ರಸ್ತೆ ಗುಂಡಿಗಳಿಗೆ ಸಂಬಂಧಿಸಿದ ಅಪಘಾತ ದೂರುಗಳಿಗೆ ಎಫ್​ಐಆರ್ ದಾಖಲಿಸುವಂತೆ ಹೈಕೋರ್ಟ್ ಆದೇಶ

| Updated By: Rakesh Nayak Manchi

Updated on: Dec 16, 2022 | 1:45 PM

ಬೆಂಗಳೂರು ರಸ್ತೆಗಳಲ್ಲಿನ ಗುಂಡಿಗಳನ್ನು ತುಂಬುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿತು.

ರಸ್ತೆ ಗುಂಡಿಗಳಿಗೆ ಸಂಬಂಧಿಸಿದ ಅಪಘಾತ ದೂರುಗಳಿಗೆ ಎಫ್​ಐಆರ್ ದಾಖಲಿಸುವಂತೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Follow us on

ಬೆಂಗಳೂರು: ರಸ್ತೆ ಗುಂಡಿಗಳಿಂದಾಗುವ (Road Potholes) ಅಪಘಾತಗಳಿಗೆ (Accident) ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ದೂರುಗಳು ಬಂದರೆ ಎಫ್‌ಐಆರ್ (FIR) ದಾಖಲಿಸುವಂತೆ ಕರ್ನಾಟಕ ಹೈಕೋರ್ಟ್ (Karnataka High Court) ಗುರುವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ದೂರುಗಳನ್ನು ದಾಖಲಿಸಿಕೊಳ್ಳುವಾಗ ಅಪಘಾತದ ತಾಂತ್ರಿಕ ಅಂಶಗಳನ್ನು ಮುಚ್ಚಿಡಬಾರದು ಎಂದು ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಬೆಂಗಳೂರು ರಸ್ತೆಗಳಲ್ಲಿನ ಗುಂಡಿಗಳನ್ನು ತುಂಬುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿತು. ಇದೇ ವೇಳೆ ಪ್ರಕರಣದಲ್ಲಿ ಕರ್ನಾಟಕ ಗೃಹ ಇಲಾಖೆಯನ್ನು ಪ್ರತಿವಾದಿಯನ್ನಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ.

ರಸ್ತೆಗುಂಡಿಗಳಿಂದಾಗಿ ಅಪಘಾತಕ್ಕೀಡಾದ ನಿವಾಸಿಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ತನಿಖೆ ನಡೆಸಬಹುದಾಗಿ ನ್ಯಾಯಾಲಯ ಪುನರುಚ್ಚರಿಸಿದೆ. ರಸ್ತೆ ಗುಂಡಿಯಿಂದ ಉಂಟಾದ ಅಪಘಾತದಲ್ಲಿ ಗಾಯಗೊಂಡ ಅಥವಾ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್​ ದಾಖಲಿಸಲು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದರೂ ಎಫ್​ಐಆರ್ ದಾಖಲಿಸಲಾಗುತ್ತಿಲ್ಲ ಎಂದು ವರದಿಯಾಗಿದೆ. ನಾಗರಿಗರು ದೂರು ನೀಡಲು ಬಂದಾಗ ಎಫ್ಐಆರ್ ದಾಖಲಿಸಲು ಹಿಂಜರಿಯಬಾರದು ಎಂದು ನಾವು ನಿರ್ದೇಶಿಸುತ್ತೇವೆ” ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ವಿಳಂಬ: ಕರ್ನಾಟಕ ಸರ್ಕಾರಕ್ಕೆ ದಂಡ ವಿಧಿಸಿದ ಹೈಕೋರ್ಟ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ಗುಂಡಿಗಳನ್ನು ತುಂಬುವ ಕಾರ್ಯವನ್ನು ಸಮೀಕ್ಷೆ ನಡೆಸಿ ಎಂಟು ವಾರಗಳಲ್ಲಿ ವರದಿ ಸಲ್ಲಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ಕ್ಕೆ ನಿರ್ದೇಶಿಸಿದ ಹಿಂದಿನ ಆದೇಶವನ್ನೂ ನ್ಯಾಯಾಲಯ ಉಲ್ಲೇಖಿಸಿದೆ. ಎನ್ಎಚ್ಎಐಗೆ ಎಲ್ಲಾ ಸಂಬಂಧಿತ ದಾಖಲೆಗಳನ್ನು ಒದಗಿಸುವಂತೆ ನಾಗರಿಕ ಸಂಸ್ಥೆಗೆ ನಿರ್ದೇಶಿಸುವುದರ ಜೊತೆಗೆ ಎನ್ಎಚ್ಎಐಗೆ ವರದಿಯನ್ನು ಸಲ್ಲಿಸಲು ಫೆಬ್ರವರಿ 3ರ ಗಡುವನ್ನು ನೀಡಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Fri, 16 December 22