ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಚಿರತೆ ಸೆರೆಗೆ ಸೂಚಿಸಿದ್ದಾರೆ.

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ
ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ
Follow us
TV9 Web
| Updated By: Rakesh Nayak Manchi

Updated on:Dec 03, 2022 | 10:52 AM

ಬೆಂಗಳೂರು: ಚಿರತೆ ದಾಳಿ (Leopard attack)ಯಿಂದ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ತಲಾ 15 ಲಕ್ಷ ರೂ. ಪರಿಹಾರ (Compensation) ಘೋಷಿಸಿದ್ದಾರೆ. ನಗರದಲ್ಲಿ ಈ ಬಗ್ಗೆ ಘೋಷಣೆ ಮಾಡಿದ ಅವರು, ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭೀತಿ ಹುಟ್ಟಿಸಿದ ಚಿರತೆ ಸೆರೆಗೆ ಸೂಚನೆ ನೀಡಿದರು. ಚಿರತೆಗಳನ್ನು ಸೆರೆಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ ಎಂದರು.

ಬೆಂಗಳೂರು ನಗರದ ಜನರಿಗೆ ಇಷ್ಟು ದಿನ ರಸ್ತೆ ಗುಂಡಿಗಳ ಚಿಂತೆಯಾಗಿತ್ತು. ಆದರೆ ಈಗ ಸಿಲಿಕಾನ್​ ಸಿಟಿ ಜನರಿಗೆ ಚಿರತೆ ಕಾಟ ಶುರುವಾದಂತ್ತಾಗಿದೆ. ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವಂತಹ ಘಟನೆ ನಡೆದಿದೆ. ಕೆಂಗೇರಿ ಸುತ್ತಮುತ್ತಲಿನ ಜನರು ಚಿರತೆ ದಾಳಿ ಭೀತಿಯಲ್ಲಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಿಂದ ಚಿರತೆಗಳು ಬಂದಿರುವ ಶಂಕೆ ವ್ಯಕ್ತವಾಗಿದೆ. ಮುಖ್ಯರಸ್ತೆಗೆ ನುಗ್ಗಿ ಜಿಂಕೆ ಕೊಂದು ಚಿರತೆ ತಿಂದುಹೋಗಿರುವುದರಿಂದ ಆ ಭಾಗದಲ್ಲಿ ಜನರಲ್ಲಿ ಆತಂಕ ಶುರುವಾಗಿದೆ. 4 ಚಿರತೆಗಳು ಬಂದಿವೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ತುರಹಳ್ಳಿಯಲ್ಲಿ ಒಂದಲ್ಲ ನಾಲ್ಕು ಚಿರತೆಗಳಿವೆ: ಜರನಲ್ಲಿ ಹೆಚ್ಚಿದ ಆತಂಕ

ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕಿನಲ್ಲಿ ಒಂದು ತಿಂಗಳಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ತಾಲೂಕಿನಲ್ಲಿ ಭೀತಿ ಹುಟ್ಟಿಸಿದ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆಯಿಂದ 10 ವಿಶೇಷ ತಂಡಗಳನ್ನು ರಚನೆ ಮಾಡಲಿದೆ. ಮೈಸೂರು ವೃತ್ತ ಸಿಸಿಎಫ್​ ಮಾಲತಿ ಪ್ರಿಯಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಒಂದು ತಂಡದಲ್ಲಿ ಶೂಟರ್​ ಸೇರಿದಂತೆ 7 ಸಿಬ್ಬಂದಿ ಇರಲಿದ್ದಾರೆ. ಚಿರತೆ ಕಂಡಲ್ಲಿ ಶೂಟ್​ ಮಾಡಲು ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಮೈಸೂರು ವೃತ್ತದಲ್ಲಿರುವ ಅರಣ್ಯ ಸಿಬ್ಬಂದಿಗಳ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಆಗಮಿಸಿ ಹೆಜ್ಜೆ ಗುರುತಿನ ಆಧಾರದ ಮೂಲಕ ಚಿರತೆ ವಯಸ್ಸು ಸೇರಿದಂತೆ ಇತರೆ ಮಾಹಿತಿಗಳನ್ನ ಕಲೆ ಹಾಕಲಾಗುತ್ತಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 am, Sat, 3 December 22