ಕರ್ನಾಟಕ ಸರ್ಕಾರದ ಮೇಲ್ಮನವಿ ವಜಾ: ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿಗೆ ರಿಲೀಫ್

ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸರ್ಕಾರ ಮತ್ತು ಪ್ರೇಮಲತಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ಕರ್ನಾಟಕ ಸರ್ಕಾರದ ಮೇಲ್ಮನವಿ ವಜಾ: ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿಗೆ ರಿಲೀಫ್
ರಾಘವೇಶ್ವರ ಭಾರತಿ ಸ್ವಾಮೀಜಿ ಮತ್ತು ಕರ್ನಾಟಕ ಹೈಕೋರ್ಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 29, 2021 | 11:07 PM

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗೆ ಹೈಕೋರ್ಟ್​ನಲ್ಲಿ ತಾಂತ್ರಿಕ ಕಾರಣದಿಂದ ರಿಲೀಫ್ ಸಿಕ್ಕಿದೆ. ಸಿಐಡಿಯನ್ನು ಪೊಲೀಸ್ ಠಾಣೆ ಎಂದು ಘೋಷಿಸಿಲ್ಲ, ಸರ್ಕಾರ ಈ ಬಗ್ಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಸಿಐಡಿ ಪೊಲೀಸರಿಗೆ ಠಾಣೆಯ ಅಧಿಕಾರವಿಲ್ಲ. ಹೀಗಾಗಿ ಸಿಐಡಿ ಪೊಲೀಸರಿಗೆ ಆರೋಪಪಟ್ಟಿ ಸಲ್ಲಿಸಲು ಅವಕಾಶವಿಲ್ಲ ಎಂಬ ಕಾರಣಕ್ಕೆ ರಾಘವೇಶ್ವರ ಶ್ರೀಗಳ ವಿರುದ್ಧದ ಪ್ರಕರಣ ರದ್ದುಗೊಳಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧದ ಪ್ರಕರಣ ಕೈಬಿಟ್ಟಿದ್ದ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಗಾಯಕಿ ಪ್ರೇಮಲತಾ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾ ಮಾಡಿದೆ. ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸರ್ಕಾರ ಮತ್ತು ಪ್ರೇಮಲತಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ರಾಘವೇಶ್ವರ ಭಾರತಿ ಸ್ವಾಮೀಜಿ 2011ರಿಂದ 2014ರ ನಡುವೆ ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ರಾಮಚಂದ್ರಾಪುರ ಮಠದಲ್ಲಿ ರಾಮಕಥಾ ಗಾಯಕಿಯಾಗಿದ್ದ ಪ್ರೇಮಲತಾ ಗಿರಿನಗರ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ನಗರದ ನ್ಯಾಯಾಲಯಕ್ಕೆ ರಾಘವೇಶ್ವರ ಭಾರತಿ ಮತ್ತು ಇತರ 7 ಜನರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ್ದರು. 1340 ಪುಟಗಳ ಚಾರ್ಜ್​ಶೀಟ್​ನಲ್ಲಿ 151 ಸಾಕ್ಷಿಗಳನ್ನು ಉಲ್ಲೇಖಿಸಲಾಗಿತ್ತು. ಆದರೆ ಅಧೀನ ವಿಚಾರಣಾ ನ್ಯಾಯಾಲಯವು ಸ್ವಾಮೀಜಿಯನ್ನು ಆರೋಪಮುಕ್ತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಐಡಿ ಮತ್ತು ದೂರುದಾರರು ಪ್ರತ್ಯೇಕ ಅರ್ಜಿಗಳನ್ನು ಹೈಕೋರ್ಟ್​ಗೆ ಸಲ್ಲಿಸಿದ್ದರು.

ಇದೀಗ ಹೈಕೋರ್ಟ್ ಸಹ ಈ ಪ್ರಕರಣದಲ್ಲಿ ಸ್ವಾಮೀಜಿಗೆ ರಿಲೀಫ್ ನೀಡಿದೆ. ತಮ್ಮ ವಿರುದ್ಧ ಆರೋಪ ಮಾಡಿದ್ದ ಗಾಯಕಿ ಪ್ರೇಮಲತಾ ಹಾಗೂ ಅವರ ಪತಿ ದಿವಾಕರ್ ಅವರ ವಿರುದ್ಧ ಸ್ವಾಮೀಜಿ ಸಹ ಬ್ಲಾಕ್​ಮೇಲ್ ಆರೋಪ ಹೊರಿಸಿ, ಹೊನ್ನಾವರ ಠಾಣೆಗೆ ದೂರು ಸಲ್ಲಿಸಿದ್ದರು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದ ಈ ಪ್ರಕರಣ ಬಿದ್ದುಹೋಗಿತ್ತು.

ಇದನ್ನೂ ಓದಿ: ಅಪ್ರಾಪ್ರ ಬಾಲಕಿ ಮೇಲೆ 4 ದಿನಗಳ ಕಾಲ ಅತ್ಯಾಚಾರ; ಆರೋಪಿಗೆ 20 ವರ್ಷ ಜೈಲು, 95 ಸಾವಿರ ದಂಡ ಇದನ್ನೂ ಓದಿ: ‘ಜನಪ್ರತಿನಿಧಿಗಳೇ ಎಚ್ಚರವಿರಲಿ’ ; ‘ಒಮ್ಮೆ ಹೆಣ್ತನ ಅನುಭವಿಸಿ, ಆಮೇಲೆ ಅತ್ಯಾಚಾರದ ಆನಂದವನ್ನು ಹಂಚಿಕೊಳ್ಳುವಿರಂತೆ’

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ