ದೇಶದ ಭದ್ರತೆಗೆ ಆತಂಕ: ಆರೋಗ್ಯ ಇಲಾಖೆಯ ಟೆಂಡರ್ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್

ರಾಷ್ಟ್ರೀಯ ಹಿತಾಸಕ್ತಿ ಮತ್ತು ಭದ್ರತೆಯ ಕಾರಣದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೈಕೋರ್ಟ್​ ತಿಳಿಸಿದೆ.

ದೇಶದ ಭದ್ರತೆಗೆ ಆತಂಕ: ಆರೋಗ್ಯ ಇಲಾಖೆಯ ಟೆಂಡರ್ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 19, 2022 | 12:01 PM

ಬೆಂಗಳೂರು: ಚೀನಾ ಕಂಪನಿಯೊಂದರ ಏಜೆಂಟ್ ಆಗಿ ಕೆಲಸ ಮಾಡುವ ​ವ್ಯಕ್ತಿಯೊಬ್ಬರಿಗೆ ಸೇರಿದ ಸಂಸ್ಥೆಗೆ ನೀಡಿದ್ದ ಟೆಂಡರ್​ ಆದೇಶವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. ರಾಷ್ಟ್ರೀಯ ಹಿತಾಸಕ್ತಿ (National Security) ಮತ್ತು ಭದ್ರತೆಯ (Defence) ಕಾರಣದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೈಕೋರ್ಟ್​ ತಿಳಿಸಿದೆ. ಸಾಮಾನ್ಯ ಹಣಕಾಸು ನಿಯಮ 2017 (General Finance Rules 2017) ಉಲ್ಲೇಖಿಸಿರುವ ಹೈಕೋರ್ಟ್​, ಭಾರತದೊಂದಿಗೆ ಭೂಗಡಿ ಹಂಚಿಕೊಂಡಿರುವ ಯಾವುದೇ ದೇಶ ಟೆಂಡರ್​ನಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಈ ನಿಯಮ ತಿಳಿಸುತ್ತದೆ. ಈ ಅರ್ಜಿಯ ಪ್ರತಿವಾದಿಗಳಾಗಿ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರನ್ನೂ ಹೆಸರಿಸಲಾಗಿತ್ತು.

‘ಭಾರತದ ಭದ್ರತೆಯ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು ರೂಪಿಸಿರುವ ಈ ನಿಯಮಕ್ಕೆ ಕರ್ನಾಟಕ ಸರ್ಕಾರವು ಬದ್ಧವಾಗಿರುವುದಾಗಿ ಕರ್ನಾಟಕ ಸರ್ಕಾರವು ಒಪ್ಪಿಕೊಂಡಿದೆ. ಫೊರೆಸ್​ ಹೆಲ್ತ್​ಕೇರ್​ ಎಲ್​ಎಲ್​ಪಿ ಕಂಪನಿಗೆ ನೀಡಿದ್ದ ಟೆಂಡರ್​ಗೆ ತಡೆಯಾಜ್ಞೆ ನೀಡುವಂತೆ ಕೋರಿ ಫಿಲಿಪ್ಸ್​ ಇಂಡಿಯಾ ಲಿಮಿಟೆಡ್​ ಹೈಕೋರ್ಟ್​​ಗೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ನ್ಯಾಯಾಲಯ ಈ ಮೊದಲು ಪುರಸ್ಕರಿಸಿರಲಿಲ್ಲ. ಶಾಂಘೈ ಯುನೈಟೆಡ್ ಇಮೇಜಿಂಗ್ ಹೆಲ್ತ್​ಕೇರ್​ ಕಂಪನಿ ಲಿಮಿಟೆಡ್​ ಚೀನಾದ ಶಾಂಘೈನಲ್ಲಿ ಕೇಂದ್ರ ಕಚೇರಿ ಹೊಂದಿದೆ. ಈ ಕಂಪನಿಯ ಏಜೆಂಟ್ ಆಗಿ ಫೋರೆಸ್ ಹೆಲ್ತ್​ಕೇರ್​ ಕಾರ್ಯನಿರ್ವಹಿಸುತ್ತದೆ.

‘ಅರ್ಜಿದಾರರ ವಾದ ಆಲಿಸಿದ ನಂತರ ನಾವು ಮಧ್ಯಂತರ ತಡೆಯಾಜ್ಞೆ ನಿಡಲು ನಿರ್ಧರಿಸಿದ್ದೇವೆ’ ಎಂದು ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ವಿಭಾಗೀಯ ನ್ಯಾಯಪೀಠವು ಮೇ 5ರಂದು ಹೇಳಿತ್ತು.

ಮೇಲ್ನೋಟಕ್ಕೆ ಈ ಟೆಂಡರ್ ಮಂಜೂರಾತಿಯಿಂದ ಸಾಮಾನ್ಯ ಹಣಕಾಸು ನಿಯಮಗಳು ಉಲ್ಲಂಘನೆಯಾಗಿರುವುದು ಕಂಡು ಬಂದಿದೆ. ನೋಂದಣಿಯಾಗದ ಸಂಸ್ಥೆಗಳು ಇಂಥ ಟೆಂಡರ್​ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿವೆ ಎಂದು ನ್ಯಾಯಪೀಠವು ಹೇಳಿತ್ತು.

ಮುಂದಿನ ವಿಚಾರಣೆವರೆಗೆ ಟೆಂಡರ್ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ. ಟೆಂಡರ್ ಮಂಜೂರಾತಿ ಪಡೆದಿರುವ ಕಂಪನಿಯ 5ನೇ ಪ್ರತಿವಾದಿಯು ಚೀನಾದೊಂದಿಗೆ ಸಂಬಂಧ ಹೊಂದಿದ್ದಾರೆ. ಭಾರತದೊಂದಿಗೆ ಚೀನಾ ಭೂಗಡಿ ಹಂಚಿಕೊಂಡಿದೆ. ಹೀಗಾಗಿ ಆ ಸಂಸ್ಥೆಗೆ ಈ ಟೆಂಡರ್​ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

Published On - 12:01 pm, Thu, 19 May 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ