AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ: ಸಚಿವ ಪರಮೇಶ್ವರ್ ಮೊದಲ ಪ್ರತಿಕ್ರಿಯೆ

ಕರ್ನಾಟಕದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದ ಇಡಿ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾಳಿಯ ಉದ್ದೇಶ ತಿಳಿದಿಲ್ಲ ಎಂದ ಅವರು, ಸಂಸ್ಥೆಯು ಪೂರ್ಣ ಸಹಕಾರ ನೀಡುತ್ತಿದೆ ಎಂದು ತಿಳಿಸಿದ್ದಾರೆ. ಜಾತಿ ಆಧಾರದ ಮೇಲೆ ದಾಳಿ ಎಂಬ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.

ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ: ಸಚಿವ ಪರಮೇಶ್ವರ್ ಮೊದಲ ಪ್ರತಿಕ್ರಿಯೆ
ಸಚಿವ ಪರಮೇಶ್ವರ್
TV9 Web
| Edited By: |

Updated on: May 22, 2025 | 10:52 AM

Share

ಬೆಂಗಳೂರು, ಮೇ 22: ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ (Siddhartha Education Institution) ಮೇಲೆ ಜಾರಿ ನಿರ್ದೇಶನಾಲಯದ ದಾಳಿ ಮುಂದುವರಿದಿರುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ದಾಳಿ ಬಗ್ಗೆ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾವ ವಿಚಾರಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಇಡಿ ಅಧಿಕಾರಿಗಳು ನಮ್ಮ ಸಂಸ್ಥೆಯ ಅಕೌಂಟ್ಸ್ ಕೇಳಿದ್ದಾರೆ. ಯಾವ ವರ್ಷದ ಲೆಕ್ಕ ಕೇಳುತ್ತಾರೆಯೋ ಅದನ್ನೆಲ್ಲ ಕೊಡಿ ಎಂದು ಸೂಚಿಸಿದ್ದೇನೆ ಎಂದರು.

ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ, ಅವರಿಗೆ ಸಹಕಾರ ಕೊಟ್ಟಿದ್ದೇವೆ. ನಾನು ಕಾನೂನಿಗೆ ಬೆಲೆ ಕೊಟ್ಟು ಬಂದವನು ನಾನು. ಕಾನೂನು ಎಲ್ಲರಿಗೂ ಒಂದೇ, ಕಾನೂನಿಗೆ ಗೌರವ ಕೊಡುತ್ತೇನೆ . ಇಡಿ ಅಧಿಕಾರಿಗಳು ಏನು ಬೇಕಾದರೂ ಪರಿಶೀಲನೆ ಮಾಡಲಿ. ನಾವು ಕೂಡ ಸಹಕಾರ ನೀಡುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ದಲಿತ ಎಂಬ ಕಾರಣಕ್ಕೆ ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬ ರಣದೀಪ್ ಸುರ್ಜೇವಾಲ ಆರೋಪ ಸಂಬಂಧ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಇಂಥ ವಿಚಾರಗಳಲ್ಲಿ ಯಾರೂ ಜಾತಿ ನೋಡಿ ಬರುವುದಿಲ್ಲ. ಆ ಬಗ್ಗೆ ಈಗ ನಾನು ಏನೂ ಹೇಳುವುದಿಲ್ಲ ಎಂದರು.

ಇದನ್ನೂ ಓದಿ
Image
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
Image
ಪ್ರಿಯಾಂಕ್ ವಿರುದ್ಧ ಛಲವಾದಿ ಅವಹೇಳನಾಕಾರಿ ಮಾತು: ವಿವಾದದ ಬೆನ್ನಲ್ಲೇ ವಿಷಾದ
Image
ಮೆಟ್ರೋ ಪ್ರಯಾಣಿಕರೇ ಗಮನಿಸಿ: ಶುಕ್ರವಾರ ಸಂಚಾರ ಸಮಯದಲ್ಲಿಲ್ಲ ಬದಲಾವಣೆ
Image
ಮಳೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೆಚ್ಚಾದ ಸಾಂಕ್ರಾಮಿಕ ರೋಗಗಳ ಆತಂಕ

ನಮ್ಮ ಶಿಕ್ಷಣ ಸಂಸ್ಥೆಯು ಸ್ಥಾಪನೆಯಾಗಿ 68 ವರ್ಷಗಳೇ ಆಗಿವೆ. ನಮ್ಮ ತಂದೆ ಕಾಲದಿಂದಲೂ ಸಂಸ್ಥೆ ನಡೆಯುತ್ತಿದೆ. ಸಿದ್ದಾರ್ಥ ಸಂಸ್ಥೆಯಲ್ಲಿ ಕಲಿತು 40,000 ಮಂದಿ ಎಂಜಿನಿಯರ್ ಆಗಿದ್ದಾರೆ. ನಮ್ಮ ಸಂಸ್ಥೆಯ ಮೂಲಕ 10,000 ಮಂದಿ ವೈದ್ಯರಾಗಿದ್ದಾರೆ. ಜಾರಿ ನಿರ್ದೇಶನಾಲಯ ಇಲ್ಲಿಯವರೆಗೆ ಏನೂ ಹೇಳಿಲ್ಲ. ಶಫಿ ಅಹ್ಮದ್ ಅವರ ಶಿಕ್ಷಣ ಸಂಸ್ಥೆಯನ್ನೂ ಖರೀದಿ ಮಾಡಿದ್ದೇವೆ. ಸದ್ಯ ಇಡಿ ವಿಚಾರಣೆ ನಡೆಯುತ್ತಿದೆ, ಈಗ ಹೆಚ್ಚಿನದ್ದೇನನ್ನೂ ವಿವರಿಸಲು ಆಗುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ: ರನ್ಯಾ ರಾವ್ ಖಾತೆಗೆ 40 ಲಕ್ಷ ರೂ. ವರ್ಗಾವಣೆ ಆರೋಪ: ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಮುಂದುವರಿದ ಇಡಿ ಶೋಧ

ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಅಧೀನದಲ್ಲಿರುವ ವಿವಿಧ ಕಾಲೇಜುಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ಆರಂಭಿಸಿದ್ದರು. ಅದು ಗುರುವಾರವೂ ಮುಂದುವರಿದಿದೆ. ಏತನ್ಮಧ್ಯೆ, ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್‌ ಖಾತೆಗೆ 40 ಲಕ್ಷ ರೂಪಾಯಿ ವರ್ಗಾವಣೆ ಮಾಡಿರುವ ಆರೋಪದ ಮೇಲೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದೆ ಎಂದು ಕೆಲವು ಮೂಲಗಳು ಹೇಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More