮೇಶ್ವರ, ಡಿ.ಕೆ ಸುರೇಶ್, ಬಿ.ಕೆ ಹರಿಪ್ರಸಾದ್, ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ ಸೇರಿದಂತೆ ಇತರರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು.
ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಕಾಂಗ್ರೆಸ್ನವರೇ ಕುತಂತ್ರ ಮಾಡ್ತಿದ್ದಾರೆ; ಸಿಎಂ ಪರ ಯತ್ನಾಳ್ ಬ್ಯಾಟಿಂಗ್
ಮೇಕೆದಾಟು ಪಾದಯಾತ್ರೆ ವೇಳೆ ಕಾಂಗ್ರೆಸ್ ನಾಯಕರು ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ, ಜನರನ್ನು ಗುಂಪುಗೂಡಿಸಿಕೊಂಡು ಪಾದಯಾತ್ರೆ ನಡೆಸಿದ್ದಾರೆ ಎಂದು ಆರೋಪಿಸಿ ಕೇಸ್ ದಾಖಲಿಸಲಾಗಿತ್ತು. ಪ್ರಿಯಾಂಕ್ ಖರ್ಗೆ, ಬಿ.ಕೆ. ಹರಿಪ್ರಸಾದ್, ಈಶ್ವರ ಖಂಡ್ರೆ ವಿರುದ್ಧದ ಕೇಸ್ ಅನ್ನು ಕರ್ನಾಟಕ ಹೈಕೋರ್ಟ್ ಇಂದು ರದ್ದುಪಡಿಸಿದೆ. ಈಗಾಗಲೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧದ ಮೇಕೆದಾಟು ಪಾದಯಾತ್ರೆಯ ಕೊವಿಡ್ ನಿಯಮ ಉಲ್ಲಂಘನೆಯ ಕೇಸ್ಗಳನ್ನು ರದ್ದುಪಡಿಸಲಾಗಿತ್ತು.
ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ