AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಎಚ್ಚರಿಕೆಗೂ ಡೋಂಟ್​​ಕೇರ್​​: ಮೇ 20ರಂದು ಸಾರಿಗೆ ನೌಕರರ ಮುಷ್ಕರ ಖಚಿತ ಎಂದ ಮುಖಂಡರು

ಮೇ 20ರಂದು ಕೆಎಸ್ಆರ್‌ಟಿಸಿ ನೌಕರರ ಮುಷ್ಕರ ಖಚಿತವಾಗಿದೆ. 'ನೋ ವರ್ಕ್ ನೋ ಪೇ' ಮತ್ತು ಶಿಸ್ತು ಕ್ರಮದ ಎಚ್ಚರಿಕೆಗಳ ಹೊರತಾಗಿಯೂ, ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಮುಷ್ಕರ ಕಾನೂನು ಬಾಹಿರ ಎಂದಿರುವ ಕೆಎಸ್ಆರ್‌ಟಿಸಿ ಆಡಳಿತ, ತಾತ್ಕಾಲಿಕ ಚಾಲಕರ ಹಾಗೂ ಖಾಸಗಿ ಬಸ್‌ಗಳ ಮೂಲಕ ಸೇವೆ ನೀಡಲು ಸಿದ್ಧತೆ ನಡೆಸಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.

ಅಧಿಕಾರಿಗಳ ಎಚ್ಚರಿಕೆಗೂ ಡೋಂಟ್​​ಕೇರ್​​: ಮೇ 20ರಂದು ಸಾರಿಗೆ ನೌಕರರ ಮುಷ್ಕರ ಖಚಿತ ಎಂದ ಮುಖಂಡರು
ಕೆಎಸ್​​ಆರ್​​ಟಿಸಿ ಬಸ್​​ಗಳು
ಕಿರಣ್​ ಸೂರ್ಯ
| Edited By: |

Updated on:May 18, 2026 | 5:18 PM

Share

ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಸಂಬಂಧ ಈಗಾಗಲೇ ಕೆಎಸ್​ಆರ್​​ಟಿಸಿ ಖಡಕ್​​ ಎಚ್ಚರಿಕೆ ರವಾನಿಸಿದೆ. ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಷ್ಕರದಲ್ಲಿ ಭಾಗಿಯಾಗದಂತೆ ಕೆಎಸ್ಆರ್​ಟಿಸಿ ಎಂಡಿ ಅಕ್ರಂಪಾಷಾ ಆದೇಶಿಸಿದ್ದಾರೆ. ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಿದ್ದರೂ ಸಾರಿಗೆ ನೌಕರರು ಮಾತ್ರ ಪಟ್ಟು ಬಿಡಲು ನಿರಾಕರಿಸಿದ್ದು,  ಮುಷ್ಕರ ನಡೆಸುವುದು ಖಚಿತ ಎಂದು ತಿಳಿಸಿದ್ದಾರೆ.

‘ನಾವು ಯಾವುದಕ್ಕೂ ಹೆದರುವುದಿಲ್ಲ’

ನಮ್ಮ ಬೇಡಿಕೆ ಈಡೇರಿಸಲೇಬೇಕು, ಸಾರಿಗೆ ಮುಷ್ಕರ ಶುರುವಾದ ಮೇಲೆ ಏನೇನು ಆಗುತ್ತೆ ನೋಡೋಣ. ಸಾರಿಗೆ ನೌಕರರನ್ನು ಅರೆಸ್ಟ್ ಮಾಡಿದ್ರೆ ಬಸ್ ಯಾರು ಓಡಿಸುತ್ತಾರೆ? ಎಸ್ಮಾ ಜಾರಿಯಲ್ಲಿದೆ ಅಂತಾರೆ, ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಬೆಂಗಳೂರಲ್ಲಿ ಸಾರಿಗೆ ನೌಕರರ ಮುಖಂಡ ವಿಜಯ್ ಭಾಸ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ಮೇ 20ರಂದು ಸಾರಿಗೆ ನೌಕರರ ಮುಷ್ಕರ; ಸಿಬ್ಬಂದಿಗೆ ಖಡಕ್​​ ಎಚ್ಚರಿಕೆ ಕೊಟ್ಟ KSRTC

‘ಮುಷ್ಕರಕ್ಕೆ ಕರೆ ನೀಡಿರುವುದು ಕಾನೂನು ಬಾಹಿರ’

ಮತ್ತೊಂದೆಡೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವುದು ಕಾನೂನು ಬಾಹಿರ ಎಂದಿದ್ದಾರೆ. ಈಗಾಗಲೇ ‘ನೋ ವರ್ಕ್ ನೋ ಪೇ’ ಆದೇಶ ಜಾರಿಮಾಡಲಾಗಿದ್ದು, ಸಾರಿಗೆ ಮುಷ್ಕರಕ್ಕೆ ಕರೆ ನೀಡಿದವರ ವಿರುದ್ಧ ಕಾನೂನು ಕ್ರಮ ನಿಶ್ಚಿತ. ಎಲ್ಲಾ ಜಿಲ್ಲೆಗಳ ಎಸ್​ಪಿ, ಆರ್​ಟಿಒಗಳ ಜೊತೆ ಚರ್ಚೆ ಮಾಡಿದ್ದೇವೆ. ಸರ್ಕಾರದ ಸಾಧನಾ ಸಮಾವೇಶಕ್ಕೆ 2,000 ಬಸ್ ಕಳುಹಿಸಲಾಗುತ್ತಿದೆ. ಮೇ 20ರಂದು ರಾಜ್ಯದ ಎಲ್ಲಾ ಡಿಪೋಗಳಿಗೆ ಭದ್ರತೆ ನೀಡಲಾಗುವುದು. ಪೊಲೀಸ್ ಇಲಾಖೆ ಜೊತೆ ಚರ್ಚಿಸಲಾಗಿದ್ದು ಭದ್ರತೆಗೆ ಸೂಚಿಸಲಾಗಿದೆ. ಮುಷ್ಕರದಲ್ಲಿ ಭಾಗಿಯಾಗಲ್ಲವೆಂದು ಸಾರಿಗೆ ಸಿಬ್ಬಂದಿಯಿಂದ ಮುಚ್ಚಳಿಕೆ ಬರೆಸಿಕೊಂಡಿರುವುದರಿಂದ ಸಾರಿಗೆ ಬಸ್ ಸಂಚಾರ ಇರುತ್ತೆ ಎಂದವರು ತಿಳಿಸಿದ್ದಾರೆ.

ಇದರ ಹೊರತಾಗಿಯೂ ಮುಷ್ಕರ ನಡೆದರೆ ನಮ್ಮಲ್ಲಿ 2,000 ತರಬೇತಿನಿರತರು ಇದ್ದಾರೆ. ಸಾರಿಗೆ ಇಲಾಖೆಯ 4 ನಿಗಮಗಳಲ್ಲಿ 5,000 ತರಬೇತಿ ಚಾಲಕರಿದ್ದಾರೆ. ಅವರನ್ನು ನಿಯೋಜಿಸುವ ಮೂಲಕ ಸಾರಿಗೆ ಬಸ್ ಸೇವೆ ನೀಡುತ್ತೇವೆ. ಜೊತೆಗೆ ಖಾಸಗಿ ಬಸ್​ಗಳ ಮಾಲೀಕರ ಸಂಘದ ಜೊತೆಗೂ ಚರ್ಚೆ ಮಾಡಿದ್ದು, ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್​ಗಳನ್ನು ಓಡಿಸ್ತೇವೆ. ನಮ್ಮ ಜೊತೆ ಚರ್ಚೆ ನಡೆಸಲು ಸಾರಿಗೆ ಸಿಬ್ಬಂದಿಗೆ ಮುಕ್ತ ಅವಕಾಶವಿದೆ ಎಂದವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:16 pm, Mon, 18 May 26

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ