ಮನೆ ಆವರಣದಲ್ಲಿ ಗಾಂಜಾ ಗಿಡ: ಬೆಂಗಳೂರಿನ ಹಿರಿಯ ನಾಗರಿಕನಿಗೆ ಹೈಕೋರ್ಟ್ ರಿಲೀಫ್

ಮನೆ ಆವರಣದಲ್ಲಿ ಬೆಳೆದಿದ್ದ ಗಾಂಜಾ ಗಿಡದಿಂದಾಗಿ ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದ 67 ವರ್ಷದ ಬೆಂಗಳೂರಿನ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ ಬಿಗ್​ ರಿಲೀಫ್ ನೀಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು ಸುಪ್ರೀಂಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ಅರ್ಜಿದಾರರಿಗೆ ರಿಲೀಫ್ ನೀಡಿದೆ. ಹಾಗಾದ್ರೆ, ಏನಿದು ಪ್ರಕರಣ? ಯಾರು ಆ ವ್ಯಕ್ತಿ? ಹೈಕೋರ್ಟ್ ಹೇಳಿದ್ದೇನು? ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಮನೆ ಆವರಣದಲ್ಲಿ ಗಾಂಜಾ ಗಿಡ: ಬೆಂಗಳೂರಿನ ಹಿರಿಯ ನಾಗರಿಕನಿಗೆ ಹೈಕೋರ್ಟ್ ರಿಲೀಫ್
Karnataka High Court
Edited By:

Updated on: May 05, 2025 | 4:20 PM

ಬೆಂಗಳೂರು, (ಮೇ 05): ಮನೆ ಆವರಣದಲ್ಲಿ ಬೆಳೆದಿದ್ದ ಗಾಂಜಾ ಗಿಡದಿಂದಾಗಿ (Cannabis Plants) ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದ 67 ವರ್ಷದ ವ್ಯಕ್ತಿಗೆ ಹೈಕೋರ್ಟ್  (Karnataka High Court)  ರಿಲೀಫ್ ನೀಡಿದೆ. 2023ರಲ್ಲಿ ಬೆಂಗಳೂರಿನ (Bengaluru) ಜಯನಗರದ ಚಂದ್ರಶೇಖರ್ ಎಂಬುವರ ಮನೆ ಆವರಣದಲ್ಲಿ ಐದು ಗಾಂಜಾ ಗಿಡಗಳು ಬೆಳೆದಿದ್ದವು. ಈ ಪ್ರಕರಣ ಸಂಬಂಧ ಪೊಲೀಸರು ಚಂದ್ರಶೇಖರ್​ ವಿರುದ್ಧ ಕೇಸ್ ದಾಖಲಿಸಿದ್ದರು. ಆದ್ರೆ, ಇದೀಗ ಆ ಪ್ರಕರಣವನ್ನು ಹೈಕೋರ್ಟ್ ಇಂದು (ಮೇ 05) ರದ್ದುಗೊಳಸಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಹಿರಿಯ ನಾಗರಿಕ ಚಂದ್ರಶೇಖರ್ ವಿರುದ್ಧದ ದೋಷಾರೋಪ ಪಟ್ಟಿಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಚಂದ್ರಶೇಖರ್, ತಾನು ಉದ್ದೇಶಪೂರ್ವಕವಾಗಿ ಗಾಂಜಾ ಬೆಳೆದಿಲ್ಲ, ತನ್ನಷ್ಟಕ್ಕೇ ಅದು ಬೆಳೆದಿತ್ತು ಎಂದು ವಾದ ಮಂಡಿಸಿದ್ರು. ಚಂದ್ರಶೇಖರ್ ಪರ ವಾದ ಮಂಡಿಸಿದ ವಕೀಲ ಜಯಶ್ಯಾಮ್ ಜಯಸಿಂಹರಾವ್, ಪರಾಗಸ್ಪರ್ಶದಿಂದಲೂ ತನ್ನಿಂತಾನೇ ಐದು ಗಾಂಜಾ ಬೆಳೆದಿವೆ. ಈ ಬಗ್ಗೆ ಮನೆ ಮಾಲೀಕ ಚಂದ್ರಶೇಖರ್ ಗೆ ಅರಿವಿಲ್ಲ. ಪೊಲೀಸರು ಹೇಳುವಂತೆ 27 ಕೆಜಿ ಗಾಂಜಾ ಸಿಕ್ಕಿಲ್ಲ, ಗಾಂಜಾ ಗಿಡವನ್ನು ಅದರ ಬೇರು, ರೆಂಬೆ ಕೊಂಬೆ, ಎಲೆ ಸಹಿತವಾಗಿ ತೂಕ ಹಾಕಿರುವುದು ಸರಿಯಲ್ಲ. ಗಾಂಜಾವನ್ನು ಪ್ರತ್ಯೇಕಿಸಿ ತೂಕ ಹಾಕಿಲ್ಲ ಹೀಗಾಗಿ ಒಟ್ಟಾರೆ ಪ್ರಕ್ರಿಯೆಯೇ ಕಾನೂನುಬಾಹಿರವೆಂದು ವಾದಿಸಿದ್ದರು.

ಇದನ್ನೂ ಓದಿ: ಕಲಬುರಗಿ: ವಿದ್ಯಾರ್ಥಿ ಸ್ವಯಂ ಪ್ರೇರಿತವಾಗಿ ಜನಿವಾರ ತೆಗೆದಿದ್ದನೇ? ಸಿಬ್ಬಂದಿ ಈಗ ಹೇಳೋದೇ ಬೇರೆ!

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ 67 ವಯಸ್ಸಿನ ಹಿರಿಯ ನಾಗರಿಕ ಚಂದ್ರಶೇಖರ್ ವಿರುದ್ಧದ ದೋಷಾರೋಪ ಪಟ್ಟಿಯನ್ನು ರದ್ದುಪಡಿಸಿದೆ. ಸುಪ್ರೀಂಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ಅರ್ಜಿದಾರರಿಗೆ ರಿಲೀಫ್ ನೀಡಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ