ಬೆಂಗಳೂರು: ರಾಜ್ಯದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ (Forensic Science University) ಸ್ಥಾಪನೆಗೆ ಕೇಂದ್ರ ಗೃಹ ಇಲಾಖೆ ಅನುಮತಿ ನೀಡಿದ್ದು, ಈ ಸಂಬಂಧ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ (Araga jnanendra) ಮಹತ್ವದ ಸಭೆ ಕೈಗೊಳ್ಳಲು ನಾಳೆ (ಜ.10) ರಿಂದ 3 ದಿನಗಳಕಾಲ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅಹಮದಾಬಾದ್ನಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ರಾಜ್ಯದಲ್ಲಿ ವಿಧಿ ವಿಜ್ಞಾನ ವಿವಿ ಸ್ಥಾಪನೆಯ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ. ಈ ಮೂಲಕ ಮುಂದಿನ ಶೈಕ್ಷಣಿಕ ವರ್ಷದಿಂದಲೇ ವಿವಿ ಪ್ರಾರಂಭವಾಗುವ ಸಾಧ್ಯತೆ ಇದೆ. ಸಭೆ ಬಳಿ ಆರಗ ಜ್ಞಾನೇಂದ್ರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭೇಟಿಯಾಗಲಿದ್ದಾರೆ. ಗುರುವಾರ (ಜ.12) ರಾಜ್ಯಕ್ಕೆ ಹಿಂದಿರುಗಲಿದ್ದಾರೆ.
ಹಾಸನ: ಶಿಕ್ಷಣ ಆರಂಭದಲ್ಲೇ ಭಿನ್ನಾಭಿಪ್ರಾಯ ಇದೆ. ICSC, CBSE ಮತ್ತು ಸ್ಟೇಟ್ ಪಠ್ಯಕ್ರಮ ಇದೆ. ಇದು ಮಕ್ಕಳ ಶಿಕ್ಷಣದಲ್ಲಿ ತಾರತಮ್ಯಕ್ಕೆ ಕಾರಣವಾಗಿದೆ ಅರಕಲಗೂಡು ಕ್ಷೇತ್ರದ ಶಾಸಕ ಶಾಸಕ ಎ.ಟಿ ರಾಮಸ್ವಾಮಿ ಅಭಿಪ್ರಯಾ ವ್ಯಕ್ತಪಡಿಸಿದ್ದಾರೆ. ಇಡೀ ದೇಶದಲ್ಲಿ ಒಂದೇ ಮಾದರಿಯ ಶಿಕ್ಷಣ ಬರಬೇಕು ಅನ್ನೋದು ನನ್ನ ಅಭಿಪ್ರಾಯ. ಇದಕ್ಕಾಗಿ ಒಂದು ಕೆರಿಕುಲಮ್ ಸಭೆ ಆಗಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕೋರ್ಟ್
ಇನ್ನು ಸದನದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಸಿಎಂ, ಗೃಹಸಚಿವರ ನಂತರ ಸಾಲಿನಲ್ಲಿ ಶಿಕ್ಷಣ ಸಚಿವರನ್ನು ಕೂರಿಸಬೇಕು. ಆದ್ರೆ ಸದನದ ಮೂರನೇ ಸಾಲಿನಲ್ಲಿ ಅವರಿಗೆ ಸ್ಥಾನ ನೀಡಿದ್ದೀರಾ. ಇದು ನಿವು ಶಿಕ್ಷಣಕ್ಕೆ ನೀಡುವ ಮೌಲ್ಯ ಎಷ್ಟು ಅಂತ ಗೊತ್ತಾಗುತ್ತಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:42 pm, Mon, 9 January 23