ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಸರ್ಕಾರದ ಪರ ವಕೀಲರಿಗೆ ಕೋರ್ಟ್ ಮಹತ್ವದ ಸೂಚನೆ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಸರ್ಕಾರದ ಪರ ವಕೀಲರಿಗೆ  ಕೋರ್ಟ್ ಮಹತ್ವದ ಸೂಚನೆ
ಹೈಕೋರ್ಟ್​
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on: Sep 20, 2023 | 12:43 PM

ಬೆಂಗಳೂರು, (ಸೆಪ್ಟೆಂಬರ್ 20): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ(Chamarajpet Idgah Ground) ಗಣೇಶೋತ್ಸವ ಆಚರಣೆಗೆ(Ganesh Festival) ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್(Karnataka High Court) ವಿಚಾರಣೆ ನಡೆಸಿದ್ದು, ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಪಿಐಎಲ್ ಸಲ್ಲಿಸಿತ್ತು. ಇದನ್ನು ಇಂದು (ಸೆಪ್ಟೆಂಬರ್ 20) ವಿಚಾರಣೆ ನಡೆಸಿದ ಹೈಕೋರ್ಟ್, ಮನವಿಯನ್ನು ಕಾನೂನು ‌ರೀತಿ ಪರಿಶೀಲಿಸಿ ‌ನಿರ್ಣಯ ಕೈಗೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಮೌಖಿಕವಾಗಿ ಸೂಚಿಸಿದೆ.

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಪಿಐಎಲ್ ಸಲ್ಲಿಸಿತ್ತು. ಪ್ರಕರಣದ ತುರ್ತು ವಿಚಾರಣೆಗೆ ಒಕ್ಕೂಟದ ಪರ ವಕೀಲ ಶ್ರೀಧರ ಪ್ರಭು ಮನವಿ ಮಾಡಿದ್ದು, ಬೆಂಗಳೂರು ‌ನಗರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದೆ. ಆದರೆ, ಜಿಲ್ಲಾಧಿಕಾರಿ ಅನುಮತಿ ನೀಡಿಲ್ಲವೆಂದು ವಾದ ಮಂಡಿಸಿದರು.

ಇದನ್ನೂ ಓದಿ: ಶಿವಾಜಿನಗರದಲ್ಲಿ ಗಣೇಶನ ಪ್ರತಿಷ್ಠಾಪನೆ ಸರ್ವಧರ್ಮಗಳ ಸಮಾಗಮಕ್ಕೆ ವೇದಿಕೆಯಾಯಿತು

ಚಾಮರಾಜಪೇಟೆ ಆಟದ ಮೈದಾನ ಕಂದಾಯ ಇಲಾಖೆಗೆ ಒಳಪಟ್ಟಿದ್ದು, ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮನವಿ ಮಾಡಿತ್ತು. ಆದರೆ, ಈ ಬಾರಿಯೂ ಸರ್ಕಾರ ಅನುಮತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಚಾಮರಾಜಪೇಟೆ ನಾಗರೀಕರ ಒಕ್ಕೂಟ, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ದೇಶನ ಕೋರಿ ಹೈಕೋರ್ಟ್​ಗೆ ಪಿಐಎಲ್​ ಸಲ್ಲಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ