ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ನೊಟೀಸ್: ಕೆಜಿಎಫ್ 2 ಹಾಡಿನ ದುರ್ಬಳಕೆ ಆರೋಪ

Congress Party: ಈ ಹಿಂದೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಪಕ್ಷವು, ಪಕ್ಷದ ಎಲ್ಲ ಸಾಮಾಜಿಕ ತಾಣ ಖಾತೆಗಳಿಂದ ‘ಕೆಜಿಎಫ್ 2’ ಹಾಡು ತೆಗೆಯುತ್ತೇವೆಂದು ಮುಚ್ಚಳಿಕೆ ನೀಡಿತ್ತು.

ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ನೊಟೀಸ್: ಕೆಜಿಎಫ್ 2 ಹಾಡಿನ ದುರ್ಬಳಕೆ ಆರೋಪ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಎಡಚಿತ್ರ) ಮತ್ತು ಕರ್ನಾಟಕ ಹೈಕೋರ್ಟ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 02, 2022 | 2:07 PM

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮುಂಚೂಣಿ ನಾಯಕ ರಾಹುಲ್ ಗಾಂಧಿ (Rahul Gandhi) ಹಾಗೂ ಹಿರಿಯ ನಾಯಕರಾದ ಜೈರಾಮ್ ರಮೇಶ್ ಹಾಗೂ ಸುಪ್ರಿಯಾ ಅವರಿಗೆ ಕರ್ನಾಟಕ ಹೈಕೋರ್ಟ್​ನ (Karnataka High Court) ವಿಭಾಗೀಯ ಪೀಠವು ನೊಟೀಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷವು ‘ಕೆಜಿಎಫ್ 2’ ಚಿತ್ರದ ಹಾಡನ್ನು ದುರ್ಬಳಕೆ ಮಾಡಿದೆ. ಅಷ್ಟೇ ಅಲ್ಲದೆ, ಹೈಕೋರ್ಟ್​ಗೆ ನೀಡಿದ್ದ ಮುಚ್ಚಳಿಕೆ ಉಲ್ಲಂಘಿಸಿದೆ ಎಂದು ಎಂಆರ್​​ಟಿ ಮ್ಯೂಸಿಕ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿತ್ತು. ಈ ಹಿಂದೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಪಕ್ಷವು, ಕಾಂಗ್ರೆಸ್ ಪಕ್ಷದ ಎಲ್ಲ ಸಾಮಾಜಿಕ ತಾಣ ಖಾತೆಗಳಿಂದ ‘ಕೆಜಿಎಫ್ 2’ ಹಾಡು ತೆಗೆಯುತ್ತೇವೆಂದು ಮುಚ್ಚಳಿಕೆ ನೀಡಿತ್ತು. ಅರ್ಜಿದಾರ ಎಂಆರ್​​​ಟಿ ಮ್ಯೂಸಿಕ್ ಸಂಸ್ಥೆಗೆ ಈ ಸಂಬಂಧ ಅಗತ್ಯ ದಾಖಲೆ ಒದಗಿಸುತ್ತೇವೆ ಎಂದು ಕಾಂಗ್ರೆಸ್ ಪರ ವಾದಿಸಿದ್ದ ವಕೀಲ ಅಭಿಷೇಕ್ ಮನು ಸಿಂಘ್ವಿ ಭರವಸೆ ನೀಡಿದ್ದರು.

ಪ್ರಕರಣದ ಹಿನ್ನೆಲೆ

ಕೆಜಿಎಫ್-2 ಚಿತ್ರದ ಹಾಡನ್ನು ಅಕ್ರಮವಾಗಿ ಬಳಸಿಕೊಂಡು ಎಂಆರ್‌ಟಿ ಮ್ಯೂಸಿಕ್ ಕಂಪನಿಯ ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಬೆಂಗಳೂರಿನ ವಾಣಿಜ್ಯ ನ್ಯಾಯಾಲಯವು ಟ್ವಿಟರ್‌ಗೆ ನಿರ್ದೇಶನ ನೀಡಿತ್ತು. ಈ ನಿರ್ದೇಶನವನ್ನು ಕಾಂಗ್ರೆಸ್ ಹೈಕೋರ್ಟ್​ನಲ್ಲಿ ಪ್ರಶ್ನಿಸಿತ್ತು.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಾಹುಲ್ ಗಾಂಧಿ ಕಾಲ್ನಡಿಗೆಯಲ್ಲಿ ಸಾಗುವ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್​..’ ಹಾಡನ್ನು ಬಳಕೆ ಮಾಡಲಾಗಿತ್ತು. ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್​​ಟಿ ಮ್ಯೂಸಿಕ್​ನವರು ಫೋರ್ಜರಿ ಪ್ರಕರಣ ದಾಖಲು ಮಾಡಿದ್ದರು. ಯಶವಂತಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ರಾಹುಲ್ ಗಾಂಧಿ ಮಾತ್ರವಲ್ಲದೆ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಪಕ್ಷವು, ’ಟ್ವಿಟರ್​ ಖಾತೆಗಳನ್ನು ನಿರ್ಭಂದಿಸುವಂತೆ ಬೆಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದ್ದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ನೋಡಿದೇವು. ನಾವು ಯಾವುದೇ ವಿಚಾರಣೆಗೆ ಹಾಜರಾಗಲಿಲ್ಲ. ಮತ್ತು ಆದೇಶದ ಪ್ರತಿ ನಮಗೆ ಲಭ್ಯವಾಗಿಲ್ಲ. ಈ ಕುರಿತು ನಾವು ಕಾನೂನಾತ್ಮಕವಾಗಿ ಏನು ಪರಿಹಾರ ಕಂಡುಕೊಳ್ಳಬಹುದೆಂದು ಯೋಚಿಸುವತ್ತೇವೆ’ ಎಂದು ಟ್ವೀಟ್​ ಮಾಡಿತ್ತು.

ಬಿಜೆಪಿ ವಿರುದ್ಧ ಹರಿಹಾಯ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ

ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯಲ್ಲಿ ಕಾರ್ಯಕರ್ತರ ಜೊತೆ ಕಾಂಗ್ರೆಸ್​ ನಾಯಕ, ಸಂಸದ ರಾಹುಲ್ ಗಾಂಧಿ ಡ್ಯಾನ್ಸ್ ಮಾಡಿದ್ದರು. ಅದಕ್ಕೆ ಹಾಡು ಸೇರಿಸಿ ಟ್ವಿಟರ್​ನಲ್ಲಿ ಹಾಕಿದ್ದರು. ಇದನ್ನೇ ನೆಪ ಇಟ್ಟುಕೊಂಡ ಬಿಜೆಪಿ ನಾಯಕರು ಟ್ವಿಟರ್ ಖಾತೆಯನ್ನ ಸೀಜ್ ಮಾಡಿಸಿದ್ದಾರೆ. ನಮ್ಮ ಟ್ವಿಟರ್ ಆದರೂ ಬಂಧಿಸಿ ಅಥವಾ ನಮ್ಮ ನಾಯಕರನ್ನು ಜೈಲಿಗೆ ಹಾಕಿ. ಆದರೆ ಜನರ ಹೃದಯದಿಂದ ಜೈಲಿಗೆ ಹಾಕಲು ಆಗುವುದಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಧಾನಮಂತ್ರಿ ಸ್ಥಾನವನ್ನು ತ್ಯಾಗ ಮಾಡಿದವರು. ತ್ಯಾಗ ಮಾಡಿದ ಪಕ್ಷದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಭ್ರಷ್ಟ ಸರ್ಕಾರವನ್ನು ತೆಗೆಯಲು ನೀವೆಲ್ಲಾ ಮುಂದಾಗಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ಮುನ್ನ ರಾಜಸ್ಥಾನದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್

ಹೈಕೋರ್ಟ್​ಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:54 pm, Fri, 2 December 22

ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್