AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gutkha and Pan Masala Ban: ಕರ್ನಾಟಕದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ

ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳನ್ನು ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ನಿಷೇಧಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಆಗಸ್ಟ್ 10ರಂದು ಹೊರಡಿಸಿದ ಅಧಿಸೂಚನೆಯನ್ವಯ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ವ್ಯಸನಮುಕ್ತ ಕರ್ನಾಟಕಕ್ಕೆ ಸಹಕರಿಸಲು ಮನವಿ ಮಾಡಿದೆ.

Gutkha and Pan Masala Ban: ಕರ್ನಾಟಕದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ
ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ
ವಿನಯ್​ ಕಾಶಪ್ಪನವರ್​
| Edited By: |

Updated on:Aug 13, 2026 | 5:51 PM

Share

ಮುಖ್ಯಾಂಶಗಳು

  • ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಮಾರಾಟ ಒಂದು ವರ್ಷ ನಿಷೇಧ
  • ಆಗಸ್ಟ್ ಹತ್ತರಂದು ಆಹಾರ ಸುರಕ್ಷತಾ ಇಲಾಖೆಯಿಂದ ಅಧಿಕೃತ ಅಧಿಸೂಚನೆ
  • ಅಕ್ರಮ ಉತ್ಪನ್ನಗಳ ವಿರುದ್ಧ ವಿಶೇಷ ಜಾರಿ ಕಾರ್ಯಾಚರಣೆ ಆರಂಭ

ಬೆಂಗಳೂರು, ಆಗಸ್ಟ್ 12: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಕರ್ನಾಟಕ ರಾಜ್ಯಾದ್ಯಂತ ಕಳಪೆ ಹೋಟೆಲ್‌ಗಳು ಹಾಗೂ ನಿಯಮಬಾಹಿರ ಕಾಸ್ಮೆಟಿಕ್ (ಸೌಂದರ್ಯವರ್ಧಕ) ಉದ್ಯಮಗಳ ವಿರುದ್ಧ ಸರಣಿ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದ ಬೆನ್ನಲ್ಲೇ  ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆಗಸ್ಟ್ 10ರಿಂದಲೇ ಜಾರಿ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಕಲಂ 30(2)(a) ಸೇರಿದಂತೆ Food Safety and Standards Regulations, 2011ರ ನಿಯಮ 2.3.4 ಅಡಿಯಲ್ಲಿ ಈ ಕಠಿಣ ಕ್ರಮ ಜರುಗಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು 2026ರ ಆಗಸ್ಟ್ 10ರಂದು ಈ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಪ್ಯಾಕ್ ಮಾಡಿದ ಅಥವಾ ಪ್ರತ್ಯೇಕವಾಗಿ ಮಾರಾಟ ಮಾಡುವ ಎಲ್ಲಾ ಮಾದರಿಯ ನಿಷೇಧಿತ ತಂಬಾಕು ಉತ್ಪನ್ನಗಳ ಮೇಲೆಯೂ ಇಲಾಖೆ ತೀವ್ರ ನಿಗಾ ಇರಿಸಿದೆ.

ವಿಶೇಷ ಕಾರ್ಯಾಚರಣೆ ಮತ್ತು ಕಠಿಣ ಕ್ರಮ

ರಾಜ್ಯಾದ್ಯಂತ ನಿಯಮ ಉಲ್ಲಂಘನೆಗಳನ್ನು ತಡೆಗಟ್ಟಲು ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಮತ್ತು ಜಾರಿ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ. ಮಾರುಕಟ್ಟೆಯಲ್ಲಿ ನಿಷೇಧಿತ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ಕಂಡುಬಂದರೆ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಇದರೊಂದಿಗೆ, ಸಾರ್ವಜನಿಕರು ತಮ್ಮ ಆಸುಪಾಸಿನಲ್ಲಿ ಇಂತಹ ನಿಷೇಧಿತ ಉತ್ಪನ್ನಗಳ ಅಕ್ರಮ ಮಾರಾಟ ಅಥವಾ ಸಂಗ್ರಹಣೆ ಕಂಡುಬಂದಲ್ಲಿ ತಕ್ಷಣವೇ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಆರೋಗ್ಯಕರ ಹಾಗೂ ಸುಸ್ಥಿರ ಸಮಾಜದ ನಿರ್ಮಾಣಕ್ಕಾಗಿ ಸಾರ್ವಜನಿಕರು ಸರ್ಕಾರದ ಈ ಮಹತ್ತರ ಆಂದೋಲನಕ್ಕೆ ಪೂರ್ಣ ಸಹಕಾರ ನೀಡಬೇಕಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Wed, 12 August 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್