AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಕಾರಿ ಶ್ವಾನಗಳ ಸಾಕಾಣಿಕೆ ನಿಷೇಧ: ಕೇಂದ್ರದ ಆದೇಶ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಮಾನವ ಜೀವಕ್ಕೆ ಅಪಾಯಕಾರಿ ಎಂದು ಕೇಂದ್ರ ಸರ್ಕಾರ 20ಕ್ಕೂ ಹೆಚ್ಚು ಅಪಾಯಕಾರಿ ಶ್ವಾನ ತಳಿಗಳ ಮಾರಾಟ, ಸಾಕಾಣಿಕೆಯನ್ನು ನಿಷೇಧಿಸಿ ಇತ್ತೀಗೆಷ್ಟೇ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದ್ರೆ, ಇದೀಗ ಕರ್ನಾಟಕ ಹೈಕೋರ್ಟ್​, ಕೇಂದ್ರ ಸರ್ಕಾರದ ಈ ಸುತ್ತೋಲೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹಾಗಾದ್ರೆ ಹೈಕೋರ್ಟ್ ಹೇಳಿದ್ದೇನು? ಇಲ್ಲಿದೆ ವಿವರ.

ಅಪಾಯಕಾರಿ ಶ್ವಾನಗಳ ಸಾಕಾಣಿಕೆ ನಿಷೇಧ: ಕೇಂದ್ರದ ಆದೇಶ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on: Apr 10, 2024 | 6:24 PM

Share

ಬೆಂಗಳೂರು, (ಏಪ್ರಿಲ್ 10): ಮಾನವ ಜೀವಕ್ಕೆ ಅಪಾಯಕಾರಿ ಎನ್ನಲಾಗಿರುವ  23ಕ್ಕೂ ಹೆಚ್ಚು ಶ್ವಾನ ತಳಿಗಳ(dangerous dog breeds)  ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದ್ರೆ, ಇಂದು(ಏಪ್ರಿಲ್ 10) ಕರ್ನಾಟಕ ಹೈಕೋರ್ಟ್ (Karnataka High Court) ​ ಕೇಂದ್ರದ ಸುತ್ತೋಲೆಯನ್ನು ರದ್ದುಗೊಳಸಿ ಆದೇಶ ಹೊಡಿಸಿದೆ. ಈ ರೀತಿಯ ಕ್ರಮಕ್ಕೂ ಮುನ್ನ ಶ್ವಾನ ತಳಿ ಸಂವರ್ಧನಾ‌ ಸಂಘಟನೆಯೊಂದಿಗೆ ಸಮಾಲೋಚಿಸಬೇಕು ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

ಕೆಲ ಶ್ವಾನ ತಳಿ ನಿಷೇಧಿಸಿ ಕೇಂದ್ರ ಸರ್ಕಾರ ಹೊಡಸಿದ್ದ ಸುತ್ತೋಲೆ ಪ್ರಶ್ನಿಸಿ ಕಿಂಗ್ ಸಾಲೊಮನ್ ಡೇವಿಡ್ ಮತ್ತಿತರರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರದ ನಿಷೇಧ ಸುತ್ತೋಲೆಯನ್ನು ರದ್ದುಗೊಳಸಿದೆ. ಕಾಯ್ದೆಯಡಿ ರಚಿಸಿದ ಸಮಿತಿಯ ಶಿಫಾರಸು ಮಾತ್ರ ಪರಿಗಣಿಸಬೇಕು. ಕ್ರಮಕ್ಕೆ ಮುನ್ನ ಶ್ವಾನ ತಳಿ ಸಂವರ್ಧನಾ‌ ಸಂಘಟನೆಯೊಂದಿಗೆ ಸಮಾಲೋಚಿಸಬೇಕು. ಸರ್ಕಾರ ಶ್ವಾನ ತಳಿ‌ ನಿಷೇಧಿಸುವ ಮುನ್ನ ಕಾನೂನಿನ ಕ್ರಮ ಅನುಸರಿಸಬೇಕು. ಶ್ವಾನ ಪಾಲಕರ ಮೇಲೆಯೂ ಹೊಣೆ‌ನಿಗದಿಪಡಿಸುವ ಅಗತ್ಯವಿದೆ. ಶ್ವಾನ ಕಡಿತಕ್ಕೊಳಗಾದವರಿಗೆ ಚಿಕಿತ್ಸೆ, ನಷ್ಟಪರಿಹಾರದಂತಹ ಹೊಣೆ ನಿಗದಿ ಸೂಕ್ತ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಪಿಟ್‌ಬುಲ್ ಟೆರಿಯರ್ ಸೇರಿದಂತೆ 23 ‘ಅಪಾಯಕಾರಿ’ ಶ್ವಾನ ತಳಿ ನಿಷೇಧಕ್ಕೆ ಕೇಂದ್ರ ಪ್ರಸ್ತಾಪ

ಕೇಂದ್ರದ ಸುತ್ತೋಲೆಯನ್ನು ಪ್ರಶ್ನಿಸಿ, ಬೆಂಗಳೂರಿನ ಕಿಂಗ್ ಸೋಲ್ಮನ್ ಡೇವಿಡ್ ಹಾಗೂ ಮರ್ಡೋನಾ ಜಾನ್ ಎಂಬುವರು ಸಲ್ಲಿಸಿದ್ದ ಆಕ್ಷೇಪಾರ್ಹ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರುಳ್ಳ ಪೀಠ, ಕೇಂದ್ರದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ಏಪ್ರಿಲ್ 6ರಂದು ಇದೇ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿತ್ತು. ಏ. 10ರಂದು ಈ ಪ್ರಕರಣದ ತೀರ್ಪು ನೀಡಿರುವ ಹೈಕೋರ್ಟ್, ಕೇಂದ್ರ ಸರ್ಕಾರ ಮಾ. 12ರಂದು ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸಿ ತೀರ್ಪು ನೀಡಿದೆ.

ಇದನ್ನೂ ಓದಿ: ಕ್ರೂರ ಮತ್ತು ಅಪಾಯಕಾರಿ ನಾಯಿ ತಳಿಗಳ ಮೇಲಿನ ನಿಷೇಧಕ್ಕೆ ಹೈಕೋರ್ಟ್​ ತಡೆ

ಕೇಂದ್ರ ನಿಷೇಧಿಸಿದ್ದ ಶ್ವಾನಗಳ ತಳಿ ಪಟ್ಟಿ ಹೀಗಿದೆ

ಪಿಟ್‌ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್, ಕಂಗಲ್, ರಷ್ಯನ್ ಶೆಫರ್ಡ್, ಟೊರ್ನ್‌ಜಾಕ್, ಸರ್ಪ್ಲಾನಿನಾಕ್, ಜಪಾನೀಸ್ ಟೋಸಾ ಮತ್ತು ಅಕಿಟಾ, ಮಾಸ್ಟಿಫ್ಸ್, ರಾಟ್‌ವೀಲರ್, ಟೆರಿಯರ್‌ಗಳು ರಿಡ್ಜ್ಬ್ಯಾಕ್, ವುಲ್ಫ್ ಡಾಗ್ಸ್, ಕೆನರಿಯೊ, ಅಕ್ಬಾಶ್ ನಾಯಿ, ಮಾಸ್ಕೋ ಗಾರ್ಡ್ ಡಾಗ್, ಕೇನ್ ಕೊರ್ಸೊ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್