ಬೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯ ಪ್ರಶ್ನಿಸಿದ್ದ ರಿಟ್ ಅರ್ಜಿ ವಜಾ, ಹೈಕೋರ್ಟ್ ಹೇಳಿದ್ದೇನು?

ಕರ್ನಾಟಕದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಟೆಂಡರ್‌ನಲ್ಲಿ ಅಕ್ರಮ ನಡೆದಿರುವ ಆರೋಪ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿದ್ದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಮತ್ತೊಂದೆಡೆ ಬೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯ ಪ್ರಶ್ನಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಬೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯ ಪ್ರಶ್ನಿಸಿದ್ದ ರಿಟ್ ಅರ್ಜಿ ವಜಾ, ಹೈಕೋರ್ಟ್ ಹೇಳಿದ್ದೇನು?
Karnataka High Court
Updated By: ರಮೇಶ್ ಬಿ. ಜವಳಗೇರಾ

Updated on: Aug 13, 2025 | 3:28 PM

ಬೆಂಗಳೂರು, (ಆಗಸ್ಟ್ 13): ಬೆಸ್ಕಾಂನ ಸ್ಮಾರ್ಟ್​ ಮೀಟರ್​​ (Bescom smart meter) ಕಡ್ಡಾಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ವಾದ ಪ್ರತಿವಾದ ನಡೆದಿದ್ದು, ಇದೀಘ ಅಂತಿಮವಾಗಿ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಬೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯ ಪ್ರಶ್ನಿಸಿದ್ದ ರಿಟ್ ಅರ್ಜಿಯನ್ನು ಹಲವು ದಿನಗಳಿಂದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂತಿಮವಾಗಿ ವಾದ ಪ್ರತಿವಾದ ಆಲಿಸಿ ಇದೀಗ ಅರ್ಜಿಯನ್ನು ವಜಾಗೊಳಿಸಿದೆ.​ ಹಳೆಯ ಮೀಟರ್ ಬದಲಿಸುವುದಿಲ್ಲವೆಂದು ಎಜಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ವಿಭಾಗೀಯ ಪೀಠದಲ್ಲಿ ಈ ವಿಚಾರಕ್ಕೆ ಪಿಐಎಲ್ ದಾಖಲಾಗಿದೆ ಎಂದು ಹೇಳಿ ಜಯಲಕ್ಷ್ಮಿ , ಪಿ.ಎಂ.ಹರೀಶ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಹಳೆಯ ಮೀಟರ್ ಬದಲಿಸುವುದಿಲ್ಲವೆಂದು ಇಲ್ಲವೆಂದು ಎಜಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ವಿಭಾಗೀಯ ಪೀಠದಲ್ಲಿ ಈ ವಿಚಾರಕ್ಕೆ ಪಿಐಎಲ್ ದಾಖಲಾಗಿದೆ. ಪಿಐಎಲ್ ನಲ್ಲಿ ರಿಟ್ ಅರ್ಜಿಯ ಅಂಶಗಳನ್ನು ಯಥಾವತ್ತಾಗಿ ಉಲ್ಲೇಖಿಸಲಾಗಿದೆ. ಹೀಗಾಗಿ ಏಕಸದಸ್ಯ ಪೀಠದಲ್ಲಿ ಈ ಬಗ್ಗೆ ತೀರ್ಮಾನಿಸುವುದು ಸೂಕ್ತವಲ್ಲ ಎಂದು ಜಯಲಕ್ಷ್ಮಿ ಹಾಗೂ ಪಿ.ಎಂ.ಹರೀಶ್ ಸಲ್ಲಿಸಿದ ರಿಟ್ ಅರ್ಜಿ ವಜಾಗೊಳಿಸಿದೆ.

ಇದನ್ನೂ ಓದಿ: ಸ್ಮಾರ್ಟ್ ಮೀಟರ್: ಪಕ್ಕದ ರಾಜ್ಯದಲ್ಲಿ 900 ರೂ.ಇಲ್ಯಾಕೆ 10 ಸಾವಿರ: ಸರ್ಕಾರಕ್ಕೆ ಕೋರ್ಟ್ ಪ್ರಶ್ನೆ

ದೊಡ್ಡಬಳ್ಳಾಪುರದ ಟಿಬಿ ನಾರಾಯಣಪ್ಪ ಲೇಔಟ್​ ನಿವಾಸ ಎಂ ಜಯಲಕ್ಷ್ಮೀ ಅವರು ಹೊಸದಾಗಿ ನಿರ್ಮಿಸಿರುವ ತಮ್ಮ ಮನೆಗೆ ಸಿಂಗಲ್ ಫೇಸ್​ ನಿಂದ ತ್ರೀ ಫೇಸ್​ ಗೆ ಮೀಟರ್ ಪರಿವರ್ತನೆ ಮಾಡಿಕೊಳ್ಳುವುದಕ್ಕೆ ಮನವಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಬೆಸ್ಕಾಂ ಅಧಿಕಾರಿಗಳು, ಸ್ಮಾರ್ಟ್​ ಮೀರ್ಟ್ ಅವಳವಸಿಕೊಳ್ಳಬೇಕು ಎಂದು ತಾಕೀತು ಮಾಡಿ ಪತ್ರವೊಂದನ್ನು ನೀಡಿದ್ದರು. ಈ ಸಂಬಂಧ ದೊಡ್ಡಬಳ್ಳಾಪುರ ನಗರ ಉಪವಿಭಾಗ ಸಹಾಯ ಕಾರ್ಯನಿರ್ವಾಹಕ ಇಂಜಿನಿಯರ್ ನೀಡಿದ್ದ ಪತ್ರವನ್ನು ಪ್ರಶ್ನಿಸಿ ವಿಯಲಕ್ಷ್ಮೀ ಹೈಕೋರ್ಟ್​​ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸ್ಮಾರ್ಟ್ ಮೀಟರ್ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಸ್ಮಾರ್ಟ್ ಮೀಟರ್ ಅಳವಡಿಕೆಗೆ ಮಧ್ಯಂತರ ತಡೆ ನೀಡಿ, ಆಕ್ಷೇಪಣೆ ಸಲ್ಲಿಸಲು ಬೆಸ್ಕಾಂ ವಕೀಲರಿಗೆ ನೋಟಿಸ್ ಜಾರಿ ಮಾಡಿತ್ತು. ಸ್ಮಾರ್ಟ್ ಮೀಟರ್ ಕಡ್ಡಾಯ ಉಚಿತ ಭಾಗ್ಯಗಳನ್ನು ಕೊಟ್ಟಿರುವ ಪರಿಣಾಮಾನಾ? ನಿಮಗೆ ಉಚಿತ ವಿದ್ಯುತ್ ಕೇಳಿದವರು ಯಾರು? ಬಡವರು ಎಲ್ಲಿಗೆ ಹೋಗಬೇಕು ಎಂದು ಸರ್ಕಾರಿ ಪರ ವಕೀಲರನ್ನು ಜಡ್ಜ್ ತರಾಟೆಗೆ ತೆಗೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ