ಸಿಇಟಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿಗೆ ಟ್ರಾಫಿಕ್ ಬಿಸಿ; ನೆರವಾದ ಪೊಲೀಸರು

ಮೆಜೆಸ್ಟಿಕ್​ನಿಂದ ಕೋರಮಂಗಲಕ್ಕೆ ತೆರಳಲು ಪರದಾಡಿದ ವಿದ್ಯಾರ್ಥಿಯೊಬ್ಬನಿಗೆ ಪೊಲೀಸರು ಸಹಾಯ ಮಾಡಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಸಿಇಟಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿಗೆ ಟ್ರಾಫಿಕ್ ಬಿಸಿ; ನೆರವಾದ ಪೊಲೀಸರು
ಸಿಇಟಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿಗೆ ಟ್ರಾಫಿಕ್ ಬಿಸಿ; ನೆರವಾದ ಪೊಲೀಸರು
Follow us
Ganapathi Sharma
|

Updated on:May 20, 2023 | 6:03 PM

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ನಗರದ ಹಲವೆಡೆ ಟ್ರಾಫಿಕ್ ಶನಿವಾರ ಜಾಮ್ ಉಂಟಾಯಿತು. ಇದರಿಂದ ಸಿಇಟಿ ಪರೀಕ್ಷೆ ಬರೆಯಲು ತೆರಳಿದ ಕೆಲವು ವಿದ್ಯಾರ್ಥಿಗಳೂ ತೊಂದರೆ ಅನುಭವಿಸಿದರು. ಈ ಮಧ್ಯೆ, ಮೆಜೆಸ್ಟಿಕ್​ನಿಂದ ಕೋರಮಂಗಲಕ್ಕೆ ತೆರಳಲು ಪರದಾಡಿದ ವಿದ್ಯಾರ್ಥಿಯೊಬ್ಬನಿಗೆ ಪೊಲೀಸರು ಸಹಾಯ ಮಾಡಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಕಂಠೀರವ ಸ್ಟಡೀಯಂ ಸುತ್ತಮುತ್ತ ಭಾರಿ ಟಾಫ್ರಿಕ್ ಜಾಮ್ ಇತ್ತು. ಪರಿಣಾಮವಾಗಿ ಮೆಜೆಸ್ಟಿಕ್‌ನಿಂದ ಕೋರಮಂಗಲಕ್ಕೆ ಪರೀಕ್ಷಾ ಕೇಂದ್ರಕ್ಕೆ ಹೋಗಬೇಕಿದ್ದ ವಿದ್ಯಾರ್ಥಿ ಶರವಣ ಕುಮಾರ್‌ಗೆ ಸಮಸ್ಯೆಯಾಗಿತ್ತು. ವಿದ್ಯಾರ್ಥಿ ಶರವಣ ಕುಮಾರ್‌ಗೆ ಸಹಾಯ ಮಾಡಿದ ಪೋಲೀಸರು ಕೇವಲ 15 ನಿಮೀಷದಲ್ಲಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿಬಿಟ್ಟರು. ಹೊಯ್ಸಳ ಚಾಲಕ ಎಸ್.ಟಿ.ಸೋಮಶೇಖರ್, ಹೆಡ್ ಕಾನ್‌ಸ್ಟೆಬಲ್ ಗೌರೀಶ್ ನೇತೃತ್ವದಲ್ಲಿ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲಾಯಿತು.

ವಿದ್ಯಾರ್ಥಿ ಸರವಣ ಕುಮಾರ್ ಮೆಜೆಸ್ಟಿಕ್‌ನಲ್ಲಿ ಸಿಲುಕಿಕೊಂಡಿದ್ದು, ಕೋರಮಂಗಲದಲ್ಲಿರುವ ತನ್ನ ಪರೀಕ್ಷಾ ಕೇಂದ್ರಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಪರೀಕ್ಷಾ ಕೇಂದ್ರ 10-11 ಕಿಮೀ ದೂರದಲ್ಲಿರುವುದನ್ನು ಗಮನಿಸಿದ ಹೊಯ್ಸಳ ಪೊಲೀಸರು ಆತನ ನೆರವಿಗೆ ಧಾವಿಸಿದ್ದಾರೆ.

ಇದನ್ನೂ ಓದಿ: Karnataka CM Oath Taking: ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ

ಪ್ರಮಾಣವಚನ ಸ್ವೀಕಾರ ಸಮಾರಂಭದ ಪ್ರಯುಕ್ತ ಹಲವೆಡೆ ವಾಹನ ಸಂಚಾರ ಮಾರ್ಗದಲ್ಲಿ‌ ಬದಲಾವಣೆ ಮಾಡಲಾಗಿತ್ತು. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿತ್ತು. ಈ ಮಧ್ಯೆ, ಸಿಇಟಿ ಪರೀಕ್ಷೆಗೆ ತೆರಳುವ ಯಾವುದೇ ವಿದ್ಯಾರ್ಥಿಗೆ ಸಂಚಾರ ಸಂಬಂಧಿತ ಸಹಾಯ ಬೇಕಿದ್ದಲ್ಲಿ, ರಸ್ತೆಯಲ್ಲಿ ಕರ್ತವ್ಯನಿರತ ಸಂಚಾರ ಪೊಲೀಸರನ್ನು ಸಂಪರ್ಕಿಸುವಂತೆ ಸಲಹೆ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Sat, 20 May 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ