Karnataka News Live: ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳು ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಅನ್ನಭಾಗ್ಯದ ಅಕ್ಕಿ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ಯುದ್ದ ಶುರುವಾಗಿದೆ. ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದರೇ, ಬಿಜೆಪಿ ಕಾಂಗ್ರೆಸ್ ಸರ್ಕಾರದ ನೈತಿಕತೆಯನ್ನು ಪ್ರಶ್ನಿಸುತ್ತಿದೆ. ಇನ್ನು ಇದೇ ವಿಚಾರವಾಗಿ ಅಧಿವೇಶನದ ಸಮಯದಲ್ಲಿ ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ನಾಯಕರು ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಇದಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರಾವಧಿ ಕುರಿತು ರಾಜ್ಯ ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಇನ್ನು ರಾಜ್ಯಕ್ಕೆ ಮುಂಗಾರಿನ ಆಗಮನ ತಡವಾಗಿದ್ದು, ನೀರಿಲ್ಲದೆ ಉತ್ತರ ಕರ್ನಾಟಕದ ಜನ ಪರಿತಪ್ಪಿಸುತ್ತಿದೆ. ಹಾಗೇ ಅಪರಾಧ ಪ್ರಕರಣಗಳು ಕೂಡ ಜಾಸ್ತಿಯಾಗುತ್ತಿವೆ. ಇದರೊಂದಿಗೆ ಇಂದಿನ ಲೇಟೆಸ್ಟ್ ಅಪಡೇಟ್ಸ್ ಇಲ್ಲಿದೆ..
ಬೆಂಗಳೂರು: ಹಿಟ್ ಆ್ಯಂಡ್ ರನ್ಗೆ ಪಾದಚಾರಿ ಬಲಿಯಾದ ಘಟನೆ ನಗರದ ನವರಂಗ್ ಸಿಗ್ನಲ್ ಬಳಿ ನಡೆದಿದೆ. ಕೃಷ್ಣಪ್ಪ (55) ಮೃತ ವ್ಯಕ್ತಿ. ಯು ಟರ್ನ್ ತೆಗೆದುಕೊಳ್ಳುವಾಗ ಕಾರೊಂದು ಕೃಷ್ಣಪ್ಪಗೆ ಡಿಕ್ಕಿಯಾದ್ದು, ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ಡಿಕ್ಕಿ ರಭಸಕ್ಕೆ ರಸ್ತೆಗೆ ಬಿದ್ದ ಕೃಷ್ಣಪ್ಪ ತಲೆ, ಎದೆಗೆ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಮಳೆ ಆರಂಭವಾಗಿದೆ. ಕಳೆದ ಅರ್ದಗಂಟೆಯಿಂದ ಗಾಳಿ ಸಹಿತ ಜಡಿ ಮಳೆಯಾಗುತ್ತಿದ್ದು, ಕೆಲಸ ಮುಗಿಸಿಕೊಂಡು ಮನೆಗಳತ್ತ ತೆರಳಲು ಜನರು ಪರದಾಡುತ್ತಿದ್ದಾರೆ. ಕೆಲವೆಡೆ ಮಳೆ ನಿಂತ ನಂತರ ತೆರಳಲು ಜನರು ಅಲ್ಲಲ್ಲಿ ಆಶ್ರಯ ಪಡೆದಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಇಂದು ಪರೋಕ್ಷವಾಗಿ ಮಾತಿನ ಪೈಟ್ ನಡೆದಿದೆ. ಈ ವಿಚಾರವಾಗಿ ಚಿಕ್ಕೋಡಿಯ ಯಕ್ಸಂಬಾ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತಣಾಡಿದ ಬೊಮ್ಮಾಯಿ, ನಮ್ಮಿಬ್ಬರ ನಡುವೆ ಭಿನ್ನಾಬಿಪ್ರಾಯದ ಪ್ರಶ್ನೇಯೇ ಇಲ್ಲ. ನಾವು ಒಗ್ಗಟ್ಟಾಗಿ, ಒಂದಾಗಿ ಕಾಂಗ್ರೆಸ್ ಸೋಲಿಸುವ ಕುರಿತು ಮಾತನಾಡಿದ್ದೇವೆ ಹೊರತು ಮತ್ತೇನೂ ಅಲ್ಲ. ಬೆಳಗ್ಗೆಯಿಂದ ನಾವೆಲ್ಲರೂ ಒಟ್ಟಿಗೆ ಇದ್ದೇವೆ. ಅವರ ಕಾರಿನಲ್ಲೇ ಬಂದಿದ್ದೇನೆ. ಇಬ್ಬರೂ ಅಣ್ಣತಮ್ಮಂದಿರ ಹಾಗೆ ಇದ್ದೇವೆ. ಇಬ್ಬರದ್ದೂ ಮೂವತ್ತು ವರ್ಷಗಳ ದೋಸ್ತಿ. ರಾಜಕಾರಣ ಮೀರಿ ನಮ್ಮಿಬ್ಬರ ಸ್ನೇಹವಿದೆ. ಅವರದೇ ಆದ ಶೈಲಿಯಲ್ಲಿ ಆ ರೀತಿ ಹೇಳಿದ್ದಾರೆ. ಅವರು ಸಾರ್ವಜನಿಕವಾಗಿಯೇ ಹೇಳಿದ್ದಾರೆ. ನಾನು ಸಾರ್ವಜನಿಕವಾಗಿಯೇ ಸ್ಪಷ್ಟಿಕರಣ ಕೊಟ್ಟಿದ್ದೇನೆ. ಈಗಲೂ ಹೇಳುತ್ತೇನೆ ನಮ್ಮಿಬ್ಬರದ್ದು ಒಂದೇ ಡಿಎನ್‌ಎ, ಅದು ಬಿಜೆಪಿ ಡಿಎನ್‌ಎ ಎಂದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಾಗುತ್ತಲೇ ಮಳೆಯಾಗಲು ಆರಂಭವಾಗಿದೆ. ನಗರದ ಟೌನ್ ಹಾಲ್, ಶಾಂತಿನಗರ, ಶೇಷಾದ್ರಿಪುರಂ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದ್ದು, ಎಂದಿನಂತೆ ದ್ವಿಚಕ್ರವಾಹನ ಸವಾರರು ಪರದಾಟ ನಡೆಸುವಂತಾಗಿದೆ. ಇನ್ನೊಂದೆಡೆ, ವೀಕೆಂಡ್ ಮಸ್ತಿ ಮುಗಿಸಿ ಮನೆಗೆ ಹೊರಟಿದ್ದ ಜನರು ಮಳೆ ಕಿರಿಕಿರಿ ಅನುಭವಿಸುವಂತಾಗಿದೆ.
ಕೊಪ್ಪಳ: ಕಾಸರಗೋಡಿನ ಕನ್ನಡ ಶಾಲೆಗೆ ಮಲಯಾಳಿ ಶಿಕ್ಷಕರ ನೇಮಕ ಮಾಡಿದ ವಿಚಾರವಾಗಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕನ್ನಡ ಶಿಕ್ಷಕರ ನೇಮಕ ಮಾಡುವಂತೆ ಕೇರಳ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಕಾಸರಗೋಡು ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ. ಆದರೆ ಮತ್ತೆ ಅದೇ ಮಲಯಾಳಿ ಶಿಕ್ಷಕಿ ಕನ್ನಡ ಪಾಠ ಮಾಡಲು ಬಂದಿದ್ದಾರೆ. ಅವರು ಯಾರ ಒತ್ತಡದ ಮೇಲೆ ಕನ್ನಡ ಬೋಧನೆಗೆ ಬಂದಿದ್ದಾರೋ ಗೊತ್ತಿಲ್ಲ. ನಾಳೆ ಸಿಎಂ ಸಿದ್ದರಾಮಯ್ಯ, ಕೇರಳ ಶಿಕ್ಷಣ ಸಚಿವರ ಜೊತೆ ಮಾತನಾಡುತ್ತೇನೆ. ಕನ್ನಡ ಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕರನ್ನು ನೇಮಿಸಲು ಕ್ರಮಕೈಗೊಳ್ಳುವೆ ಎಂದರು.
ಬೆಳಗಾವಿ: ಕೇಂದ್ರ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಜೊತೆ ರೌಂಡ್ಸ್ ಹೊಡೆದ ಸಾರಿಗೆ ಸಚಿವರು, ಮಹಿಳಾ ಪ್ರಯಾಣಿಕರ ಜೊತೆ ಮಾತನಾಡಿ ಶಕ್ತಿ ಯೋಜನೆಯ ಲಾಭದ ವಿಚಾರಿಸಿದರು. ಕಂಡಕ್ಟರ್ ಹಾಗೂ ಡ್ರೈವರ್ ಜೊತೆಗೂ ಮಾತನಾಡಿದ್ದಾರೆ. ಬಸ್ ನಿಲ್ದಾಣದಲ್ಲಿರುವ ಆರೋಗ್ಯ ಕೇಂದ್ರಕ್ಕೂ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು.
ಬೆಂಗಳೂರು: ನಗರದ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇ ಗೌಡ ಅವರನ್ನು ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ವಿಜಯಪುರ: ಸಚಿವ ಎಂಬಿ ಪಾಟೀಲ್ ವಿರುದ್ಧ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ವಾಗ್ದಾಳಿ ನಡೆಸಿದ ವಿಡಿಯೋ ವೈರಲ್ ಆಗುತ್ತಿದೆ. ನಿನ್ನೆ ಸಂಜೆ ಬಬಲೇಶ್ವರದಲ್ಲಿ ನಡೆದ ಗೋ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನನ್ನುನೀವು ಆಯ್ಕೆ ಮಾಡಿರುವ ಶಾಸಕ ಜೈಲಿಗೆ ಹಾಕುತ್ತೇನೆ ಅಂತಾರೆ. ಅಯ್ಯೋ ಪುಣಾತ್ಮ ಶಿವಾಜಿಯ ವಂಶಸ್ಥರು ನಾವು, ನಾನು ರಾಣಾ ಪ್ರತಾಪರ ವಂಶಸ್ಥ, ನಾನು ಸಾವರ್ಕರ್ ವಂಶಸ್ಥ, ನಾನು ಭಗತಸಿಂಗ್ ಹೆಸರು ಹೇಳಿಕೊಂಡು ಬಂದವನು. ನನ್ನನ್ನ ಜೈಲಿಗೆ ಹಾಕುತ್ತೀರಾ ಎಂದು ವಾಗ್ದಾಳಿ ನಡೆಸಿದ್ದಾರೆ.
ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಲಿ ಎಂದು ಸಚಿವ ಕೆಎನ್ ರಾಜಣ್ಣ ನೀಡಿದ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಅದು ಈಗ ಅಲ್ಲ ಮುಂದಿನ ಅವಧಿಯಲ್ಲಿ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರ ನಂತರ ಎಂದು ಪರೋಕ್ಷವಾಗಿ ಹೇಳಿದರು.
ಈ ತಿಂಗಳು ಆಗಲಿಲ್ಲ ಅಂದ್ರೆ ಮುಂದಿನ ತಿಂಗಳು ಅಕ್ಕಿ ಕೊಡುತ್ತೇವೆ ಎಂದು ತುಮಕೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 10 ಕೆಜಿ ಅಕ್ಕಿ ನೀಡುವಾಗ ತಡವಾಗಬಹುದು. ಆದರೆ 5 KG ಅಕ್ಕಿ ಈಗಾಗಲೇ ನೀಡಲಾಗುತ್ತಿದೆ. ಎಲ್ಲಾ ರಾಜ್ಯಗಳಿಂದ ಹಾಗೂ ಕೇಂದ್ರದ ಸ್ವಾಮ್ಯಗಳಿಂದ ಅಕ್ಕಿ ತರಲು ಪ್ರಯತ್ನ ನಡೆಯುತ್ತಿದೆ ಎಂದರು. 5 ಕೆಜಿ ಜೊತೆ 10 ಕೆಜಿ ಅಕ್ಕಿ ನೀಡುವ ಬಿಜೆಪಿ ವಾದದ ಬಗ್ಗೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ತೆಗೆದು ನೋಡಲಿ 5 ಕೆ.ಜಿ ಸೇರಿಸಿ 10ಕೆಜಿ ಕೊಡುತ್ತೇವೆ ಅಂತ ನಾವು ಚುನಾವಣೆಯಲ್ಲಿ ಹೇಳಿದ್ದಾಗಿ ತಿಳಿಸಿದರು.
ಕೇಂದ್ರ ಸರ್ಕಾರಕ್ಕೆ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಪಟ್ಟಣದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಕಾರ್ಯಕರ್ತರ ಸಭೆ ಆರಂಭಗೊಂಡಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಭೆಗೆ ಚುನಾಯಿತ ಸದಸ್ಯರು, ಪರಾಭವಗೊಂಡ ಸದಸ್ಯರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಬೊಮ್ಮಾಯಿ ಜೊತೆ ಬಸನಗೌಡ ಪಾಟೀಲ್ ಯತ್ನಾಳ್, ಬೈರತಿ ಬಸವರಾಜ, ಬಾಲಚಂದ್ರ ಜಾರಕಿಹೊಳಿ, ಜೊಲ್ಲೆ ದಂಪತಿ, ಅಭಯ ಪಾಟೀಲ್,
ಪಿ ರಾಜೀವ್, ಕುಮಠಳ್ಳಿ ಸೇರಿದಂತೆ ಇನ್ನಿತರರು ಪಾಲಗೊಂಡಿದ್ದಾರೆ.
ಹುಬ್ಬಳ್ಳಿ: ಜಾತಿ ಮೇಲೆ ಮಂತ್ರಿ ಆಗುವ ಪ್ರಸಂಗ ಬಂದರೆ ನಾವು ಮಂತ್ರಿ ಆಗುವುದನ್ನೇ ಬಿಡುತ್ತೇವೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ರೆಡ್ಡಿ ಸಮಾಜದ ನೂತನ ಶಾಸಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಜಾತಿ ಮೇಲೆ ಮಂತ್ರಿ ಕೇಳುವವರಲ್ಲ. ರಾಮಲಿಂಗಾರೆಡ್ಡಿ ಮತ್ತು ನಾನು ಜಾತಿ ಮೇಲೆ ಮಂತ್ರಿ ಆಗಿಲ್ಲ. ನಮ್ಮಲ್ಲಿರುವ ಸಾಮಾರ್ಥ್ಯ, ನಾವು ಮಾಡಿರುವ ಸೇವೆ ನೋಡಿಕೊಂಡು ಸ್ಥಾನ ಮಾನ ಕೊಡಬೇಕು ಎಂದರು.
ಸಿಎಂ ಸ್ಥಾನದ ವಿಚಾರ ಕಾಂಗ್ರೆಸ್ನಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ರೇಸ್ಗೆ ಸತೀಶ್ ಜಾರಕಿಹೊಳಿ ಹೆಸರು ಪ್ರಸ್ತಾಪಿಸಿದ ಸಚಿವ ಕೆಎನ್ ರಾಜಣ್ಣ, ನಮ್ಮ ಸಮಾಜಕ್ಕೆ ಸಿಎಂ ಸ್ಥಾನ ಸಿಗಬೇಕು ಎಂಬುದು ಅಭಿಲಾಷೆ. ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಅನ್ನೋದು ನಮ್ಮ ಆಸೆ ಎಂದು ತುಮಕೂರಿನಲ್ಲಿ ನಡೆದ ವಾಲ್ಮೀಕಿ ಸಮಾಜದ ಕಾರ್ಯಕ್ರಮದಲ್ಲಿ ಹೇಳಿದರು.
ತುಮಕೂರು: SC, ST ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಲೋಕಸಭೆ ಅನುಮೋದಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮೀಸಲಾತಿ ಹೋರಾಟದಲ್ಲಿ ಸ್ವಾಮೀಜಿಗೆ ನಾವೆಲ್ಲರೂ ಬೆಂಬಲ ನೀಡಿದ್ದೆವು. ನಮಗೆ ಪ್ರತ್ಯೇಕ ಸಚಿವಾಲಯ ಆಗಬೇಕೆನ್ನುವುದು ಬಹುದಿನದ ಬೇಡಿಕೆಯಾಗಿದೆ. ಅಧಿವೇಶನ ಸಂದರ್ಭದಲ್ಲಿ ಸಮುದಾಯದವರು ಸಭೆ ಸೇರಿ ಚರ್ಚಿಸೋಣ. ನಮ್ಮ ಸಮುದಾಯದ ಸಮಸ್ಯೆಗಳ ಬಗ್ಗೆ ಸಿಎಂಗೆ ಮನವರಿಕೆ ಮಾಡಿಕೊಡುವೆ. ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಮುದಾಯ ಮುಂದೆ ಬರಬೇಕು. ಡಾ.ಅಂಬೇಡ್ಕರ್ ಹೇಳಿದಂತೆ ನಮ್ಮ ಸಮುದಾಯ ಕೊಡುವ ಕೈ ಆಗಬೇಕು. ಈಗಾಗಲೇ ಮೂರ್ನಾಲ್ಕು ಕಡೆ ಮಠಗಳಿಗಾಗಿ ಜಮೀನು ಖರೀದಿಸಲಾಗಿದೆ ಎಂದರು.
ಬೆಳಗಾವಿ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನಸಭೆ ಚುನಾವಣೆಗೆ ಎನಾಗಿದೆ ಎಲ್ಲರಿಗೂ ಗೊತ್ತು. ಯಾರು ಯಾರನ್ನ ಸೋಲಿಸಲು ಯತ್ನಿಸಿದ್ದಾರೆ ಅಂತಾ ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಭಾವನೆಯನ್ನ ಕೇಳದಿದರೆ ಇದೇ ಗತಿ ಆಗುವುದು. ವಿಜಯಪುರದಲ್ಲಿ ನನ್ನ ಚುನಾವಣೆ ಅಷ್ಟು ಸುಲಭ ಇರಲಿಲ್ಲ. ನನ್ನನ್ನ ಸೋಲಿಸಲು ಬಂದುವರು ಸೋತರು ಅಂತಾ ಪರೋಕ್ಷವಾಗಿ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂದು ಧ್ವನಿಯನ್ನ ಕುಗ್ಗಿಸುವ ಹುನ್ನಾರ ರಾಜ್ಯದಲ್ಲಿ ನಡೆಯುತ್ತಿದೆ. ಸಿಟಿ ರವಿಯವರನ್ನ ಸೋಲಿಸಿದರು, ಸಂತೋಷ್ ಅವರ ಬಗ್ಗೆ ಅಪಪ್ರಚಾರ ಮಾಡಿದರು. ದೇಶ ಉಳಿಯಬೇಕು, ಹಿಂದುಗಳು ಸುರಕ್ಷಿತವಾಗಿ ಇರಬೇಕು ಅಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28ಸ್ಥಾನ ಗೆಲ್ಲಬೇಕು ಎಂದರು.
ಹುಬ್ಬಳ್ಳಿ: ಸಾರಿಗೆ ಇಲಾಖೆಗೆ ಯಾವುದೇ ನಷ್ಟ ಆಗಿಲ್ಲ, ಶಕ್ತಿಯುತವಾಗಿದೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಶಕ್ತಿ ಯೋಜನೆಯಲ್ಲಿ ಕೆಲ ಸಣ್ಣಪುಟ್ಟ ದೋಷಗಳಿವೆ. ಆದರೆ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಒಮ್ಮೆ ಹೋದವರು ಮತ್ತೆ ಹೋಗುವುದಿಲ್ಲ, ಎಲ್ಲ ಸರಿಹೋಗಲಿದೆ. ಸಾರಿಗೆ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕಾಗುತ್ತದೆ. ಪ್ರಯಾಣಿಕರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೂಡ ಸಿಬ್ಬಂದಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಬೆಳಗಾವಿ: ಕೆಎಸ್‌ಆರ್‌ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡೀಸೆಲ್ ಇಲ್ಲದೇ ಬಸ್ಗಳು ನಿಲ್ಲುವ ಸ್ಥಿತಿ ನಿರ್ಮಾಣ ಆಗಲಿದೆ. ಕರ್ನಾಟಕ ಕತ್ತಲಲ್ಲಿ ಮುಳುಗುವ ಸ್ಥಿತಿ ನಿರ್ಮಾಣ ಆಗಲಿದೆ. ಗ್ಯಾರಂಟಿಗೆ ಕಂಡಿಷನ್ ಹಾಕಿದ್ದು ಯಾಕೆ? ಒಂದೇ ತಿಂಗಳಲ್ಲಿ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದ್ದು ಇದೇ ಮೊದಲು. ಮಳೆ ಇಲ್ಲ, ಜಲಾಶಯಗಳಲ್ಲಿ ನೀರು ಇಲ್ಲ ಈ ಬಗ್ಗೆ ಇವರಿಗೆ ಚಿಂತನೆ ಇಲ್ಲ. ಅಕ್ಕಿ ಕೊಟ್ಟಿಲ್ಲ ಎಂದು ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಸರ್ಕಾರದಲ್ಲಿದ್ದುಕೊಂಡು ಇವರು ಪ್ರತಿಭಟನೆ ಮಾಡುತ್ತಿದ್ದಾರೆ. ಅಕ್ಕಿ ಖರೀದಿಯಲ್ಲಿ ಏನಾಗಿದೆ ಎಂಬುದು ನನಗೆ ಗೊತ್ತು. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರ ಬಣ್ಣ ಬಯಲು ಆಗಲಿದೆ. ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಈಗ ಪರ್ಸೆಂಟೇಜ್ ಫಿಕ್ಸ್ ಆಗುತ್ತಿದೆ. ಯಾವ ಯಾವ ಮಂತ್ರಿ ಗುತ್ತಿಗೆದಾರನಿಗೆ ಕರೆದು ಏನ್ ಹೇಳಿದ್ದಾರೆ ಗೊತ್ತು ಎಂದರು.
ಮಳೆಯಿಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಬಾಗಲಕೋಟೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದುವರೆಗೂ ಮಳೆಯಿಲ್ಲದೆ ಬಿತ್ತನೆ ಮಾಡದ ರೈತರು ವರುಣನ ಆಗಮನದಿಂದ ಫುಲ್ ಖುಷ್ ಆಗಿದ್ದಾರೆ.
ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆ ನಡೆಯುತ್ತಿದೆ. ಮೋದಿ 9 ವರ್ಷದ ಆಡಳಿತದಲ್ಲಿನ ಸಾಧನೆ ಬಗ್ಗೆ ಕಾರ್ಯಕ್ರಮದಲ್ಲಿ ಕೊಂಡಾಡಲಾಗುತ್ತಿದೆ. ಮಾಜಿ ಸಿಎಂ ಬೊಮ್ಮಾಯಿ, ಶಾಸಕ ಬಸನಗೌಡ ಪಾಟೀಲ್, ಭೈರತಿ ಬಸವರಾಜ, ಮಾಜಿ ಸಚಿವ ನಿರಾಣಿ, ಶಶಿಕಲಾ ಜೊಲ್ಲೆ, ಸಂಸದರಾದ ರಮೇಶ್ ಜಿಗಜಿಣಗಿ, ಅಣ್ಣಾಸಾಹೇಬ್ ಜೊಲ್ಲೆ, ಮಂಗಳಾ ಅಂಗಡಿ, ಈರಣ್ಣ ಕಡಾಡಿ, ಬಾಲಚಂದ್ರ ಜಾರಕಿಹೊಳಿ, ಅಭಯ್ ಪಾಟೀಲ್ ಸೇರಿ ಮಾಜಿ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಬಾರಿಯೂ ಗೈರಾಗಿದ್ದಾರೆ.
ಗ್ಯಾರಂಟಿ ಯೋಜನೆ ಜಾರಿಗೆ ವಿಳಂಬ ವಿಚಾರಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಹೆಣ್ಣು ಮಕ್ಕಳು ಗ್ಯಾರಂಟಿ ಯೋಜನೆ ನಂಬಿಕೊಂಡು ಕೂತಿದ್ದಾರೆ. ಇವತ್ತಿನ ಪರಿಸ್ಥಿತಿಯಲ್ಲಿ ಅದು ಜಾರಿ ಆಗದೇ, ಅದಕ್ಕೆ ಬರುವ ಸಮಸ್ಯೆ ನೋಡಿ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ. ಜನರಿಗೆ ಗ್ಯಾರಂಟಿ ಯೋಜನೆ ಸಿಗುತ್ತದೆಯೂ, ಇಲ್ಲೋ ಎಂಬ ಬಗ್ಗೆ ನಾನು ಮಾತಾಡೊದ್ಕಿಂತ ಸುಮ್ಮನೆ ಕುಳಿತು ನೋಡೊ ಕೆಲಸ ಮಾಡ್ತೀವಿ. ವೇಟ್ ಆ್ಯಂಡ್ ವಾಚ್ ಮಾಡಿ ಆಮೇಲೆ ಮಾತನಾಡುತ್ತೇವೆ ಎನ್ನುವ ಮೂಲಕ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರು ಕಾಂಗ್ರೆಸ್ಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಸಿಕ್ಕಿ 15 ದಿನ ಕಳೆದಿದೆ. ಆದ್ರೆ ಇನ್ನೂ ಕೂಡ ಮಹಿಳಾ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿಲ್ಲ. ಜೂ.24ರಂದು ಸರ್ಕಾರಿ ಬಸ್ನಲ್ಲಿ ಓಡಾಡಿರುವ ಮಹಿಳೆಯರ ವಿವರ ಹೀಗಿದೆ.
ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೆಲ್ಲುತ್ತಿದೆ. ಆದರೆ ಪಕ್ಷ ನೀಡಿದ ಟಾಸ್ಕ್ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಎರಡರಲ್ಲೂ ಸೋತು ಈಗ ನಿರುದ್ಯೋಗಿ ಆಗಿದ್ದೇನೆ ಎಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.
ಸುಧಾಮ ದಾಸ್ ಪರಿಷತ್ ಆಯ್ಕೆಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಸ್ವತಃ ಸಿಎಂ ಸಿದ್ದರಾಮಯ್ಯರಿಂದಲೇ ಸುಧಾಮ್ ದಾಸ್ ಆಯ್ಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಆದ್ರೆ ಡಿಕೆ ಸುರೇಶ್ , ಸುಧಾಮ್ ದಾಸ್ ಗೆ ಪರಿಷತ್ ಸ್ಥಾನ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
197.27 ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗಿದೆ. ಆದ್ರೆ ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಲೋಕಾರ್ಪಣೆ ಭಾಗ್ಯ ಮಾತ್ರ ಇನ್ನೂ ಸಿಕ್ಕಿಲ್ಲ.
ಬೆಳಗಾವಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೆ ಕೂಡಿಬರದ ಮುಹೂರ್ತ#BelagaviSuperSpecialtyHospital #belagavi #superspecialityhospitalhttps://t.co/0nvksfDRCg
— TV9 Kannada (@tv9kannada) June 25, 2023
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ಪತಿ ತನ್ನ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪತಿ ಶ್ರೀನಿವಾಸ್ ಪತ್ನಿ ಸವಿತಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಸವಿತಾ ಸಹೋದರಿ ಅನಿತಾ ಕಾರಿನ ಮೇಲೂ ದಾಳಿ ನಡೆಸಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆ 2 ವರ್ಷಗಳಿಂದ ಪತಿ, ಪತ್ನಿ ಇಬ್ಬರೂ ದೂರವಾಗಿದ್ದರು. ಆಸ್ತಿ ವಿಚಾರವಾಗಿ ಪತಿ ವಿರುದ್ಧ ಪತ್ನಿ ಸವಿತಾ ಕೇಸ್ ದಾಖಲಿಸಿದ್ದಳು. ಇದೇ ವಿಚಾರದಲ್ಲಿ ನಿನ್ನೆ ಜಗಳ ತೆಗೆದು ಪತ್ನಿ ಮೇಲೆ ಶ್ರೀನಿವಾಸ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಕಾಂಗ್ರೆಸ್ನ ಮಹಾತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ಭವಿಷ್ಯ ಒಂದು ವಾರದಲ್ಲಿ ನಿರ್ಧಾರವಾಗಲಿದೆ. ಮೂರು ಕೇಂದ್ರೀಯ ಸ್ವಾಮ್ಯದ ಸಂಸ್ಥೆಗಳು ಅಕ್ಕಿ ನೀಡಲು ಮುಂದಾಗಿದ್ದು ಇವುಗಳ ನಿರ್ಧಾರದ ಮೇಲೆ ರಾಜ್ಯ ಸರ್ಕಾರ ತನ್ನ ತೀರ್ಮಾನ ಕೈಗೊಳ್ಳಲಿದೆ. ಹೀಗಾಗಿ ಸರ್ಕಾರ ಒಂದು ವಾರಗಳ ಕಾಲ ಸಮಯಾವಕಾಶ ನೀಡಿದೆ. FCI ನೀಡುತ್ತಿದ್ದ ದರಕ್ಕಿಂತ ಈ ಏಜೆನ್ಸಿಗಳ ದರ ಸ್ವಲ್ಪ ಹೆಚ್ಚಳ. FCI ಪ್ರತಿ ಕೆ.ಜಿ ಅಕ್ಕಿಗೆ ಸಾಗಾಣಿಕೆ ವೆಚ್ಚ ಸೇರಿ 36.60 ಪೈಸೆ ನಿಗದಿ ಮಾಡಿತ್ತು. ದರ ಮತ್ತು ಸಾಗಾಣಿಕೆ ವೆಚ್ಚ ಗಮನಿಸಿ ಸರ್ಕಾರ ತೀರ್ಮಾನಕ್ಕೆ ಬರಲಿದೆ. ಸದ್ಯಕ್ಕೆ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅಸಾಧ್ಯ.
ಚಾಕುವಿನಿಂದ ಪತ್ನಿಯ (Wife) ಪ್ರಿಯಕರನ (Lover) ಕತ್ತು ಸೀಳಿ ಪತಿ (Husband) ರಕ್ತ ಕುಡಿದ ಭೀಬತ್ಸ ಕೃತ್ಯ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ. ಬಟ್ಲಹಳ್ಳಿ ನಿವಾಸಿ ವಿಜಯ್ ಕೊಲೆ ಆರೋಪಿ. ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಹಲ್ಲೆಗೊಳಗಾದ ವ್ಯಕ್ತಿ.
ಗದಗ-ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಆದ್ರೆ, ಪೈಪುಗಳು ಒಡೆದು ಎಲ್ಲೆಂದರಲ್ಲಿ ಅಪಾರ ನೀರು ಪೋಲಾಗುತ್ತಿದೆ. ಗದಗ ನಗರದ ಟಿಪ್ಪು ಸುಲ್ತಾನ್ ಸರ್ಕಲ್ ಬಳಿ ಪೈಪುಗಳು ಒಡೆದು ನೀರು ಪೋಲಾಗ್ತಾಯಿದ್ರೂ ನಗರಸಭೆ ಮಾತ್ರ ಈ ಬಗ್ಗೆ ಗಮನಹರಿಸುತ್ತಿಲ್ಲ. ಹೀಗಾಗಿ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.
ಇಂದು ಮಹಾರಾಷ್ಟ್ರಕ್ಕೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನ ಮೂಲಕ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಪ್ರಯಾಣಿಸಲಿದ್ದು ಕೊಲ್ಲಾಪುರದಿಂದ ರಸ್ತೆ ಮೂಲಕ ಸಾಂಗ್ಲಿಗೆ ತೆರಳಿ ಸಾಂಗ್ಲಿಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಬಳಿಕ ಪುಣೆಗೆ ತೆರಳಲಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ತೇರದಾಳ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಟನ್ ಅಕ್ಕಿ ಜಪ್ತಿ ಮಾಡಲಾಗಿದೆ. ಲಾರಿ ತೇರದಾಳ ಮಾರ್ಗವಾಗಿ ಬೆಳಗಾವಿ ಕಡೆಗೆ ಹೊರಟಿತ್ತು. ಸದ್ಯ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗುತ್ತಿದ್ದ ಕೆಎ 25 ಬಿ 1474 ನಂಬರ್ನ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ತೇರದಾಳ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಹೆಣ್ಣುಮಕ್ಕಳ ಪಿಜಿಗೆ ನುಗ್ಗಿ, ಸ್ನಾನ ಮಾಡುತ್ತಿದ್ದ ವಿಡಿಯೋವನ್ನ ಮೊಬೈಲ್ಲ್ಲಿ ಸೆರೆ ಹಿಡಿಯುತ್ತಿದ್ದಂತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಜೂ.21 ರಂದು ಮಹದೇವಪುರ(Mahadevapura) ಹೂಡಿಯಲ್ಲಿರುವ ಪಿಜಿನಲ್ಲಿ ನಡೆದಿದೆ. ಕೂಡಲೇ ಆರೋಪಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.
ಕೈ ಕೊಟ್ಟ ಪೂರ್ವ ಮುಂಗಾರು ಹಿನ್ನೆಲೆ ಮೈಸೂರಿನಲ್ಲಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಹುಣಸೂರು ತಾಲ್ಲೂಕು ಚಿಕ್ಕೇಗೌಡನ ಕೊಪ್ಪಲಿನಲ್ಲಿ ಕಪ್ಪೆಗಳ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಲಾಗಿದೆ. ಎರಡು ಕಪ್ಪೆಗಳನ್ನು ಬಿದಿರಿನ ಬೊಂಬಿಗೆ ಕಟ್ಟಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗಿದೆ.
ಜನಪದ ಹಾಡಿಗೆ ಖಾಸಗಿ ಆಸ್ಪತ್ರೆಯೊಂದರ (Hospital) ಐಸಿಯುನಲ್ಲಿ (ICU) ಬಾಲಕ (Boy) ಡ್ಯಾನ್ಸ್ (Dance) ಮಾಡಿರುವ ವಿಡಿಯೋ (Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜನಪದ ಹಾಡಿಗೆ ಐಸಿಯು ಬೆಡ್ ಮೇಲೆ ಬಾಲಕನ ಡ್ಯಾನ್ಸ್#janapada #Bagalkot #DANCE https://t.co/tV3tGRY2qU
— TV9 Kannada (@tv9kannada) June 25, 2023
Published On - 8:39 am, Sun, 25 June 23