AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ‘ ಹೇಳಿಕೆ ಹಿಂಪಡೆಯುವೆ, ಸಂತ್ರಸ್ತೆಯನ್ನು ನನ್ನ ಮಗಳ ಸ್ಥಾನದಲ್ಲಿ ನೋಡುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ತಮ್ಮ ಈ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನವರು ಗೃಹ ಸಚಿವರ ಮೇಲೆ ರೇಪ್ ಮಾಡ್ತಿದ್ದಾರೆ ಎಂದು ಅವರ ಮನಸ್ಸಿಗೆ ನೋವು ಮಾಡುವುದಕ್ಕೆ ಈ ಮಾತು ಹೇಳಿಲ್ಲ. ತಮಾಷೆ ರೀತಿಯಲ್ಲಿ ಮಾತಾಡಿದ್ದೇನೆ ಎಂದು ತಿದ್ದಿಕೊಂಡಿದ್ದರು.

‘ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ‘ ಹೇಳಿಕೆ ಹಿಂಪಡೆಯುವೆ, ಸಂತ್ರಸ್ತೆಯನ್ನು ನನ್ನ ಮಗಳ ಸ್ಥಾನದಲ್ಲಿ ನೋಡುವೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ
TV9 Web
| Edited By: |

Updated on:Aug 26, 2021 | 8:45 PM

Share

ಆನೇಕಲ್: ‘ಅತ್ಯಾಚಾರ ಆಗಿದ್ದು ಅಲ್ಲಿ, ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ’ ಎಂಬ ಮಾತನ್ನು ಹಿಂಪಡೆಯುವುದಾಗಿ ಸೆಂಟ್ರಲ್ ಜೈಲಿನ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನನಗೆ ಬಹಳ ಆತಂಕ ಆಗಿತ್ತು, ಆತಂಕದಲ್ಲಿ ಈ ಮಾತು ಹೇಳಿದ್ದೆ. ನಾನು ನೀಡಿದ್ದ ಹೇಳಿಕೆ ಹಿಂಪಡೆಯುತ್ತೇನೆ. ಸಂತ್ರಸ್ತೆಯನ್ನು ನನ್ನ ಮಗಳ ಸ್ಥಾನದಲ್ಲಿ ನೋಡುವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ನವರು ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದ್ದಾರೆ. ಅತ್ಯಾಚಾರ ಆಗಿದ್ದು ಅಲ್ಲಿ, ಆದರೆ ಕಾಂಗ್ರೆಸ್‌ನವರು ನನ್ನನ್ನು ರೇಪ್ ಮಾಡ್ತಿದ್ದಾರೆ’ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಲ್ಲಿ ಆಗಿರುವುದು ಅಮಾನುಷವಾದ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಿ, ಡಿಟೆಕ್ಟ್ ಮಾಡಿ ಅನ್ನಬೇಕು. ಕಾಂಗ್ರೆಸ್​ನವರು ಹಾಗೆ ಮಾಡದೇ ನನ್ನ ಮೇಲೆ ಹರಿಹಾಯುತ್ತಿದ್ದಾರೆ. ಈ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಅವರು ಕಿಡಿಕಾರಿದ್ದರು.

ಆ ಯುವಕ, ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ ಹೋಗಬೇಡಿ ಅಂತಾ ತಡೆಯೋದಕ್ಕೂ ಆಗೋದಿಲ್ಲ. ಸದ್ಯಕ್ಕೆ ಯುವಕ,ಯುವತಿ ಶಾಕ್​ನಲ್ಲಿ ಇದ್ದಾರೆ. ಅವರ ಸಂಪೂರ್ಣ ಸ್ಟೇಟ್ ಮೆಂಟ್ ಪಡೆಯಲು ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಎಂದು ಸಹ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ತಮ್ಮ ಈ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನವರು ಗೃಹ ಸಚಿವರ ಮೇಲೆ ರೇಪ್ ಮಾಡ್ತಿದ್ದಾರೆ ಎಂದು ಅವರ ಮನಸ್ಸಿಗೆ ನೋವು ಮಾಡುವುದಕ್ಕೆ ಈ ಮಾತು ಹೇಳಿಲ್ಲ. ತಮಾಷೆ ರೀತಿಯಲ್ಲಿ ಮಾತಾಡಿದ್ದೇನೆ ಎಂದು ತಿದ್ದಿಕೊಂಡಿದ್ದರು. ಇದು ಮೈಸೂರಿನಂತರ ಶಾಂತಿಯುವ ಸುಸಂಸ್ಕೃತರು ವಾಸಿಸುವ ನಾಡು. ಘಟನೆಗೆ ಯಾರು ಕಾರಣ ಅವರನ್ನ ಹಿಡಿಯುತ್ತೇವೆ. 12 ಗಂಟೆಯಲ್ಲಿ FIR ಆಗಿದೆ. ಆರೋಪಿಗಳನ್ನ ಬಂಧಿಸುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ನವರು ನನ್ನ ಮೇಲೆ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ (Karnataka Home Minister Araga Jnanendra says will withdraw my statement congress trying to rape me)

Published On - 6:35 pm, Thu, 26 August 21

Follow Us
TV9 Web
TV9 Web

TV9 Kannada

Read More
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ