ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದ ವಿವರಣೆ ಕೇಳಿದ ಗೃಹ ಇಲಾಖೆ, ತನ್ವೀರ್ ಸೇಠ್ ಆಗ್ರಹಕ್ಕೆ ಮಣಿದ ರಾಜ್ಯ ಸರ್ಕಾರ

ಇಡೀ ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಅಮಾಯಕರನ್ನು ಬಿಡುಗಡೆ ಮಾಡುವಂತೆ ಸರ್ಕಾರದ ಮೇಲೆ ಮೈಸೂರಿನ ಎನ್​.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಪತ್ರ ಬರೆದು ಒತ್ತಡ ಹೇರಿದ್ದರು. ಸದ್ಯ ಸಚಿವ ಸಂಪುಟ ಉಪ ಸಮಿತಿ ಸೂಚನೆ ಮೇರೆಗೆ ಗೃಹ ಇಲಾಖೆಯು ಪ್ರಕರಣದ ವಿವರಣೆ ಕೇಳಿದೆ.

ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದ ವಿವರಣೆ ಕೇಳಿದ ಗೃಹ ಇಲಾಖೆ, ತನ್ವೀರ್ ಸೇಠ್ ಆಗ್ರಹಕ್ಕೆ ಮಣಿದ ರಾಜ್ಯ ಸರ್ಕಾರ
ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದ ವಿವರಣೆ ಕೇಳಿದ ಗೃಹ ಇಲಾಖೆImage Credit source: PTI
Follow us
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi

Updated on: Oct 03, 2023 | 1:33 PM

ಬೆಂಗಳೂರು, ಅ.3: ಇಡೀ ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ (KG Halli DG Halli Violence) ಪ್ರಕರಣ ಸಂಬಂಧ ಅಮಾಯಕರನ್ನು ಬಿಡುಗಡೆ ಮಾಡುವಂತೆ ಸರ್ಕಾರದ ಮೇಲೆ ಶಾಸಕ ತನ್ವೀರ್ ಸೇಠ್ (Tanveer Sait) ಪತ್ರ ಬರೆದು ಒತ್ತಡ ಹೇರಿದ್ದರು. ಇದೀಗ ಗೃಹ ಇಲಾಖೆಯು ಪ್ರಕರಣದ ವಿವರಣೆ ಕೇಳುವ ಮೂಲಕ ಸ್ವಪಕ್ಷದ ಶಾಸಕರ ಒತ್ತಡಕ್ಕೆ ಕಾಂಗ್ರೆಸ್ ಸರ್ಕಾರ ಮಣಿಯಿತಾ ಎಂಬ ಪ್ರಶ್ನೆ ಎದಿದ್ದೆ.

ತನ್ವೀರ್ ಸೇಠ್ ಪತ್ರ ಆಧರಿಸಿ ಗೃಹ ಇಲಾಖೆಗೆ ಸಚಿವ ಸಂಪುಟ ಉಪ ಸಮಿತಿ ಸೂಚಿಸಿತ್ತು. ಹೀಗಾಗಿ ಗೃಹ ಇಲಾಖೆಯು ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದ ಸಂಪೂರ್ಣ ವಿವರಣೆ ನೀಡುವಂತೆ ಡಿಜಿಐಜಿಪಿ ಸೂಚನೆ ನೀಡಿದೆ.

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಕೈ ಬಿಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಸಮಾಲೋಚನೆ ನಡೆಯಲಿದೆ. ಸಚಿವ ಸಂಪುಟ ಉಪ ಸಮಿತಿಯ ಮುಂದಿನ ಸಭೆಯಲ್ಲಿ ಡಿಜೆ ಹಳ್ಳಿ ಕೆಜಿ ಹಳ್ಳಿ, ಶಿವಮೊಗ್ಗ ಹಾಗೂ ಹುಬ್ಬಳ್ಳಿ ಪ್ರಕರಣಗಳ ಕೈ ಬಿಡುವ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ: ಶೋಭಾ ಕರಂದ್ಲಾಜೆ ಆರೋಪ

ಕರ್ನಾಟಕದ ವಿವಿಧೆಡೆ ಪ್ರತಿಭಟನೆ, ಗಲಭೆ ಪ್ರಕರಣಗಳಲ್ಲಿ ಬಂಧಿತರಾಗಿರುವ ಯುವಕರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕೇಸ್​ಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವ ಡಾ.ಜಿ ಪರಮೇಶ್ವರ್​ ಅವರಗೆ ಪತ್ರ ಬರೆದು ಒತ್ತಾಯಿಸಿದ್ದರು.

ಸುಳ್ಳು ಮೊಕದ್ದಮೆಗಳಲ್ಲಿ ಯುವಕರು, ವಿದ್ಯಾರ್ಥಿಗಳು ಬಂಧಿತರಾಗಿದ್ದಾರೆ. ಹೀಗಾಗಿ ಪ್ರಕರಣಗಳನ್ನು ಮರು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯುವಂತೆ ಪತ್ರದ ಮೂಲಕ ಒತ್ತಾಯಿಸಿದ್ದರು. ಇನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್​, ತನ್ವೀರ್ ಸೇಠ್​ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

ಗಲಭೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ಈಗಾಗಲೇ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿದೆ. ಪ್ರಕರಣ ಸಂಬಂಧ ಆಗಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪಗಳನ್ನು ಮಾಡಿತ್ತು. ಘಟನೆಯಲ್ಲಿ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ಬಿಜೆಪಿ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿತ್ತು. ಅದರಂತೆ ನಡೆದ ಮ್ಯಾಜಿಸ್ಟ್ರೇಟ್ ತನಿಖೆಯ ವರದಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿತ್ತು.

ಪ್ರಕರಣ ಸಂಬಂಧ ಪೊಲೀಸರ ಗೋಲಿಬಾರ್ ಕ್ರಮ ಸರಿ ಇದೆ ಎಂದು ಜಿಲ್ಲಾಧಿಕಾರಿಯವರು ಬಿಜೆಪಿ ಸರ್ಕಾರದ ಕೊನೆಯ ಅವಧಿಯಲ್ಲಿ ಮ್ಯಾಜಿಸ್ಟ್ರೇಟ್ ತನಿಖಾ ವರದಿ ನೀಡಿದ್ದರು. ಅಂದು ಪೋಲಿಸರು ಗೋಲಿಬಾರ್ ಮಾಡಿರದಿದ್ದರೆ ಇಡೀ ಠಾಣೆ ಕಿಡಿಗೇಡಿಗಳು ಬೆಂಕಿಗೆ ಹಚ್ಚುತ್ತಿದ್ದರು. ಸ್ವಯಂ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಕಾಪಾಡಲು ಗೋಲಿಬಾರ್ ನಡೆದಿದೆ ಎಂದು ರಿಪೋರ್ಟ್ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ