AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಗೆ ತಾತ್ಕಾಲಿಕ ಮಾರ್ಪಾಡು ಮಾಡಿದ ಹೈಕೋರ್ಟ್

ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಋತುಚಕ್ರ ರಜೆ ನೀಡಿ ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್, ಅದಾದ ಕೆಲವೇ ಕ್ಷಣಗಳಲ್ಲಿ ತಡೆಯಾಜ್ಞೆಯನ್ನು ತಾತ್ಕಾಲಿಕವಾಗಿ ಮಾರ್ಪಾಡುಗೊಳಿಸಿದೆ. ಸರ್ಕಾರದ ಪರ ವಕೀಲರು ಮನವಿ ಸಲ್ಲಿಸಿದ ಕಾರಣ ಬುಧವಾರಕ್ಕೆ ಮರು ವಿಚಾರಣೆ ನಿಗದಿಪಡಿಸಿ ತಡೆಯಾಜ್ಞೆ ತಾತ್ಕಾಲಿಕ ತೆರವುಗೊಳಿಸಿದೆ.

ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಗೆ ತಾತ್ಕಾಲಿಕ ಮಾರ್ಪಾಡು ಮಾಡಿದ ಹೈಕೋರ್ಟ್
ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಗೆ ತಾತ್ಕಾಲಿಕ ಮಾರ್ಪಾಡು ಮಾಡಿದ ಹೈಕೋರ್ಟ್
Ramesha M
| Edited By: |

Updated on: Dec 09, 2025 | 2:28 PM

Share

ಬೆಂಗಳೂರು, ಡಿಸೆಂಬರ್ 09: ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಮುಟ್ಟಿನ ರಜೆಯನ್ನು (Menstrual Leave) ನೀಡಿದ ಸರ್ಕಾರದ ಆದೇಶಕ್ಕೆ ಹೈ ಕೋರ್ಟ್​ನಿಂದ ಇಂದು ಬೆಳಗ್ಗೆ ತಡೆಯಾಜ್ಞೆ ನೀಡಲಾಗಿತ್ತು. ಆದರೀಗ ಸರ್ಕಾರದ ಪರ ವಕೀಲರು ಮನವಿ ಸಲ್ಲಿಸಿದ ಕಾರಣ ಬುಧವಾರಕ್ಕೆ ಮರು ವಿಚಾರಣೆ ನಿಗದಿಪಡಿಸಿದ್ದು, ಬೆಳಗ್ಗೆ ನೀಡಲಾಗಿದ್ದ ತಡೆಯಾಜ್ಞೆ ಆದೇಶವನ್ನು ಹೈಕೋರ್ಟ್ ಮಾರ್ಪಾಡು ಮಾಡಿದೆ. ಹೀಗಾಗಿ ಸದ್ಯಕ್ಕೆ ಋತುಚಕ್ರ ರಜೆಗೆ ತಡೆ ಇಲ್ಲ.

ಋತುಚಕ್ರ ರಜೆ ಬೆಂಬಲಿಸಿ ಕೋರ್ಟ್​ಗೆ 50ಕ್ಕೂ ಹೆಚ್ಚು ಮಹಿಳಾ ವಕೀಲರು ಹಾಜರ್

ಋತುಚಕ್ರ ರಜೆ ಸಂಬಂಧ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ಹಿನ್ನೆಲೆ ಹೈಕೋರ್ಟ್ ತಡೆ ತೆರವು ಕೋರಿ ಎಜಿ ಶಶಿಕಿರಣ್ ಶೆಟ್ಟಿ ಮನವಿ ಸಲ್ಲಿಸಿದ್ದರು. ರಾಜ್ಯ ಸರ್ಕಾರದವಾದ ಕೇಳದೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಋತುಚಕ್ರದ ರಜೆ ಆದೇಶಕ್ಕೆ ಮುನ್ನ ಸರ್ಕಾರ ಕಾನೂನು ಪಾಲಿಸಿದೆ. ಹೀಗಾಗಿ ಆದೇಶ ಮಾರ್ಪಡಿಸಲು ಅಡ್ವೊಕೇಟ್ ಜನರಲ್ ಮನವಿ ಮಾಡಿದ್ದರು.

ಸರ್ಕಾರದ ವಾದ ಆಲಿಸಿದ ಬಳಿಕವೇ ಅರ್ಜಿ ಬಗ್ಗೆ ಆದೇಶಿಸಲಾಗುವುದು ಎಂದು ಹೇಳಿರು ಹೈ ಕೋರ್ಟ್​ ಈಗ ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ನಿಗದಿಪಡಿಸಿದೆ. ತಡೆಯಾಜ್ಞೆಗೆ ಹಿರಿಯ ವಕೀಲ ರವಿವರ್ಮ ಕುಮಾರ್ ಸಹ ಆಕ್ಷೇಪ ವ್ಯಕ್ತಪಡಿಸಿದ್ದು, ಋತುಚಕ್ರ ರಜೆ ಬೆಂಬಲಿಸಿ ಕೋರ್ಟ್​ಗೆ 50ಕ್ಕೂ ಹೆಚ್ಚು ಮಹಿಳಾ ವಕೀಲರು ಹಾಜರಾಗಿದ್ದರು. ಹೀಗಾಗಿ ಸದ್ಯ ಋತುಚಕ್ರದ ರಜೆ ಆದೇಶಕ್ಕೆ ತಡೆಯಾಜ್ಞೆ ಇರುವುದಿಲ್ಲ.

ಇದನ್ನೂ ಓದಿ Menstrual leave: ಮಹಿಳೆಯರಿಗೆ ಋತುಚಕ್ರ ರಜೆ ನೀಡಿದ್ದ ಸರ್ಕಾರಕ್ಕೆ ಹೈಕೋರ್ಟ್​​ನಲ್ಲಿ ಭಾರಿ ಹಿನ್ನಡೆ

ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದ ಕೋರ್ಟ್​

ಸರ್ಕಾರದ ಏಕಪಕ್ಷೀಯ ಆದೇಶದಿಂದ ಹೋಟೆಲ್​ಗಳಿಗೆ ಸಮಸ್ಯೆ ಎಂದು ಹೋಟೆಲ್ ಸಂಘದ ಪರ ವಕೀಲರಾದ ಪ್ರಶಾಂತ್ ಬಿ.ಕೆ ವಾದ ಮಂಡಿಸಿದ್ದು, ಆದೇಶಕ್ಕೆ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆದಿಲ್ಲವೆಂದು ಆರೋಪಿಸಿದ್ದರು. ಮುಂದಿನ ವಿಚಾರಣೆವರೆಗೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದ್ದು, ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರವೆಂದು ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯ ಪಟ್ಟಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್