ಬೆಂಗಳೂರಲ್ಲಿ ಮಕ್ಕಳಿಂದ ಭಿಕ್ಷಾಟನೆ: ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚನೆ

| Updated By: guruganesh bhat

Updated on: Jun 15, 2021 | 9:09 PM

ಸರ್ವೆ ವೇಳೆ 720 ಅಪ್ರಾಪ್ತ ಮಕ್ಕಳ ಭಿಕ್ಷಾಟನೆ ಬೆಳಕಿಗೆ ಬಂದಿದ್ದು, 27 ಮಕ್ಕಳನ್ನು ಮಾಫಿಯಾ ನಿಯಂತ್ರಿಸುತ್ತಿರುವ ಬಗ್ಗೆ ವರದಿ ಹೈಕೋರ್ಟ್​ಗೆ ಸಲ್ಲಿಸಲಾಗಿತ್ತು. ಈ ವರದಿ ಸಲ್ಲಿಕೆಯಾದ ನಂತರವೂ ಕ್ರಮ ಕೈಗೊಳ್ಳದ ಬಗ್ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರಲ್ಲಿ ಮಕ್ಕಳಿಂದ ಭಿಕ್ಷಾಟನೆ: ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚನೆ
ಕರ್ನಾಟಕ ಹೈಕೋರ್ಟ್​
Follow us on

ಬೆಂಗಳೂರು: ಬೆಂಗಳೂರಿನಲ್ಲಿ ಮಕ್ಕಳಿಂದ ಭಿಕ್ಷಾಟನೆ ಪ್ರಕರಣದಲ್ಲಿ ಬಿಗು ಕ್ರಮ ಕೈಗೊಳ್ಳಲು ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಈ ಮುನ್ನ ಕಾನೂನು ಸೇವೆಗಳ ಪ್ರಾಧಿಕಾರ ವರದಿ ಸಲ್ಲಿಸಿತ್ತು. ಸರ್ವೆ ವೇಳೆ 720 ಅಪ್ರಾಪ್ತ ಮಕ್ಕಳ ಭಿಕ್ಷಾಟನೆ ಬೆಳಕಿಗೆ ಬಂದಿದ್ದು, 27 ಮಕ್ಕಳನ್ನು ಮಾಫಿಯಾ ನಿಯಂತ್ರಿಸುತ್ತಿರುವ ಬಗ್ಗೆ ವರದಿ ಹೈಕೋರ್ಟ್​ಗೆ ಸಲ್ಲಿಸಲಾಗಿತ್ತು. ಈ ವರದಿ ಸಲ್ಲಿಕೆಯಾದ ನಂತರವೂ ಕ್ರಮ ಕೈಗೊಳ್ಳದ ಬಗ್ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರ ಕಾನೂನು ಸೇವೆಗಳ ಪ್ರಾಧಿಕಾರ ವರದಿ ಮತ್ತು ಶಿಫಾರಸುಗಳ ಬಗ್ಗೆ ತನ್ನ ನಿಲುವು ತಿಳಿಸಬೇಕು. ವರದಿಯಲ್ಲಿ ಅಪರಾಧದ ಉಲ್ಲೇಖವಿದ್ದರೂ ಇದುವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿರುವ ಹೈಕೋರ್ಟ್, ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಆಯುಕ್ತರಿಗೆ ಬುಲಾವ್ ನೀಡುವುದಾಗಿ ಹೈಕೋರ್ಟ್ ಎಚ್ಚರಿಸಿತು. ಜತೆಗೆ, ಈ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳದಿದ್ದಲ್ಲಿ ಪೊಲೀಸ್ ಆಯುಕ್ತರ ಖುದ್ದು ಹಾಜರಿಗೆ ಸೂಚಿಸಬೇಕಾದೀತು ಎಂದು ಸಿಜೆ ಎ.ಎಸ್.ಒಕಾ ನೇತೃತ್ವದ ಪೀಠ ಎಚ್ಚರಿಕೆ ನೀಡಿದೆ. ವರದಿ ಬಗ್ಗೆ ಖುದ್ದು ಗಮನಹರಿಸಿ ಜೂನ್ 18ರೊಳಗೆ ಕ್ರಮ ಕೈಗೊಂಡ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ.

ಖಾಸಗಿ ಶಾಲೆಗಳ ಬೋಧನಾ ಶುಲ್ಕ ನಿಗದಿಗೆ ಸಮಿತಿ ರಚನೆ ಪ್ರಸ್ತಾಪ; ರಾಜ್ಯ ಸರ್ಕಾರದಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಕೆ
ಖಾಸಗಿ ಶಾಲೆಗಳಲ್ಲಿನ ಬೋಧನಾ ಶುಲ್ಕ ವಿಚಾರವಾಗಿ ಕರ್ನಾಟಕ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ. ರಾಜ್ಯದ ಅಡ್ವೋಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಈ ಬಗ್ಗೆ ಇಂದು (ಜೂನ್ 15) ಹೇಳಿಕೆ ನೀಡಿದ್ದಾರೆ. ಖಾಸಗಿ ಶಾಲೆಗಳಲ್ಲಿನ ಶುಲ್ಕ ನಿಗದಿ ಬಗ್ಗೆ ಸಮಿತಿ ರಚನೆ ಮಾಡುವಂತೆ ಪ್ರಸ್ತಾಪ ಮಾಡಲಾಗಿದೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಬೇಕು. ಬಳಿಕ, ಸಮಿತಿ ಸೂಚನೆಯಂತೆ ಶುಲ್ಕ ನಿಗದಿ ಮಾಡಲು ಪರಿಶೀಲನೆ ನಡೆಸಬೇಕು ಎಂದು ಹೇಳಲಾಗಿದೆ. ಈ ಬಗ್ಗೆ ವಿಚಾರಣೆಯನ್ನು ಜೂನ್ 21ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ.

ಶೇಕಡಾ 70ರಷ್ಟು ಶುಲ್ಕ ಪಡೆಯುವಂತೆ ಸರ್ಕಾರ ಆದೇಶಿಸಿತ್ತು. ಶೇಕಡಾ 30ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಸೂಚಿಸಿತ್ತು. ಆದರೆ, ಇದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸಿತ್ತು. ಕೊವಿಡ್​ನಿಂದ ಪೂರ್ಣ ಶುಲ್ಕ ಭರಿಸಲು ಪೋಷಕರಿಗೆ ಕಷ್ಟವಾಗಬಹುದು. ಕೊರೊನಾ ಹಾಗೂ ಲಾಕ್​ಡೌನ್​ನಿಂದ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಶುಲ್ಕದ ವಿಚಾರದಲ್ಲಿ ಸರ್ಕಾರ ಆದೇಶ ನೀಡಿತ್ತು.

ಇದೀಗ ಕರ್ನಾಟಕ ರಾಜ್ಯ ಸರ್ಕಾರದಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ. ಹೈಕೋರ್ಟ್​ಗೆ ಎಜಿ ಪ್ರಭುಲಿಂಗ್ ನಾವದಗಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಜೂನ್ 21ಕ್ಕೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ನಿಗದಿಪಡಿಸಿದೆ.

ಇದನ್ನೂ ಓದಿ: Karnataka Covid Update: 10 ತಿಂಗಳ ನಂತರ ಮೂರಂಕಿಗೆ ಇಳಿದ ಬೆಂಗಳೂರಿನ ಕೊವಿಡ್ ಸೋಂಕಿತರ ಸಂಖ್ಯೆ; ಬೆಂಗಳೂರಿನಲ್ಲಿ 985, ರಾಜ್ಯದಲ್ಲಿ 5,041 ಜನರಿಗೆ ಸೋಂಕು ದೃಢ

Corona Vaccine: ಕೊವಿಡ್ ಲಸಿಕೆ ಪಡೆಯಲು ಆನ್​ಲೈನ್ ರಿಜಿಸ್ಟ್ರೇಶನ್ ಅಥವಾ ಬುಕಿಂಗ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ

(Karnataka High Court says take strict action on Child begging to Bengaluru Police Commissioner)