ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ; ಸಂಸದ ತೇಜಸ್ವಿ ಸೂರ್ಯಗೆ ರಿಲೀಫ್

2011ರ ನ.10ರವರೆಗೆ ಲೈಸೆನ್ಸ್ ನವೀಕರಿಸದೆ ಇಟ್ಟುಕೊಂಡಿದ್ದರು. ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ರಿವಾಲ್ವರ್ ಇಟ್ಟುಕೊಂಡಿದ್ದರು. ಹೀಗಾಗಿ ಸೋಮಶೇಖರ ರೆಡ್ಡಿ ವಿರುದ್ಧ ಕೇಸ್ ದಾಖಲಾಗಿತ್ತು. ಸೋಮಶೇಖರ ರೆಡ್ಡಿ ಕೇಸ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ.

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ; ಸಂಸದ ತೇಜಸ್ವಿ ಸೂರ್ಯಗೆ ರಿಲೀಫ್
ಕರ್ನಾಟಕ ಹೈಕೋರ್ಟ್
Edited By:

Updated on: Jan 03, 2022 | 7:12 PM

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ರಿಲೀಫ್​ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ನಿಯಮಾವಳಿ ಉಲ್ಲಂಘಿಸಿ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ತೇಜಸ್ವಿ ಸೂರ್ಯ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ತೇಜಸ್ವಿ ಸೂರ್ಯಗೆ ಇದೀಗ ರಿಲೀಫ್ ಸಿಕ್ಕಿದೆ.

ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿಗೆ ಸಂಕಷ್ಟ
ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ಶಸ್ತ್ರಾಸ್ತ್ರ ಕಾಯ್ದೆ ಅಡಿಯ ಕೇಸ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ. ಶಾಸಕ ಸೋಮಶೇಖರ ರೆಡ್ಡಿ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಲೈಸೆನ್ಸ್ ನವೀಕರಿಸದೆ ರಿವಾಲ್ವರ್ ಇಟ್ಟುಕೊಂಡಿದ್ದ ಆರೋಪ ಕೇಳಿಬಂದಿತ್ತು. 2013ರಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕೇಸ್ ದಾಖಲಿಸಿದ್ದರು. 2009ರ ಡಿ.31ಕ್ಕೆ ರಿವಾಲ್ವರ್ ಲೈಸೆನ್ಸ್ ಅವಧಿ ಮುಗಿದಿತ್ತು. 2011ರ ನ.10ರವರೆಗೆ ಲೈಸೆನ್ಸ್ ನವೀಕರಿಸದೆ ಇಟ್ಟುಕೊಂಡಿದ್ದರು. ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ರಿವಾಲ್ವರ್ ಇಟ್ಟುಕೊಂಡಿದ್ದರು. ಹೀಗಾಗಿ ಸೋಮಶೇಖರ ರೆಡ್ಡಿ ವಿರುದ್ಧ ಕೇಸ್ ದಾಖಲಾಗಿತ್ತು. ಸೋಮಶೇಖರ ರೆಡ್ಡಿ ಕೇಸ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ.

ಲೈಂಗಿಕ ದೌರ್ಜನ್ಯ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ
ಲೈಂಗಿಕ ದೌರ್ಜನ್ಯ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರವಾಗಿ ಹಣ ರಿಲೀಸ್‌ ಮಾಡದಿದ್ರೆ ಪ್ರ. ಕಾರ್ಯದರ್ಶಿ ಹಾಜರಿರಬೇಕು. ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ‌ ಪ್ರಧಾನ ಕಾರ್ಯದರ್ಶಿ ಹಾಜರು ಇರಬೇಕು ಎಂದು ವಿಚಾರಣೆ ವೇಳೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸಂತ್ರಸ್ತರಿಗೆ ಪರಿಹಾರ ಬಿಡುಗಡೆಗೆ ವಿಳಂಬ ಹಿನ್ನೆಲೆ ಲೈಂಗಿಕ ಶೋಷಣೆ ವಿರುದ್ಧ ಚಳವಳಿ ಸಂಘಟನೆ ಪಿಐಎಲ್ ಸಲ್ಲಿಸಿತ್ತು. ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಪಿಐಎಲ್ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಮೇಕೆದಾಟು ಜಲಾಶಯ ನಿರ್ಮಾಣ ವಿವಾದ; ಜನವರಿ 25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಇದನ್ನೂ ಓದಿ: Pegasus Spyware: ಪೆಗಾಸಸ್​ ಬೆನ್ನುಹತ್ತಿರುವ ಶಂಕೆಯಿದ್ದರೆ ಜ 7ರ ಒಳಗೆ ಸಂಪರ್ಕಿಸಿ: ಸುಪ್ರೀಂಕೋರ್ಟ್​ ರೂಪಿಸಿರುವ ಆಯೋಗ ಸೂಚನೆ

Published On - 6:36 pm, Mon, 3 January 22