ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ವಿಳಂಬ; ಹೈಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಲ್ಲಾ ಪಂಚಾಯತ್,‌ ತಾಲೂಕು ಪಂಚಾಯತ್ ಚುನಾವಣೆ ನಡೆಸುವುದಕ್ಕೆ ಆಯೋಗ ಮನವಿ ಮಾಡಿದೆ. ಕ್ಷೇತ್ರ ಪುನರ್ ವಿಂಗಡಣೆಗೆ ಸರ್ಕಾರ ಆಯೋಗ ರಚಿಸಿತ್ತು. ರಾಜ್ಯ ಚುನಾವಣಾ ಆಯೋಗ ಸರ್ಕಾರದ ಕ್ರಮ ಪ್ರಶ್ನಿಸಿದೆ.

ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ವಿಳಂಬ; ಹೈಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ
ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ವಿಳಂಬ ಹಿನ್ನೆಲೆ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ, ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್ ನೀಡಿದೆ. ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿದ್ದಾರೆ.

ಸಂವಿಧಾನದಡಿ ಚುನಾವಣೆಯನ್ನು ಮುಂದೂಡುವಂತಿಲ್ಲ. ಈ ಹಿಂದಿನಂತೆ ಜಿಲ್ಲಾ ಪಂಚಾಯತ್,‌ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಚುನಾವಣೆ ನಡೆಸಬೇಕು. ಜಿಲ್ಲಾ ಪಂಚಾಯತ್,‌ ತಾಲೂಕು ಪಂಚಾಯತ್ ಚುನಾವಣೆ ನಡೆಸುವುದಕ್ಕೆ ಆಯೋಗ ಮನವಿ ಮಾಡಿದೆ. ಕ್ಷೇತ್ರ ಪುನರ್ ವಿಂಗಡಣೆಗೆ ಸರ್ಕಾರ ಆಯೋಗ ರಚಿಸಿತ್ತು. ರಾಜ್ಯ ಚುನಾವಣಾ ಆಯೋಗ ಸರ್ಕಾರದ ಕ್ರಮ ಪ್ರಶ್ನಿಸಿದೆ.

ದೆಹಲಿ: ಬಿಬಿಎಂಪಿ ಚುನಾವಣೆ ಪ್ರಕರಣ ವಿಚಾರಣೆಯನ್ನು ಡಿ.14ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಎಲೆಕ್ಷನ್ ವಿಚಾರವಾಗಿ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಲಾಗಿದೆ. ಪ್ರಕರಣವನ್ನು ಸುಪ್ರೀಂಕೋರ್ಟ್ ಡಿಸೆಂಬರ್ 14ಕ್ಕೆ ಮುಂದೂಡಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ; ನಿಯಂತ್ರಣ ಕ್ರಮಗಳ ಅನುಷ್ಠಾನಕ್ಕೆ ಸರ್ಕಾರಗಳಿಗೆ 24 ಗಂಟೆಗಳ ಡೆಡ್​ಲೈನ್ ಕೊಟ್ಟು, ವಾರ್ನ್​ ಮಾಡಿದ ಸುಪ್ರೀಂಕೋರ್ಟ್​​

ಇದನ್ನೂ ಓದಿ: ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ

Click on your DTH Provider to Add TV9 Kannada