ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ: ಡಿಕೆ ಶಿವಕುಮಾರ್ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ ಪ್ರಕರಣ ಸಂಬಂಧ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ: ಡಿಕೆ ಶಿವಕುಮಾರ್ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ ನಡೆಸಿದ ಹಿನ್ನಲೆ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್
Follow us
| Updated By: Rakesh Nayak Manchi

Updated on:Jul 14, 2023 | 10:45 PM

ಬೆಂಗಳೂರು, ಜುಲೈ 14: ರಾಹುಲ್ ಗಾಂಧಿಗೆ(Rahul Gandhi) ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ ನಡೆಸಿದ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ (Karnataka High Court) ರದ್ದುಗೊಳಿಸಿದ್ದಾರೆ. 2022ರ ಜೂ.16ರಂದು ಕೆಪಿಸಿಸಿ ವತಿಯಿಂದ ಕಾನೂನುಬಾಹಿರವಾಗಿ ರಾಜಭವನ ಚಲೋ ಪ್ರತಿಭಟನೆ ನಡೆಸಿದ ಹಿನ್ನೆಲೆ‌ ಶಿವಾಜಿನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಪ್ರಕರಣ ಸಂಬಂಧ 42ನೇ ಎಸಿಎಂಎಂ ಕೋರ್ಟ್ ಡಿಕೆ ಶಿವಕುಮಾರ್​ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ರದ್ದುಗೊಳಿಸುವಂತೆ ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಕಿರಿಯ ಶ್ರೇಣಿಯ ಅಧಿಕಾರಿಯಿಂದ ಪ್ರಕರಣ ದಾಖಲಿಸಿದ ಹಿನ್ನೆಲೆ ಅರ್ಜಿ ಪುರಸ್ಕರಿಸಿ ಪ್ರಕರಣ ರದ್ದುಪಡಿಸಿತು.

ಇದನ್ನು ಓದಿ: ತಂದೆ ತಾಯಿಯನ್ನು ಸಲಹದ ಪುತ್ರರ ತಪ್ಪಿಗೆ ಪ್ರಾಯಶ್ಚಿತವೇ ಇಲ್ಲ: ಹೈಕೋರ್ಟ್

ಜೂ.16ರಂದು ಕೆಪಿಸಿಸಿ ವತಿಯಿಂದ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ ಪ್ರತಿಭಟನೆಯನ್ನು ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಾತ್ರ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದರು. ಇದನ್ನು ಧಿಕ್ಕರಿಸಿ ಕ್ವೀನ್ಸ್​ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಿಂದ ಪ್ರತಿಭಟನೆ ರ್ಯಾಲಿ ನಡೆಸಲಾಗಿತ್ತು.

ಇತ್ತ, ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನೆಲೆ ಶಿವಾಜಿನಗರ ಪೊಲೀಸ್ ಠಾಣೆಯ ಸಬ್ ಇನ್​​ಸ್ಪೆಕ್ಟರ್ ಅವರು ಪ್ರಕರಣ ದಾಖಲಿಸಿದ್ದರು. ಅಲ್ಲದೆ, ದೂರಿನ ಅನ್ವಯ ಅಂತಿಮ ವರದಿಯನ್ನು 42ನೇ ಎಸಿಎಂಎಂ ಕೋರ್ಟ್​ಗೆ ಸಲ್ಲಿಸಲಾಗಿತ್ತು. ಅದರಂತೆ ನ್ಯಾಯಾಲಯವು ಸಮನ್ಸ್ ಕೂಡ ಜಾರಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 pm, Fri, 14 July 23

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ