ಶೀಘ್ರದಲ್ಲೇ ಕೊಡವರಿಗೆ ಹಿಂದುಳಿದ ವರ್ಗ ಸ್ಥಾನಮಾನ? ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ಏನು?
2015, 2021ರಲ್ಲಿ ರಾಜ್ಯಸರ್ಕಾರ ಈ ಶಿಫಾರಸು ತಿರಸ್ಕರಿಸಿತ್ತು. ಸಕ್ಷಮ ಪ್ರಾಧಿಕಾರದ ಒಪ್ಪಿಗೆ ಪಡೆದಿಲ್ಲವೆಂಬ ಕಾರಣ ನೀಡಿತ್ತು. ಇದಕ್ಕೆ ಪ್ರತಿಯಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ, ಆಯೋಗದ ಶಿಫಾರಸು ಅಂಗೀಕರಿಸುವಂತೆ ಆದೇಶ ಬಂದಿದೆ.
ಬೆಂಗಳೂರು: ಶೀಘ್ರದಲ್ಲೇ ಕೊಡವರಿಗೆ ಹಿಂದುಳಿದ ವರ್ಗ ಸ್ಥಾನಮಾನ ಲಭಿಸಲಿದೆಯಾ ಎಂಬ ಬಗ್ಗೆ ಪ್ರಶ್ನೆ ಮೂಡಿದೆ. ಈ ಸಂಬಂಧದ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸು ಅಂಗೀಕರಿಸಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. 3 ತಿಂಗಳಲ್ಲಿ ಆಯೋಗದ ಶಿಫಾರಸು ಅಂಗೀಕರಿಸಲು ಸೂಚನೆ ನೀಡಿದೆ. 2005, 2010 ರಲ್ಲಿ ಹಿಂದುಳಿದ ವರ್ಗಗಳ ಆಯೋಗ ಪ್ರವರ್ಗ 3(ಎ) ಅಡಿ ‘ಕೊಡಗರು’ ಬದಲಿಗೆ ‘ಕೊಡವ’, ‘ಕೊಡವರು’ ಎಂದು ಸೇರಿಸಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಶಿಫಾರಸು ಮಾಡಿತ್ತು.
ಆದರೆ, 2015, 2021ರಲ್ಲಿ ರಾಜ್ಯಸರ್ಕಾರ ಈ ಶಿಫಾರಸು ತಿರಸ್ಕರಿಸಿತ್ತು. ಸಕ್ಷಮ ಪ್ರಾಧಿಕಾರದ ಒಪ್ಪಿಗೆ ಪಡೆದಿಲ್ಲವೆಂಬ ಕಾರಣ ನೀಡಿತ್ತು. ಇದಕ್ಕೆ ಪ್ರತಿಯಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ, ಆಯೋಗದ ಶಿಫಾರಸು ಅಂಗೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಆದೇಶ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ: ಪೊಲೀಸ್ ಅಧಿಕಾರಿಗಳ ವಿರುದ್ಧದ ಪ್ರಕರಣ ರದ್ದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧದ ಪ್ರಕರಣ ರದ್ದುಗೊಳಿಸಲಾಗಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಕೇಸ್ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತ್, ಇನ್ಸ್‌ಪೆಕ್ಟರ್ ಮಾರುತಿ ವಿರುದ್ಧದ ಸಿಡಿ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಸದ ಆರೋಪ ಈ ಮೊದಲು ಕೇಳಿಬಂದಿತ್ತು. ಆದರ್ಶ್ ಅಯ್ಯರ್ ಖಾಸಗಿ ದೂರು ದಾಖಲಿಸಿದ್ದರು.
ರಮೇಶ್ ಜಾರಕಿಹೊಳಿ ಕೇಸ್‌ನ ತನಿಖೆ ಮುಕ್ತಾಯವಾಗಿದೆ. ಕಾನೂನು ಪ್ರಕಾರವೇ ತನಿಖೆ ನಡೆಸಲಾಗಿದೆ . ಅಂತಿಮ ವರದಿ ಸಲ್ಲಿಸಲು ಅನುಮತಿ ಕೋರಲಾಗಿದೆ. ಹೈಕೋರ್ಟ್‌ಗೆ ಈ ಸಂಬಂಧ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ 8ನೇ ಎಸಿಎಂಎಂ ಕೋರ್ಟ್ ಆದೇಶ ರದ್ದಿಗೆ ಮನವಿ ಮಾಡಲಾಗಿದೆ. ಎಸ್‌ಐಟಿ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದ್ದರು. ಇದೀಗ, ಪೊಲೀಸ್ ಅಧಿಕಾರಿಗಳ ವಿರುದ್ಧದ ತನಿಖೆ ರದ್ದುಗೊಳಿಸಿ ಆದೇಶ ನೀಡಲಾಗಿದೆ.
ಇದನ್ನೂ ಓದಿ: ಚಾರ್ ಧಾಮ್ ರಸ್ತೆ ಯೋಜನೆ: ಭದ್ರತೆಯ ದೃಷ್ಟಿಯಿಂದ ರಸ್ತೆ ಅಗಲೀಕರಣಕ್ಕೆ ಸುಪ್ರೀಂಕೋರ್ಟ್ ಅನುಮತಿ
ಇದನ್ನೂ ಓದಿ: ಕೊವಿಡ್-19 ಬೂಸ್ಟರ್ ಡೋಸ್‌ನ ಅಗತ್ಯವಿದೆಯೇ ಎಂಬುದರ ಬಗ್ಗೆ ಇನ್ನೂ ನಿರ್ಧರಿಸಲಾಗಿಲ್ಲ: ದೆಹಲಿ ಹೈಕೋರ್ಟ್‌ಗೆ ಕೇಂದ್ರ