ಗಡಿಪಾರು ಭೀತಿಯಲ್ಲಿದ್ದ ಚೇತನ್​ ಅಹಿಂಸಾಗೆ ಮತ್ತೆ ರಿಲೀಫ್: ತಡೆಯಾಜ್ಞೆ ವಿಸ್ತರಿಸಿದ ಕರ್ನಾಟಕ ಹೈಕೋರ್ಟ್

ಚೇತನ್ ಅಹಿಂಸಾ ಅವರ ಸಾಗರೋತ್ತರ ಭಾರತೀಯ ಪೌರತ್ವ ಕಾರ್ಡ್ ರದ್ದುಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ವಿಸ್ತರಣೆ ಮಾಡಿದೆ.

ಗಡಿಪಾರು ಭೀತಿಯಲ್ಲಿದ್ದ ಚೇತನ್​ ಅಹಿಂಸಾಗೆ ಮತ್ತೆ ರಿಲೀಫ್: ತಡೆಯಾಜ್ಞೆ ವಿಸ್ತರಿಸಿದ ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್ ಮತ್ತು ನಟ ಚೇತನ್​ ಅಹಿಂಸಾ
Rakesh Nayak Manchi

Updated on: Jun 02, 2023 | 7:44 PM

ಬೆಂಗಳೂರು: ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹೊತ್ತುಕೊಂಡಿರುವ ನಟ ಚೇತನ್ ಅಹಿಂಸಾ (Chetan Ahimsa) ಅವರ ಸಾಗರೋತ್ತರ ಭಾರತೀಯ ಪೌರತ್ವ ಕಾರ್ಡ್ ರದ್ದುಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಿಸ್ತರಣೆ ಮಾಡಿದೆ. ಆ ಮೂಲಕ ಗಡಿಪಾರು ಭೀತಿಯಲ್ಲಿದ್ದ ಚೇತನ್​ಗೆ ಕರ್ನಾಟಕ ಹೈಕೋರ್ಟ್ ಮತ್ತೆ ರಿಲೀಫ್ ಸಿಕ್ಕಂತಾಗಿದೆ.

ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆ ಕೇಂದ್ರ ಸರ್ಕಾರ ನೋಟಿಸ್ ನೀಡಿ ಉತ್ತರ ಪಡೆದಿತ್ತು. ಆದರೆ ಚೇತನ್ ಅವರಿಂದ ಸಮಾಧಾನಕರ ಉತ್ತರ ಸಿಗದ ಹಿನ್ನೆಲೆ 2018 ರಲ್ಲಿ ನೀಡಿದ್ದ ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ಅನ್ನು ಕೇಂದ್ರ ಸರ್ಕಾರ ಈ ಕಾರ್ಡ್ ಅನ್ನು ರದ್ದುಗೊಳಿಸಿತ್ತು.

ಇದನ್ನೂ ಓದಿ: ಪ್ರಸ್ತುತ ಕಾನೂನಿನ ಅಡಿಯಲ್ಲಿ ನೆಕ್ರೋಫಿಲಿಯಾ ಶಿಕ್ಷಾರ್ಹವಲ್ಲ; ಮೃತದೇಹದ ಅತ್ಯಾಚಾರವನ್ನು ಅಪರಾಧೀಕರಿಸಲು ಕರೆ ನೀಡಿದ ಕರ್ನಾಟಕ ಹೈಕೋರ್ಟ್

ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಚೇತನ್ ಅಹಿಂಸಾ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಕೋರ್ಟ್ ಏ.21 ರಂದು ಚೇತನ್​ಗೆ ಷರತ್ತುಬದ್ಧ ರಿಲೀಫ್ ನೀಡಿತ್ತು. ನ್ಯಾಯಾಂಗದ ಬಗ್ಗೆ ನಟ ಚೇತನ್ ಟ್ವೀಟ್ ಮಾಡುವಂತಿಲ್ಲ, ಬಾಕಿಯಿರುವ ಕೇಸ್​​ಗಳ ಬಗ್ಗೆಯೂ ಟ್ವೀಟ್ ಮಾಡುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿತ್ತು. ಅದರಂತೆ, ಷರತ್ತು ಪಾಲಿಸಿ ಟ್ವೀಟ್ ಡಿಲೀಟ್ ಮಾಡಿರುವುದಾಗಿ ವಕೀಲರು ಕೋರ್ಟ್ ಮುಂದೆ ಹೇಳಿದ್ದಾರೆ.

ವಾದ ಆಲಿಸಿದ ಹೈಕೋರ್ಟ್, ಈ ಹಿಂದೆ ನೀಡಿದ್ದ ಮಧ್ಯಂತ ತಡೆಯಾಜ್ಞೆಯನ್ನು ಜೂನ್ 20ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಅಲ್ಲದೆ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us