Chitradurga Muruga shree: ಮುರುಘಾ ಶ್ರೀಗೆ ಮತ್ತೊಂದು ಬಿಗ್ ರಿಲೀಫ್: ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆ
Chitradurga Muruga Sharan: ಮಠದ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾಶ್ರೀಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಮುರುಘಾ ಶರಣರಿಗೆ ಕರ್ನಾಟಕ ಹೈಕೋರ್ಟ್ನಿಂದ ಮತ್ತೊಂದು ಬಿಗ್ ರಿಲೀಫ್ ಸಿಕ್ಕಿದೆ.
ಬೆಂಗಳೂರು, (ನವೆಂಬರ್ 21): ಮಠದ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಶ್ರೀಗಳು(Chitradurga Muruga Sharan) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮುರುಘಾ ಶ್ರೀ ಪ್ರಕರಣಗಳ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ (Karnataka high Court) ತಡೆಯಾಜ್ಞೆ ನೀಡಿದೆ. ಚಿತ್ರದುರ್ಗ 2ನೇ ಜಿಲ್ಲಾ ನ್ಯಾಯಾಧೀಶರ ಮುಂದಿರುವ ಕೇಸ್ಗಳಿಗೆ ತಡೆ ನೀಡಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಇದರೊಂದಿಗೆ ಮುರುಘಾ ಶರಣರಿಗೆ ಮತ್ತೊಂದು ಬಿಗ್ ರಿಲೀಫ್ ಸಿಕ್ಕಂತಾಗಿದೆ.
2ನೇ ಅಪರ ಜಿಲ್ಲಾ ನ್ಯಾಯಾಧೀಶರಿಂದ ಪೂರ್ವಾಗ್ರಹಪೀಡಿತ ಕ್ರಮ ಆರೋಪ ಹಿನ್ನೆಲೆಯಲ್ಲಿ ಸಾಕ್ಷ್ಯ ವಿಚಾರಣೆ ಬೇರೆ ಕೋರ್ಟ್ಗೆ ವರ್ಗಾಯಿಸಲು ಮುರುಘಾ ಶ್ರೀ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ಹೈಕೋರ್ಟ್ಗೆ ಮನವಿ ಮಾಡಿದ್ದು, ಜಾಮೀನು ನೀಡಿದಾಗಲೂ ತಕ್ಷಣ ಬಿಡುಗಡೆಗೆ ಆದೇಶಿಸಲಿಲ್ಲ. ಬಿಡುಗಡೆ ಆದೇಶ ಹೊರಡಿಸಲು ತಡ ಮಾಡಿದ್ದಾರೆ. ಇದರಿಂದಾಗಿ ಮೂರು ದಿನ ಮುರುಘಾ ಶ್ರೀ ಜೈಲಿನಲ್ಲಿರಬೇಕಾಯ್ತು. ವಿಚಾರಣೆ ಮುಂದೂಡುವಂತೆ ಆದೇಶಿಸಿದ್ದರೂ ವಿಚಾರಣೆ ನಡೆಸಲಾಗಿದೆ. ಚಿತ್ರದುರ್ಗಕ್ಕೆ ಬರದಂತೆ ಹೈಕೋರ್ಟ್ ನಿರ್ಬಂಧಿಸಿದ್ದರೂ ವಾರಂಟ್ ಜಾರಿ ಮಾಡಿದೆ. ಚಿತ್ರದುರ್ಗ ಜಿಲ್ಲೆಗೆ ಕರೆತರುವಂತೆ 2ನೇ ಅಪರ ಜಿಲ್ಲಾ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಾಸ್ ಪೋರ್ಟ್ ವಶಕ್ಕೆ ನೀಡಿದಾಗಲೂ ಅದರ ಪರಿಶೀಲನೆಗೆ ಕಳುಹಿಸಿದರು. ಹೈಕೋರ್ಟ್ ಆದೇಶ ವಿಫಲಗೊಳಿಸಲು ಬಂಧನಕ್ಕೆ ಆದೇಶಿಸಿದ್ದಾರೆ ಎಂದು ವಾದ ಮಂಡಿಸಿದರು.
ಇದನ್ನೂ ಓದಿ: Murugha Shree: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ
ಮುರುಘಾಶ್ರೀ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರ ವಾದವನ್ನು ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಚಿತ್ರದುರ್ಗ 2ನೇ ಜಿಲ್ಲಾ ನ್ಯಾಯಾಧೀಶರ ಮುಂದಿರುವ ಮುರುಘಾ ಶ್ರೀಗಳ ಪ್ರಕರಣ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದ್ದಾರೆ.
ಇದರೊಂದಿಗೆ ಮುರುಘಾ ಶ್ರೀಗಳು ಮೇಲಿಂದ ಮೇಲೆ ರಿಲೀಫ್ ಸಿಕ್ಕಂತಾಗಿದೆ. ಈಗಾಗಲೇ ಮುರುಘಾ ಶರಣರು ಮೊದಲ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡು ಒಂದು ವರ್ಷದ ನಂತರ ಜೈಲಿನಿಂದ ಆಚೆ ಬಂದಿದ್ದರು. ಆದ್ರೆ, 2ನೇ ಪೋಕ್ಸೋ ಪ್ರಕರಣದಲ್ಲಿ ನಿನ್ನೆ(ನವೆಂಬರ್ 21) ಚಿತ್ರದುರ್ಗ ನ್ಯಾಯಾಲಯ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ಅದರಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀರು ಶ್ರೀಗಳು ಬಂಧಿಸಿದ್ದರು. ಆದ್ರೆ, ಇತ್ತ ಹೈಕೋರ್ಟ್ ತಡೆ ನೀಡಿತ್ತು. ಬಳಿಕ ಶರಣರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಇದೀಗ ಪ್ರಕರಗಳ ವಿಚಾರಣೆಗೆ ತಡೆಯಾಜ್ಞೆ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:57 am, Tue, 21 November 23