ಡಿಸೆಂಬರ್ ಒಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಹಿನ್ನೆಲೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಜರಾಗಿದ್ದಾರೆ. ನವೆಂಬರ್ 26ರ ಒಳಗೆ ಮೀಸಲಾತಿ ಅಧಿಸೂಚನೆ ಹೊರಡಿಸುತ್ತೇವೆ ಎಂದು ಕರ್ನಾಟಕ ಹೈಕೋರ್ಟ್​​ಗೆ ರಾಜ್ಯ ಸರ್ಕಾರ ಹೇಳಿಕೆ ನೀಡಿದೆ.

ಡಿಸೆಂಬರ್ ಒಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನ
ಕರ್ನಾಟಕ ಹೈಕೋರ್ಟ್‌
Follow us
TV9 Web
| Updated By: ganapathi bhat

Updated on: Nov 17, 2021 | 3:09 PM

ಬೆಂಗಳೂರು: ಡಿಸೆಂಬರ್ ತಿಂಗಳೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಕರ್ನಾಟಕ ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ‌ ಹೈಕೋರ್ಟ್ ನಿರ್ದೇಶನ ನೀಡಿದೆ. ನವೆಂಬರ್ 26ರ ಒಳಗೆ ಮೀಸಲಾತಿ ಒದಗಿಸಲು ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಈ ಬಗ್ಗೆ ಇಂದು (ನವೆಂಬರ್ 17) ಸೂಚನೆ ಕೊಟ್ಟಿದೆ.

ಡಿಸೆಂಬರ್ 30ರ ಒಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶ ನೀಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಹಿನ್ನೆಲೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಜರಾಗಿದ್ದಾರೆ. ನವೆಂಬರ್ 26ರ ಒಳಗೆ ಮೀಸಲಾತಿ ಅಧಿಸೂಚನೆ ಹೊರಡಿಸುತ್ತೇವೆ ಎಂದು ಕರ್ನಾಟಕ ಹೈಕೋರ್ಟ್​​ಗೆ ರಾಜ್ಯ ಸರ್ಕಾರ ಹೇಳಿಕೆ ನೀಡಿದೆ.

ನವೆಂಬರ್ 26ರ ಒಳಗೆ ಮೀಸಲಾತಿ ನೀಡಿದರೆ ಶೀಘ್ರ ಚುನಾವಣೆ ನಡೆಸಲಾಗುವುದು. ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗದ ಪರ ವಕೀಲ ಕೆ.ಎನ. ಫಣೀಂದ್ರ ಹೇಳಿಕೆ ನೀಡಿದ್ದಾರೆ. ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ನಿರ್ದೇಶನ ನೀಡಿದೆ.

ಕಲಬುರಗಿ: ಮತದಾರರ ಪಟ್ಟಿಗೆ ಎಂಎಲ್​ಸಿಗಳನ್ನು ಸೇರಿಸದಂತೆ ರಿಟ್ ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಾಗೂ ಮತದಾರರ ಪಟ್ಟಿಗೆ 7 ಎಂಎಲ್‌ಸಿ ಸೇರ್ಪಡೆ ವಿಚಾರವಾಗಿ ಮತದಾರರ ಪಟ್ಟಿಗೆ ಎಂಎಲ್​ಸಿಗಳನ್ನು ಸೇರಿಸದಂತೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಕಲಬುರಗಿ ಹೈಕೋರ್ಟ್‌ಗೆ ಕಲಬುರಗಿ ಪಾಲಿಕೆ ಸದಸ್ಯೆ ವರ್ಷಾ ಜಾನೆರಿಂದ ರಿಟ್ ಅರ್ಜಿ ಸಲ್ಲಿಕೆ ಆಗಿದೆ. ಈ ರಿಟ್ ಅರ್ಜಿಯನ್ನು ಕಲಬುರಗಿ ಹೈಕೋರ್ಟ್ ಪುರಸ್ಕರಿಸಿದೆ. ಪರಿಷತ್​ನ 7 ಸದಸ್ಯರಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ನವಂಬರ್ 29ಕ್ಕೆ ರಿಟ್​ ಅರ್ಜಿ ವಿಚಾರಣೆ ಮುಂದೂಡಲಾಗಿದೆ. ನ್ಯಾಯಮೂರ್ತಿ ಎಂ.ಐ. ಅರುಣ್ ಪೀಠದಿಂದ ಮುಂದೂಡಿಕೆ ಮಾಡಲಾಗಿದೆ.

ಇದನ್ನೂ ಓದಿ: ಕಲಬುರಗಿ ಪಾಲಿಕೆಯಲ್ಲಿ ಕಿಂಗ್ ಮೇಕರ್ ಆಗಿದ್ದ ದಳಪತಿಗಳು ಕಂಗಾಲು; ಬಿಜೆಪಿ ಹೊಸತಂತ್ರಕ್ಕೆ ಬೆಚ್ಚಿಬಿದ್ದ ಜೆಡಿಎಸ್

ಇದನ್ನೂ ಓದಿ: ನನ್ನ ಕುಟುಂಬದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಲ್ಲ; ಜೆಡಿಎಸ್ ಆಫರ್ ನಿರಾಕರಿಸಿದ ಶಾಸಕ ಜಿಟಿ ದೇವೇಗೌಡ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ