
ಬೆಂಗಳೂರು, ಡಿಸೆಂಬರ್ 09: ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಮುಟ್ಟಿನ ರಜೆಯನ್ನು (Menstrual Leave) ನೀಡಿದ ಸರ್ಕಾರದ ಆದೇಶಕ್ಕೆ ಹೈ ಕೋರ್ಟ್ನಿಂದ ಇಂದು ಬೆಳಗ್ಗೆ ತಡೆಯಾಜ್ಞೆ ನೀಡಲಾಗಿತ್ತು. ಆದರೀಗ ಸರ್ಕಾರದ ಪರ ವಕೀಲರು ಮನವಿ ಸಲ್ಲಿಸಿದ ಕಾರಣ ಬುಧವಾರಕ್ಕೆ ಮರು ವಿಚಾರಣೆ ನಿಗದಿಪಡಿಸಿದ್ದು, ಬೆಳಗ್ಗೆ ನೀಡಲಾಗಿದ್ದ ತಡೆಯಾಜ್ಞೆ ಆದೇಶವನ್ನು ಹೈಕೋರ್ಟ್ ಮಾರ್ಪಾಡು ಮಾಡಿದೆ. ಹೀಗಾಗಿ ಸದ್ಯಕ್ಕೆ ಋತುಚಕ್ರ ರಜೆಗೆ ತಡೆ ಇಲ್ಲ.
ಋತುಚಕ್ರ ರಜೆ ಸಂಬಂಧ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ಹಿನ್ನೆಲೆ ಹೈಕೋರ್ಟ್ ತಡೆ ತೆರವು ಕೋರಿ ಎಜಿ ಶಶಿಕಿರಣ್ ಶೆಟ್ಟಿ ಮನವಿ ಸಲ್ಲಿಸಿದ್ದರು. ರಾಜ್ಯ ಸರ್ಕಾರದವಾದ ಕೇಳದೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಋತುಚಕ್ರದ ರಜೆ ಆದೇಶಕ್ಕೆ ಮುನ್ನ ಸರ್ಕಾರ ಕಾನೂನು ಪಾಲಿಸಿದೆ. ಹೀಗಾಗಿ ಆದೇಶ ಮಾರ್ಪಡಿಸಲು ಅಡ್ವೊಕೇಟ್ ಜನರಲ್ ಮನವಿ ಮಾಡಿದ್ದರು.
ಸರ್ಕಾರದ ವಾದ ಆಲಿಸಿದ ಬಳಿಕವೇ ಅರ್ಜಿ ಬಗ್ಗೆ ಆದೇಶಿಸಲಾಗುವುದು ಎಂದು ಹೇಳಿರು ಹೈ ಕೋರ್ಟ್ ಈಗ ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ನಿಗದಿಪಡಿಸಿದೆ. ತಡೆಯಾಜ್ಞೆಗೆ ಹಿರಿಯ ವಕೀಲ ರವಿವರ್ಮ ಕುಮಾರ್ ಸಹ ಆಕ್ಷೇಪ ವ್ಯಕ್ತಪಡಿಸಿದ್ದು, ಋತುಚಕ್ರ ರಜೆ ಬೆಂಬಲಿಸಿ ಕೋರ್ಟ್ಗೆ 50ಕ್ಕೂ ಹೆಚ್ಚು ಮಹಿಳಾ ವಕೀಲರು ಹಾಜರಾಗಿದ್ದರು. ಹೀಗಾಗಿ ಸದ್ಯ ಋತುಚಕ್ರದ ರಜೆ ಆದೇಶಕ್ಕೆ ತಡೆಯಾಜ್ಞೆ ಇರುವುದಿಲ್ಲ.
ಇದನ್ನೂ ಓದಿ Menstrual leave: ಮಹಿಳೆಯರಿಗೆ ಋತುಚಕ್ರ ರಜೆ ನೀಡಿದ್ದ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆ
ಸರ್ಕಾರದ ಏಕಪಕ್ಷೀಯ ಆದೇಶದಿಂದ ಹೋಟೆಲ್ಗಳಿಗೆ ಸಮಸ್ಯೆ ಎಂದು ಹೋಟೆಲ್ ಸಂಘದ ಪರ ವಕೀಲರಾದ ಪ್ರಶಾಂತ್ ಬಿ.ಕೆ ವಾದ ಮಂಡಿಸಿದ್ದು, ಆದೇಶಕ್ಕೆ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆದಿಲ್ಲವೆಂದು ಆರೋಪಿಸಿದ್ದರು. ಮುಂದಿನ ವಿಚಾರಣೆವರೆಗೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದ್ದು, ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರವೆಂದು ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯ ಪಟ್ಟಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.