ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಜೆಪಿ ನಡ್ಡಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್​​ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಜೆಪಿ ನಡ್ಡಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್
Edited By:

Updated on: Jul 07, 2023 | 10:47 PM

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court)​​ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪ್ರಕರಣ ರದ್ದು ಕೋರಿ ನಡ್ಡಾ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠವು ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ಅದರಂತೆ ಬಿಜೆಪಿ ರಾಷ್ಟ್ರಾಧ್ಯಕ್ಷರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ವಿಜಯನಗರ ಜಿಲ್ಲೆ ಹರಪ್ಪನಹಳ್ಳಿಯಲ್ಲಿ ಕಳೆದ ಮೇ 7 ರಂದು ಚುನಾವಣಾ ಪ್ರಚಾರ ಭಾಷಣ ಮಾಡಿದ್ದರು. ಈ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ‌ ಬಂದರೆ ಕಿಸಾನ್ ಸಮ್ಮಾನ್ ಯೋಜನೆ, ಗರೀಬ್ ಕಲ್ಯಾಣ್ ಯೋಜನೆ, ಹೊಸ ರಸ್ತೆ ನಿರ್ಮಾಣ ಬಂದ್ ಆಗಲಿದೆ ಎಂಬ ಹೇಳಿಕೆ ನೀಡಿದ್ದರು. ಈ ಬಗ್ಗೆ ಕಾಂಗ್ರೆಸ್ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿತ್ತು.

ಇದನ್ನೂ ಓದಿ: ಪಿಎಸ್‌ಐ ಅಕ್ರಮದ ಆರೋಪಿಯಲ್ಲದ ಅಭ್ಯರ್ಥಿಗಳಿಗೆ ವಿಶೇಷ ಪರೀಕ್ಷೆ ಸಾಧ್ಯವಿಲ್ಲ; ಹೈಕೋರ್ಟ್​​ಗೆ ತಿಳಿಸಿದ ಸರ್ಕಾರ

ಐಪಿಸಿ ಸೆಕ್ಷನ್ 171 ಎಫ್ ಅಡಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಕೇಸ್ ದಾಖಲಿಸಿತ್ತು. ಪ್ರಕರಣ ರದ್ದು ಕೋರಿ ಜೆ.ಪಿ.ನಡ್ಡಾ ಪರ ವಕೀಲ ವಿನೋದ್ ಕುಮಾರ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಸದ್ಯ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ. ಇದರಿಂದ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪವಿದ್ದ ಕ್ರಿಮಿನಲ್‌ ಪ್ರಕರಣದಿಂದ ಬಿಜೆಪಿ ರಾಷ್ಟ್ರಾಧ್ಯಕ್ಷರಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 pm, Fri, 7 July 23