ನ್ಯಾಯಾಲಯದ ಆದೇಶ ಉಲ್ಲಂಘಿಸಿ ಘನತ್ಯಾಜ್ಯ ವಿಲೇವಾರಿ; ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವುದಾಗಿ ಹೈಕೋರ್ಟ್ ಎಚ್ಚರಿಕೆ

ಕೋರ್ಟ್​​​ ಆದೇಶ ಬಿಬಿಎಂಪಿ ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಇದು ಸಂಪೂರ್ಣವಾಗಿ ನ್ಯಾಯಾಂಗ ನಿಂದನೆಯಾಗಿದೆ. ಯಾರ ಆದೇಶದ ಮೇರೆಗೆ ತ್ಯಾಜ್ಯ ಸುರಿಯಲಾಗಿದೆ. ಈ ಬಗ್ಗೆ ಮಾಹಿತಿ ನೀಡುವಂತೆ ಬಿಬಿಎಂಪಿಗೆ ಕೋರ್ಟ್ ತಾಕೀತು ಮಾಡಿದೆ.

ನ್ಯಾಯಾಲಯದ ಆದೇಶ ಉಲ್ಲಂಘಿಸಿ ಘನತ್ಯಾಜ್ಯ ವಿಲೇವಾರಿ; ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವುದಾಗಿ ಹೈಕೋರ್ಟ್ ಎಚ್ಚರಿಕೆ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ganapathi bhat

Updated on:Feb 15, 2022 | 10:09 PM

ಬೆಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಘನತ್ಯಾಜ್ಯ ವಿಲೇವಾರಿ ಮಾಡಿದ ಬಗ್ಗೆ ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವುದಾಗಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಮಾರ್ಚ್ 5 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರ ಖುದ್ದು ಹಾಜರಿಗೆ ಆದೇಶ ನೀಡಲಾಗಿದೆ. ಮಿಟ್ಟಗಾನಹಳ್ಳಿ ಕ್ವಾರಿ ಪ್ರದೇಶದಲ್ಲಿ ಘನತ್ಯಾಜ್ಯ ವಿಲೇವಾರಿ ಮಾಡಲಾಗಿದೆ. ಹೈಕೋರ್ಟ್ ನಿರ್ಬಂಧಿಸಿದ್ದರೂ ತ್ಯಾಜ್ಯ ವಿಲೇವಾರಿ ಮಾಡಲಾಗಿದೆ. ಈ ಕಾರಣದಿಂದ ಬಿಬಿಎಂಪಿ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದೆ.

ಕೋರ್ಟ್​​ನಿಂದಲೇ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದ್ದು, ಜೈಲಿಗೆ ಹೋಗಲು ಗಂಟುಮೂಟೆ ಕಟ್ಟಿಕೊಂಡು ಬನ್ನಿ ಎಂದು ಖಡಕ್ ಸೂಚನೆ ಕೊಡಲಾಗಿದೆ. ಕೋರ್ಟ್​​​ ಆದೇಶ ಬಿಬಿಎಂಪಿ ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಇದು ಸಂಪೂರ್ಣವಾಗಿ ನ್ಯಾಯಾಂಗ ನಿಂದನೆಯಾಗಿದೆ. ಯಾರ ಆದೇಶದ ಮೇರೆಗೆ ತ್ಯಾಜ್ಯ ಸುರಿಯಲಾಗಿದೆ. ಈ ಬಗ್ಗೆ ಮಾಹಿತಿ ನೀಡುವಂತೆ ಬಿಬಿಎಂಪಿಗೆ ಕೋರ್ಟ್ ತಾಕೀತು ಮಾಡಿದೆ.

ಹಿಜಾಬ್ ವಿಚಾರಣೆ ಮುಂದೂಡಿದ ಹೈಕೋರ್ಟ್

ಕಾಲೇಜು ಅಭಿವೃದ್ದಿ ಸಮಿತಿಗೆ ಕಾಯ್ದೆಯಡಿ ಅಧಿಕಾರವಿಲ್ಲ. ಹೀಗಾಗಿ ಸಮವಸ್ತ್ರ ಜಾರಿ ಅಧಿಕಾರ ಸಮಿತಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಹಿಜಾಬ್ ವಿವಾದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಾಳೆಗೆ (ಫೆಬ್ರವರಿ 16) ಮುಂದೂಡಿದೆ. ನಾಳೆಗೆ ವಾದಮಂಡನೆ ಮುಂದುವರಿಸಲು ಹೈಕೋರ್ಟ್ ಸೂಚನೆ ನೀಡಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಮತ್ತೆ ವಿಚಾರಣೆ ನಡೆಯಲಿದೆ. ನಾಳೆ ಕಾಲೇಜುಗಳು ಆರಂಭವಾಗುತ್ತಿವೆ. ಹೀಗಾಗಿ ನಮ್ಮ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕು. ಅರ್ಜಿಯಲ್ಲಿ ವಿದ್ಯಾರ್ಥಿನಿಯರ ಸಹಿ ಇಲ್ಲ. ಹೀಗಾಗಿ ಮಧ್ಯಂತರ ಅರ್ಜಿ ಪರಿಗಣಿಸುವಂತಿಲ್ಲ ಎಂದು ಎಜಿ ಪ್ರಭುಲಿಂಗ್ ನಾವದಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಕೀಲರ ಸಹಿಯೊಂದಿಗೆ ಅರ್ಜಿ ಸಲ್ಲಿಸುವುದು ಸರಿಯಲ್ಲ. ವಿದ್ಯಾರ್ಥಿನಿಯರ ಸಮ್ಮತಿ ಮೇರೆಗೆ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ನನ್ನ ಸಹಿಯಿರುವ ಅರ್ಜಿ ಪರಿಗಣಿಸಬೇಕು. ವಿದ್ಯಾರ್ಥಿನಿಯರ ಪರ ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದಾರೆ. ಅರ್ಜಿಯಲ್ಲಿ ವಿದ್ಯಾರ್ಥಿನಿಯರ ಸಹಿ ಇಲ್ಲ. ವಿದ್ಯಾರ್ಥಿನಿಯೇ ಪ್ರಮಾಣಪತ್ರಕ್ಕೆ ಸಹಿ ಹಾಕಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ವಜಾಗೊಳಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಸಮವಸ್ತ್ರ ಜಾರಿ ಅಧಿಕಾರವನ್ನು ಕಾಲೇಜು ಅಭಿವೃದ್ದಿ ಸಮಿತಿಗೆ ನೀಡಲು ಸಾಧ್ಯವಿಲ್ಲ; ಹಿಜಾಬ್ ವಿಚಾರಣೆ ಮುಂದೂಡಿದ ಹೈಕೋರ್ಟ್

ಇದನ್ನೂ ಓದಿ: ಹಿಜಾಬ್ ಬಗ್ಗೆ ಕೋರ್ಟ್ ಆದೇಶ ಮಕ್ಕಳಿಗೆ ಅರ್ಥವಾಗುವುದಿಲ್ಲ, ಶಿಕ್ಷಕರು ಅದನ್ನು ವಿವರಿಸಬೇಕು ಎನ್ನುತ್ತಾರೆ ಮೈಸೂರು ಡಿಡಿಪಿಐ

Published On - 10:07 pm, Tue, 15 February 22

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್