ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ
ಕೊಡಗಿನ ಯೋಗಾನಂದ್, ರಫೀಕ್ ದೂರು ದಾಖಲಿಸಿದ್ದರು. ಪ್ರಕರಣದಿಂದ ಕೈಬಿಡುವಂತೆ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.
ಬೆಂಗಳೂರು: ನಗರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಕೇಸ್ ರದ್ದತಿಗೆ ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಣೆ ವ್ಯಕ್ತಪಡಿಸಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಕೇಸ್ ರದ್ದತಿಗೆ ನಕಾರ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಪತ್ರಕರ್ತರೆಂದು ಹೇಳಿ ಸಾಕ್ಷಿಗಳಿಗೆ ಬೆದರಿಕೆ ಆರೋಪ ಕೇಳಿಬಂದಿತ್ತು. ಅಬ್ದುಲ್‌ನಾಸಿರ್ ಮದನಿ ವಿರುದ್ಧ ಸಾಕ್ಷ್ಯ ಹೇಳದಂತೆ ಬೆದರಿಕೆ ಹೇರಲಾಗಿತ್ತು.
ಕೆ.ಕೆ.ಶಹೀನಾ, ಸುಬೇರ್ ಪಡುಪು, ಉಮ್ಮರ್ ಮೌಲ್ವಿ ಬೆದರಿಕೆ ಹಾಕಿದ್ದರು. ಸಾಕ್ಷಿಗಳ ಸಂದರ್ಶನ ನೆಪದಲ್ಲಿ ಬೆದರಿಕೆ ಆರೋಪ ಹಾಕಲಾಗಿತ್ತು. ಈ ಸಂಬಂಧ ಕೊಡಗಿನ ಯೋಗಾನಂದ್, ರಫೀಕ್ ದೂರು ದಾಖಲಿಸಿದ್ದರು. ಪ್ರಕರಣದಿಂದ ಕೈಬಿಡುವಂತೆ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.
ಇದನ್ನೂ ಓದಿ: ತಂದೆಯ ಸುಪರ್ದಿಗೆ ಮಗುವನ್ನು ಕೊಡಲು ಸಲ್ಲಿಸಿದ್ದ ಅರ್ಜಿ ವಜಾ; ಅರ್ಜಿದಾರನಿಗೆ 50,000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್
ಇದನ್ನೂ ಓದಿ: ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ 577 ಮರ ಕಡಿಯಲು ಹೈಕೋರ್ಟ್ ಅನುಮತಿ