ರಾಜ್ಯದಲ್ಲಿ ವಿಧಿ ವಿಜ್ಞಾನ ವಿವಿ ಸ್ಥಾಪನೆ ವಿಚಾರ: ಜ.10 ರಿಂದ ಆರಗ ಜ್ಞಾನೇಂದ್ರ ಗುಜರಾತ್​ ಪ್ರವಾಸ

ರಾಜ್ಯದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಗುಜರಾತ್​ನಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ರಾಜ್ಯದಲ್ಲಿ ವಿಧಿ ವಿಜ್ಞಾನ ವಿವಿ ಸ್ಥಾಪನೆ ವಿಚಾರ: ಜ.10 ರಿಂದ ಆರಗ ಜ್ಞಾನೇಂದ್ರ ಗುಜರಾತ್​ ಪ್ರವಾಸ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 09, 2023 | 3:42 PM

ಬೆಂಗಳೂರು: ರಾಜ್ಯದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ (Forensic Science University) ಸ್ಥಾಪನೆಗೆ ಕೇಂದ್ರ ಗೃಹ ಇಲಾಖೆ ಅನುಮತಿ ನೀಡಿದ್ದು, ಈ ಸಂಬಂಧ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ (Araga jnanendra) ಮಹತ್ವದ ಸಭೆ ಕೈಗೊಳ್ಳಲು ನಾಳೆ (ಜ.10) ರಿಂದ 3 ದಿನಗಳಕಾಲ ಗುಜರಾತ್​ ಪ್ರವಾಸ ಕೈಗೊಳ್ಳಲಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅಹಮದಾಬಾದ್​​ನಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ರಾಜ್ಯದಲ್ಲಿ ವಿಧಿ ವಿಜ್ಞಾನ ವಿವಿ ಸ್ಥಾಪನೆಯ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ. ಈ ಮೂಲಕ ಮುಂದಿನ ಶೈಕ್ಷಣಿಕ ವರ್ಷದಿಂದಲೇ ವಿವಿ ಪ್ರಾರಂಭವಾಗುವ ಸಾಧ್ಯತೆ ಇದೆ. ಸಭೆ ಬಳಿ ಆರಗ ಜ್ಞಾನೇಂದ್ರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​ ಭೇಟಿಯಾಗಲಿದ್ದಾರೆ. ಗುರುವಾರ (ಜ.12) ರಾಜ್ಯಕ್ಕೆ ಹಿಂದಿರುಗಲಿದ್ದಾರೆ.

ಶಿಕ್ಷಣ ಆರಂಭದಲ್ಲೇ ಭಿನ್ನಾಭಿಪ್ರಾಯ ಇದೆ

ಹಾಸನ: ಶಿಕ್ಷಣ ಆರಂಭದಲ್ಲೇ ಭಿನ್ನಾಭಿಪ್ರಾಯ ಇದೆ. ICSC, CBSE ಮತ್ತು ಸ್ಟೇಟ್ ಪಠ್ಯಕ್ರಮ ಇದೆ. ಇದು ಮಕ್ಕಳ ಶಿಕ್ಷಣದಲ್ಲಿ ತಾರತಮ್ಯಕ್ಕೆ ಕಾರಣವಾಗಿದೆ ಅರಕಲಗೂಡು ಕ್ಷೇತ್ರದ ಶಾಸಕ ಶಾಸಕ ಎ.ಟಿ‌ ರಾಮಸ್ವಾಮಿ ಅಭಿಪ್ರಯಾ ವ್ಯಕ್ತಪಡಿಸಿದ್ದಾರೆ. ಇಡೀ ದೇಶದಲ್ಲಿ ಒಂದೇ ಮಾದರಿಯ ಶಿಕ್ಷಣ ಬರಬೇಕು ಅನ್ನೋದು ನನ್ನ ಅಭಿಪ್ರಾಯ. ಇದಕ್ಕಾಗಿ ಒಂದು ಕೆರಿಕುಲಮ್ ಸಭೆ ಆಗಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕೋರ್ಟ್

ಇನ್ನು ಸದನದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಸಿಎಂ, ಗೃಹಸಚಿವರ ನಂತರ ಸಾಲಿನಲ್ಲಿ ಶಿಕ್ಷಣ ಸಚಿವರನ್ನು ಕೂರಿಸಬೇಕು. ಆದ್ರೆ ಸದನದ ಮೂರನೇ ಸಾಲಿನಲ್ಲಿ ಅವರಿಗೆ ಸ್ಥಾನ ನೀಡಿದ್ದೀರಾ. ಇದು ನಿವು ಶಿಕ್ಷಣಕ್ಕೆ ನೀಡುವ ಮೌಲ್ಯ ಎಷ್ಟು ಅಂತ ಗೊತ್ತಾಗುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:42 pm, Mon, 9 January 23

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ