ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ

ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರ ವರ್ಷಾಚರಣೆಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಅಮೃತೇಶ್ ಮನವಿ ಮಾಡಿದ್ದರು. ಇದನ್ನು ತಿರಸ್ಕರಿಸಿದ ನ್ಯಾಯಪೀಠ, ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ ಎಂದು ಅಭಿಪ್ರಾಯಪಟ್ಟಿತು.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ
ಕರ್ನಾಟಕ ಹೈಕೋರ್ಟ್
Follow us
Ramesha M
| Updated By: Ganapathi Sharma

Updated on:Dec 28, 2023 | 12:33 PM

ಬೆಂಗಳೂರು, ಡಿಸೆಂಬರ್ 28: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ (New Year celebration) ನಿರ್ಬಂಧಿಸಲು ಕರ್ನಾಟಕ ಹೈಕೋರ್ಟ್ (Karnataka High Court) ನಿರಾಕರಿಸಿದೆ. ವಕೀಲ ಎನ್​ಪಿ ಅಮೃತೇಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ನಟರಾಜ್, ಕೆವಿ ಅರವಿಂದ ಅವರಿದ್ದ ಪೀಠ, ನಿರ್ಬಂಧ ಹೇರಲು ನಿರಾಕರಿಸಿದೆ.

ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊರ ವರ್ಷಾಚರಣೆಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಅಮೃತೇಶ್ ಮನವಿ ಮಾಡಿದ್ದರು. ಇದನ್ನು ತಿರಸ್ಕರಿಸಿದ ನ್ಯಾಯಪೀಠ, ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಕೋವಿಡ್​ಗೆ ಸದ್ಯಕ್ಕೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ ಎಂದು ಹೇಳಿತು. ಅಲ್ಲದೆ, ಕೋವಿಡ್ ನಿರ್ಬಂಧ ಕುರಿತ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿತು.

ಇದನ್ನೂ ಓದಿ: ಹೊಸ ವರ್ಷ ಸಂಭ್ರಮ: ಕ್ಲಬ್,‌ ಪಬ್, ರೆಸ್ಟೋರೆಂಟ್​ಗೆ ಎಂಟ್ರಿಯಾಗಲು ಬೇಕು ಆಧಾರ್! ಕಾರಣ ಇಲ್ಲಿದೆ 

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಹೊಸ ವರ್ಷದ ಪಾರ್ಟಿ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ ಮಧ್ಯೆ ಹೊಸ ವರ್ಷ ಆಚರಣೆ ವೇಳೆ ಡ್ರಗ್ಸ್ ಮಾಫಿಯಾ ಸೇರಿದಂತೆ ಇತರ ಮಾದಕ ವಸ್ತು ಸಾಗಾಟ, ಪೂರೈಕೆ ವಿರುದ್ಧ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೊಸ ವರ್ಷ ಆಚರಣೆ ಸಂದರ್ಭ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರನ್ನು ನೆಲಮಂಗಲ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಅಪರಾಧ ಪೊಲೀಸರು ಅಪರಾಧ ಚಟುವಟಿಕೆಗಳ ಮೇಲೆ ಸೂಕ್ಷ್ಮ ನಿಗಾ ಇರಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:24 pm, Thu, 28 December 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ