AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nipah Virus: ನಿಫಾ ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಕೋವಿಡ್ ರೀತಿ ನಿರ್ಬಂಧ, ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್

ಕೇರಳದಲ್ಲಿ ನಿಫಾ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ರೋಗ ಹರಡದಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಗಡಿಯಿಂದ ಜಿಲ್ಲೆಗಳಿಗೆ ಪ್ರವೇಶಿಸುವ ಸರಕು ವಾಹನಗಳನ್ನು ಪರೀಕ್ಷಿಸಲು ಆರೋಗ್ಯ ಇಲಾಖೆಯ ರಾಜ್ಯ ಪೊಲೀಸರಿಗೆ ಸೂಚಿಸಿದೆ. ಇದರ ಜೊತೆಗೆ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜ್ವರ ಸಮೀಕ್ಷೆಯನ್ನು ತ್ವರಿತವಾಗಿ ನಡೆಸುವಂತೆ ತಿಳಿಸಲಾಗಿದೆ

Nipah Virus: ನಿಫಾ ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಕೋವಿಡ್ ರೀತಿ ನಿರ್ಬಂಧ, ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್
ನಿಫಾ ವೈರಸ್
ಆಯೇಷಾ ಬಾನು
|

Updated on: Sep 15, 2023 | 6:27 PM

Share

ಬೆಂಗಳೂರು, ಸೆ.15: ಕೋವಿಡ್​ಗಿಂತ(Coronavirus) ಭೀಕರ ಎಂದೇ ಹೇಳ್ಪಡುವ ನಿಫಾ ವೈರಸ್(Nipah Virus) ಮತ್ತೆ ಕೇರಳದಲ್ಲಿ ಕಾಣಿಸಿಕೊಂಡಿದೆ. ಬಾವಲಿಗಳಿಂದ ಹರಡುವ ಈ ವೈರಸ್ ಈಗಾಗಲೇ ಇಬ್ಬರ ಜೀವ ಬಲಿ ಪಡೆದಿದೆ. ನಿಫಾ ರಾಜ್ಯದಲ್ಲಿ ಕಾಲಿಡದಂತೆ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಶಂಕಿತ ಪ್ರಕರಣಗಳ ಬಗ್ಗೆ ನಿಗಾ ವಹಿಸಲು ಆರೋಗ್ಯಾಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದು, ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್ ಸ್ಥಾಪನೆಗೆ ಮುಂದಾಗಿದೆ. ಕೇರಳದಲ್ಲಿ ನಿಫಾ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ರೋಗ ಹರಡದಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಗಡಿಯಿಂದ ಜಿಲ್ಲೆಗಳಿಗೆ ಪ್ರವೇಶಿಸುವ ಸರಕು ವಾಹನಗಳನ್ನು ಪರೀಕ್ಷಿಸಲು ಆರೋಗ್ಯ ಇಲಾಖೆಯ ರಾಜ್ಯ ಪೊಲೀಸರಿಗೆ ಸೂಚಿಸಿದೆ. ಇದರ ಜೊತೆಗೆ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜ್ವರ ಸಮೀಕ್ಷೆಯನ್ನು ತ್ವರಿತವಾಗಿ ನಡೆಸುವಂತೆ ತಿಳಿಸಲಾಗಿದೆ.

ನಿಫಾ ವೈರಸ್‌ಗೆ ಮಾರ್ಗಸೂಚಿಗಳು

  • ಕರ್ನಾಟಕದಿಂದ ಕೇರಳದ ಪೀಡಿತ ಪ್ರದೇಶಕ್ಕೆ ಸಾರ್ವಜನಿಕರ ಅನಗತ್ಯ ಪ್ರಯಾಣ ಬೇಡ.
  • ಗಡಿಯಲ್ಲಿ ಜ್ವರ ಪರಿಶೀಲನೆ, ಕಣ್ಗಾವಲು ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುವುದು.
  • ಗಡಿ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಕೊಡಗು, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ಇಡುವುದು.
  • ಎಲ್ಲಾ ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು ಮತ್ತು ಕ್ಲಿನಿಕ್‌ಗಳಲ್ಲಿ ಶಂಕಿತ ಪ್ರಕರಣಗಳು ಕಂಡು ಬಂದರೆ ತಕ್ಷಣ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ವರದಿ ಮಾಡುವುದು

ಇದನ್ನೂ ಓದಿ: Nipah Virus: ನಿಫಾ ವೈರಸ್​​ನಿಂದ ಸಾವುಗಳು ಹೆಚ್ಚುತ್ತಿವೆ.. ದೇಶದಲ್ಲಿ ಕೊರೊನಾ ಪರಿಸ್ಥಿತಿ ಮತ್ತೆ ಬರುತ್ತಿದೆಯಾ?

ಜ್ವರ, ಮೈ ಕೈ ನೋವು, ಸುಸ್ತು, ತಲೆನೋವು ನಿಫಾದ ಗುಣಲಕ್ಷಣಗಳಾಗಿದೆ. ಗಡಿ ಜಿಲ್ಲೆಗಳಲ್ಲಿ ಇಂತಹ ಶಂಕಿತ ವ್ಯಕ್ತಿಗಳು ಪತ್ತೆಯಾದರೆ ತಕ್ಷಣ ಚಿಕಿತ್ಸೆ ನೀಡುವಂತೆ‌ ಸೂಚಿಸಲಾಗಿದೆ. ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ನಿಫಾ ಚಿಕಿತ್ಸೆಗೆ ಪ್ರತ್ಯೇಕ 10 ಬೆಡ್ ನ ವಾರ್ಡ್ ಸ್ಥಾಪಿಸಲಾಗಿದೆ.‌ ರೋಗದ ಲಕ್ಷಣ ಕಂಡು ಬಂದ್ರೆ ತಕ್ಷಣಕ್ಕೆ ಈ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತೆ. ನಿಫಾ ಪ್ರತ್ಯೇಕ ವಾರ್ಡ್ ನಲ್ಲಿ ಆಕ್ಸಿಜನ್ ಮತ್ತು ಔಷಧಿಗಳನ್ನು ಒಳಗೊಂಡಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ‌‌‌. ನಿಫಾ ರೋಗ ಲಕ್ಷಣಗಳ ಕುರಿತು ಸಿಬ್ಬಂದಿಗಳಿಗೆ ತರಬೇತಿ ನೀಡಲು ಸೂಚಿಸಲಾಗಿದೆ. ಯಾವುದೇ ಶಂಕಿತ ಪ್ರಕರಣಗಳ ಮಾದರಿಯನ್ನು ಪುಣೆಯ ಎನ್ ಐ ವಿ ಲ್ಯಾಬ್ ಗೆ ಕಳುಹಿಸಲು ತೀರ್ಮಾನಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು