Karnataka Hijab Row: ಕಾಲೇಜುಗಳು ಆರಂಭ ಹಿನ್ನೆಲೆ; ಮುನ್ನೆಚ್ಚರಿಕೆ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ
ರಾಮನಗರ, ಬಾಗಲಕೋಟೆ, ರಾಯಚೂರು, ವಿಜಯಪುರ, ಕೊಪ್ಪಳ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಪ್ರೌಢಶಾಲೆ, ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಂಗಳೂರು: ಬುಧವಾರದಿಂದ (ಫೆಬ್ರವರಿ 16) ರಾಜ್ಯಾದ್ಯಂತ ಕಾಲೇಜುಗಳು ಆರಂಭ ಹಿನ್ನೆಲೆ ಕೆಲ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ರಾಮನಗರ, ಬಾಗಲಕೋಟೆ, ರಾಯಚೂರು, ವಿಜಯಪುರ, ಕೊಪ್ಪಳ, ಉತ್ತರ ಕನ್ನಡ, ಮೈಸೂರು, ಮಂಡ್ಯ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಪ್ರೌಢಶಾಲೆ, ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 3 ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಶಿವಮೊಗ್ಗ ಡಿಸಿ ಡಾ.ಆರ್.ಸೇಲ್ವಮಣಿ ಆದೇಶ ನೀಡಿದ್ದಾರೆ. ಶಿವಮೊಗ್ಗದ ಬಾಪೂಜಿ ನಗರದ ಪ್ರಥಮ ದರ್ಜೆ ಕಾಲೇಜು, ನಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸಾಗರದ ಪದವಿ ಪೂರ್ವ ಕಾಲೇಜಿಗೆ ನಾಳೆ ರಜೆ ಘೋಷಿಸಲಾಗಿದೆ.
ಹಿಜಾಬ್ ವಿವಾದ ಹಿನ್ನೆಲೆ ಜಿಲ್ಲಾಡಳಿತ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಕಾಲೇಜು ಒಳಾಂಗಣದಲ್ಲಿ ಹೊರಗಿನವರಿಗೆ ಮತ್ತು ಮಾಧ್ಯಮಕ್ಕೆ ನೋ ಎಂಟ್ರಿ ಎಂದು ತಿಳಿಸಲಾಗಿದೆ. ಪ್ರತಿ ಕಾಲೇಜುಗಳ ಮುಂದೆ ಪೊಲೀಸ್ ನಿಯೋಜನೆ ಮಾಡಲಾಗಿದೆ. ಪ್ರತಿ ಕಾಲೇಜಿನ ಪ್ರಾಂಶುಪಾಲರಿಂದ ಜಿಲ್ಲಾಡಳಿತ ಮಾಹಿತಿ ಪಡೆದುಕೊಂಡಿದೆ. ಕೋಟ್೯ನ ಮಧ್ಯಂತರ ಆದೇಶ ಪಾಲಿಸುವಂತೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಚಲನವಲನಗಳನ್ನು ಪೋಲಿಸ್ ಇಲಾಖೆ ಗಮನಿಸುತ್ತಿದೆ. ಹಳಿಯಾಳ, ಭಟ್ಕಳ, ಬನವಾಸಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.
ಹಿಜಾಬ್ ಕೇಸರಿ ಶಾಲು ವಿವಾದ ಹಿನ್ನಲೆ ಕೊಪ್ಪಳ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇಂದಿನಿಂದ 20 ರವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಈ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಆದೇಶ ನೀಡಿದ್ದಾರೆ. ಇಂದು ರಾತ್ರಿ ಇಂದಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಆಗಲಿದೆ. ಐದಕ್ಕಿಂತ ಹೆಚ್ಚು ಜನರು ಸೇರದಂತೆ ಸೂಚನೆ ಕೊಡಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಕೂಡ ಶಾಲಾ- ಕಾಲೇಜುಗಳ ಸುತ್ತ ನಿಷೇಧಾಜ್ಞೆ ಜಾರಿಮಾಡಲಾಗಿದೆ. ಎಲ್ಲಾ ಪ್ರೌಢಶಾಲೆ, ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಆಗಿದೆ. ನಿಷೇಧಾಜ್ಞೆ ಜಾರಿಗೊಳಿಸಿ ರಾಮನಗರ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಇದನ್ನೂ ಓದಿ: ಸಮವಸ್ತ್ರ ಜಾರಿ ಅಧಿಕಾರವನ್ನು ಕಾಲೇಜು ಅಭಿವೃದ್ದಿ ಸಮಿತಿಗೆ ನೀಡಲು ಸಾಧ್ಯವಿಲ್ಲ; ಹಿಜಾಬ್ ವಿಚಾರಣೆ ಮುಂದೂಡಿದ ಹೈಕೋರ್ಟ್
ಇದನ್ನೂ ಓದಿ: ಹಿಜಾಬ್ ಜತೆ ಇದೀಗ ಮತ್ತೊಂದು ವಿವಾದ; ದಾವಣಗೆರೆಯಲ್ಲಿ ತಲೆಗೆ ಬಿಳಿ ಟೊಪ್ಪಿಗೆ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿಗಳು
Published On - 8:34 pm, Tue, 15 February 22