Army Helicopter Crash: ಕಮಾಂಡೋ ಆಸ್ಪತ್ರೆಗೆ ಭೇಟಿ ನೀಡಿ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ಗೃಹಸಚಿವ, ಡಿಜಿ&ಐಜಿಪಿ
ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಕಮಾಂಡೋ ಆಸ್ಪತ್ರೆಗೆ ಗೃಹಸಚಿವ ಆರಗ ಜ್ಞಾನೇಂದ್ರ, ಡಿಜಿ&ಐಜಿಪಿ ಪ್ರವೀಣ್ ಸೂದ್ ಭೇಟಿ ನೀಡಿ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯದ ಬಗ್ಗೆ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.
ಬೆಂಗಳೂರು: ತಮಿಳುನಾಡಿನ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕೈಕ ಯೋಧ ಹಾಗೇ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಸದ್ಯ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಕಮಾಂಡೋ ಆಸ್ಪತ್ರೆಗೆ ಗೃಹಸಚಿವ ಆರಗ ಜ್ಞಾನೇಂದ್ರ, ಡಿಜಿ&ಐಜಿಪಿ ಪ್ರವೀಣ್ ಸೂದ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಇದೇ ವೇಳೆ ಕ್ಯಾಪ್ಟನ್ ವರುಣ್ ಸಿಂಗ್ ಅವರ ತಂದೆ-ತಾಯಿ ಕೂಡ ಉಪಸ್ಥಿತರಿದ್ದರು.
ಸಚಿವರು ಕಮಾಂಡೋ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. CDS ಬಿಪಿನ್ ರಾವತ್ ತೆರಳ್ತಿದ್ದ ಹೆಲಿಕಾಪ್ಟರ್ ಪತನವಾಗಿ ಹೆಲಿಕಾಪ್ಟರ್ನಲ್ಲಿದ್ದ 14 ಜನ್ರ ಪೈಕಿ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ರು. ಹೀಗಾಗಿ ವರುಣ್ ಸಿಂಗ್ರನ್ನು ಉಳಿಸಿಕೊಳ್ಳಲು ಸರ್ವಪ್ರಯತ್ನಗಳು ಸಾಗಿವೆ. ಇಡೀ ದೇಶಕ್ಕೆ ದೇಶವೇ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗಾಗಿ ಪ್ರಾರ್ಥಿಸುತ್ತಿದೆ. ಈಗಾಗಲೇ ಕಾಪ್ಟರ್ ದುರಂತದಲ್ಲಿ 13 ಜನರನ್ನು ಕಳೆದುಕೊಂಡು 130 ಕೋಟಿ ಭಾರತೀಯರು ಕಂಬನಿ ಮಿಡಿದಿದ್ದಾರೆ. ಹೀಗಾಗಿ ಕ್ಯಾಪ್ಟನ್ ವರುಣ್ ಸಿಂಗ್ ಹುಷಾರಾಗಿ ವಾಪಸ್ ಬರಲಿ ಅನ್ನೋದೆ ಎಲ್ಲರ ಆಶಯವಾಗಿದೆ.
ಶೇ. 45ರಷ್ಟು ಸುಟ್ಟ ಗಾಯಗಳಿಂದ ನರಳಾಟ ಸೇನಾ ಕಾಪ್ಟರ್ ದುರಂತದಲ್ಲಿ ಗಾಯಗೊಂಡು ಸಾವು-ಬದುಕಿನ ಮಧ್ಯೆ ಹೋರಾಡ್ತ್ತಿರುವ ಕ್ಯಾಪ್ಟನ್ ವರುಣ್ ಸಿಂಗ್ ಅವರು, ಶೇಕಡಾ 45ರಷ್ಟು ಸುಟ್ಟ ಗಾಯಗಳಿಂದ ನರಳುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಚಿಕಿತ್ಸೆ ನೀಡಲು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಶಿಫ್ಟ್ ಮಾಡಲಾಗಿದ್ದು, ವರುಣ್ ಸಿಂಗ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಾಜಿ ಸೈನಿಕನಿಗೆ ಕೊರೊನಾ ಕಾಲದಲ್ಲಿ ತನ್ನನ್ನು ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ.. ಕಮಾಂಡೋ ಹಾಸ್ಪಿಟಲ್ ಸಹ ನೆರವಿಗೆ ಬರಲಿಲ್ಲ