ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಕೇಸ್, ಪ್ರಭಾಕರ್ ಭಟ್​ಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್

| Updated By: ರಮೇಶ್ ಬಿ. ಜವಳಗೇರಾ

Updated on: Dec 28, 2023 | 9:03 PM

ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಕೇಸ್, ಪ್ರಭಾಕರ್ ಭಟ್​ಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್
Follow us on

ಬೆಂಗಳೂರು, (ಡಿಸೆಂಬರ್ 28): ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್  (kalladka prabhakar bhat_ ವಿರುದ್ಧ ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್​ ಸೂಚಿಸಿದೆ. ತಮ್ಮ ವಿರುದ್ಧ ಎಫ್​ಐಆರ್ ರದ್ದು ಕೋರಿ ಕಲ್ಲಡ್ಕ ಪ್ರಭಾಕರ್ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿದೆ. ಸರ್ಕಾರದ ಪರ ಎಸ್​ಪಿಪಿಗೆ ನ್ಯಾಯಮೂರ್ತಿ ರಾಜೇಶ್ ರೈ ಅವರು ಸೂಚಿಸಿದ್ದಾರೆ. ಇದರೊಂದಿಗೆ ಲ್ಲಡ್ಕ ಪ್ರಭಾಕರ್​ ಭಟ್​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಇದನ್ನು ರದ್ದುಗೊಳಿಸುವಂತೆ ಸೂಚಿಸಬೇಕೆಂದು ಹೈಕೋರ್ಟ್​ಗೆ ಕಲ್ಲಡ್ಕ ಪ್ರಭಾಕರ್ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಮೂರ್ತಿ ರಾಜೇಶ್ ರೈ, ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ 

ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹ

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್​​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಸ್ಲಿಂ ಸಂಘಟನೆಗಳು ಬೀದಿಗಳಿದು ಪ್ರತಿಭಟನೆ ಮಾಡುತ್ತಿವೆ.

ಏನು ಹೇಳಿದ್ದರು ಪ್ರಭಾಕರ ಭಟ್?

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ’ ಎಂದು ಭಟ್ ಹೇಳಿದ್ದರು.

ಇನ್ನು ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಭಾಕರ್ ಭಟ್ ವಿರುದ್ಧ  IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಲಾಗಿದೆ. ಇದೀಗ ಈ ಎಫ್​ಐಆರ್ ರದ್ದು ಕೋರಿ ಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:23 pm, Thu, 28 December 23