ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಕೋರ್ಟ್ ತಡೆ

| Updated By: ರಮೇಶ್ ಬಿ. ಜವಳಗೇರಾ

Updated on: Apr 08, 2024 | 3:51 PM

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​ ವಿರುದ್ಧ ವಿರುದ್ಧ ರಾಜ್ಯ ಸರ್ಕಾರ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ಅವರನ್ನು ನೇಮಕ ಮಾಡಿದ್ದು, ಇದೀಗ ಈ ನೇಮಕಾತಿಗೆ ಕರ್ನಾಟಕ ಹೈಕೋರ್ಟ್​ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಕೋರ್ಟ್ ತಡೆ
Follow us on

ಬೆಂಗಳೂರು, (ಏಪ್ರಿಲ್ 08): ಮುಸ್ಲಿಂ ಮಹಿಳೆಯರ ‘ಶಾಶ್ವತ ಗಂಡ’ ಎನ್ನುವ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ (kalladka prabhakar bhat) ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್ (Karnataka High Court) ತಡೆಯಾಜ್ಞೆ ನೀಡಿದೆ. ಮುಸ್ಲಿಂ ಮಹಿಳೆಯರ ಬಗ್ಗೆ ಹೇಳಿಕೆ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಈ ನೇಮಕ ಪ್ರಶ್ನಿಸಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಏಪ್ರಿಲ್ 08) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಕೇಸ್, ಪ್ರಭಾಕರ್ ಭಟ್​ಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್

ಏನಿದು ಪ್ರಭಾಕರ ಭಟ್ಟರ ಪ್ರಕರಣ ?

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ’ ಎಂದು ಭಟ್ ಹೇಳಿದ್ದರು. ಇನ್ನು ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಲಾಗಿದೆ. ಇದೀಗ ಈ ಎಫ್​ಐಆರ್ ರದ್ದು ಕೋರಿ ಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ